ನಾಳೆ ಅಭ್ಯರ್ಥಿಗಳ ಚಿಹ್ನೆ ಹಂಚಿಕೆ
Team Udayavani, Dec 13, 2020, 12:47 PM IST
ಧಾರವಾಡ: ಗ್ರಾಪಂ ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳಿಗೆ ಉಮೇದುವಾರಿಕೆ ಹಿಂಪಡೆಯಲು ನೀಡಿದ ಸಮಯಾವಕಾಶ ಮುಗಿದನಂತರ ಸ್ಪರ್ಧೆ ಇರುವಕ್ಷೇತ್ರಗಳಲ್ಲಿನ ಅಭ್ಯರ್ಥಿಗಳಿಗೆ ಅವರ ಸಮ್ಮುಖದಲ್ಲಿ ಚುನಾವನಾ ಆಯೋಗದ ನಿಯಮಾನುಸಾರ ಡಿ.14ರಂದು ಚುನಾವಣಾಧಿಕಾರಿಗಳು ಚಿಹ್ನೆಗಳನ್ನು ಹಂಚಿಕೆ ಮಾಡುತ್ತಾರೆಂದು ಜಿಲ್ಲಾ ಚುನಾವಣಾಧಿಕಾರಿ ಆಗಿರುವ ಡಿಸಿ ನಿತೇಶ ಪಾಟೀಲ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ರಾಷ್ಟ್ರೀಯ ಪ್ರಾದೇಶಿಕ ಹಾಗೂ ಇತರ ನೋಂದಾಯಿತ ಮಾನ್ಯತೆ ಪಡೆದ ಪಕ್ಷಗಳಿಗೆಈಗಾಗಲೇ ಹಂಚಿಯಾಗಿರುವ ಚಿಹ್ನೆಗಳನ್ನು ಹೊರತುಪಡಿಸಿ ಹಂಚಿಕೆಗೆ ಮುಕ್ತವಾಗಿರುವ ಚಿಹ್ನೆಗಳ ಪೈಕಿ ಯಾವುದಾದರೂ ಒಂದು ಚಿಹ್ನೆಯನ್ನು ಅಭ್ಯರ್ಥಿಗಳು ನಾಮಪತ್ರದಲ್ಲಿ ನಮೂದಿಸಬೇಕು. ಆ ಚಿಹ್ನೆಗಳ ವಿನಃ ಬೇರೆ ಯಾವುದೇ ಚಿಹ್ನೆಯನ್ನು ಯಾವುದೇ ಅಭ್ಯರ್ಥಿಗಳಿಗೆ ನೀಡುವುದಿಲ್ಲ ಎಂದು ಅವರು ಹೇಳಿದ್ದಾರೆ.
ನಿಯಮ 22ರಂತೆ ಅಭ್ಯರ್ಥಿಗಳಿಗೆ ಚಿಹ್ನೆಯನ್ನು ನಾಮಪತ್ರದ ಕ್ರಮಾಂಕ ಅನುಸರಿಸಿಹಂಚಿಕೆ ಮಾಡಲಾಗುತ್ತದೆ. ಆದರೆ ಆ ಮೊದಲು ಯಾವುದೇ ಇಬ್ಬರುಅಭ್ಯರ್ಥಿಗಳು ಒಂದೇ ಚಿಹ್ನೆಯನ್ನು ಕೋರಿದ್ದಾರೆಯೇಎಂಬುದನ್ನು ಪರಿಶೀಲಿಸಿ, ಒಂದುವೇಳೆ ಯಾವುದೇ ಇಬ್ಬರು ಅಥವಾ ಹೆಚ್ಚು ಅಭ್ಯರ್ಥಿಗಳು ಒಂದೇ ಚಿಹ್ನೆಯನ್ನು ಕೋರಿದ್ದಲ್ಲಿ ನಿಯಮ 22(5)(ಎ) ಪ್ರಕಾರ ಯಾರಿಗೆ ಆ ಚಿಹ್ನೆಯನ್ನು ನೀಡಬೇಕೆಂಬುದನ್ನು ಚೀಟಿ ಎತ್ತುವ ಮೂಲಕ ತೀರ್ಮಾನಿಸಲಾಗುತ್ತದೆ. ಉಳಿದಅಭ್ಯರ್ಥಿಗಳಿಗೆ ಅವರು ಕೋರಿದ2ನೆಯ ಅಥವಾ 3ನೆಯ ಚಿಹ್ನೆಯನ್ನು ನಿಯಮ 22 ಅನುಸರಿಸಿ ನೀಡಲಾಗುವುದೆಂದು ವಿವರಿಸಿದ್ದಾರೆ.
ಉಮೇದುವಾರರಿಗೆ ಮಂಜೂರು ಮಾಡಿದ ಚುನಾವಣಾ ಚಿಹ್ನೆಯ ಮಾದರಿ ಪ್ರತಿಯನ್ನು ಸ್ಪರ್ಧಿಸುವ ಅಭ್ಯರ್ಥಿಗೆ ಅಥವಾ ಚುನಾವಣಾ ಏಜಂಟನಿಗೆ ನೀಡಿ ಸ್ವೀಕೃತಿ ಪಡೆಯಲಾಗುತ್ತದೆ. ಯಾವುದೇ ಅಭ್ಯರ್ಥಿ ಹಾಜರಿಲ್ಲದಿದ್ದಲ್ಲಿ ಚುನಾವಣಾಧಿಕಾರಿ ಆ ಅಭ್ಯರ್ಥಿಗೆ ಮಂಜೂರು ಮಾಡಿರುವ ಚಿಹ್ನೆಯ ಬಗ್ಗೆ ನಡವಳಿ ಮಾಡಿ, ಇತರೆ ಅಭ್ಯರ್ಥಿಗಳಿಂದ ಸಹಿ ಪಡೆದುಕೊಳ್ಳುವರು. ಕ್ಷೇತ್ರವಾರು ಅಂತಿಮ ಕಣದಲ್ಲಿರುವಅಭ್ಯರ್ಥಿಗಳ ಪಟ್ಟಿ ತಯಾರಿಸಿಅವರಿಗೆ ಚುನಾವಣಾ ಚಿಹ್ನೆ ಹಂಚಿಕೆಮಾಡುವ ಸಂದರ್ಭದಲ್ಲಿ ಆಯಾ ಕ್ಷೇತ್ರದ ಅಭ್ಯರ್ಥಿಗಳು ಮಾತ್ರ ಹಾಜರಿರಬೇಕು. ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿದ್ದರೆ ಕ್ರಮವಾಗಿ ಒಬ್ಬೊಬ್ಬರನ್ನೇ ಕರೆದು ಅವರಿಗೆ ನಿಯಮವನ್ನನುಸರಿಸಿಚುನಾವಣಾ ಚಿಹ್ನೆ ಹಂಚಿಕೆ ಮಾಡಲಾಗುತ್ತದೆ. ಹೆಚ್ಚಿನಅಭ್ಯರ್ಥಿಗಳು ಒಂದೇ ಚಿಹ್ನೆಯನ್ನು ಕೋರಿರುವ ಸಂದರ್ಭದಲ್ಲಿ ಲಾಟರಿ ಮೂಲಕ ಚಿಹ್ನೆಯನ್ನು ಹಂಚಿಕೆಮಾಡಬೇಕಿರುವುದರಿಂದ ಇಂತಹ ಎಲ್ಲಾ ಅಭ್ಯರ್ಥಿಯನ್ನು ಕರೆದು ಚಿಹ್ನೆ ಹಂಚಿಕೆ ಮಾಡಬಹುದಾಗಿದೆ.
ಕೊಠಡಿಯಲ್ಲಿ ಸೇರುವ ಅಧಿಕಾರಿ ಮತ್ತು ಅಭ್ಯರ್ಥಿಗಳು ಕೋವಿಡ್ ಮುಂಜಾಗೃತಾ ಕ್ರಮಗಳನ್ನು ತಪ್ಪದೇ ಪಾಲಿಸಬೇಕೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
BJP ಡಬಲ್ ಗೇಮ್; ವಕ್ಫ್ ಆಸ್ತಿ ರಕ್ಷಣೆ ಬಗ್ಗೆ ಬಿಜೆಪಿ ಪ್ರಣಾಳಿಕೆಯಲ್ಲಿ ಉಲ್ಲೇಖ: ಸಿದ್ದು
Hubli: ಅಪ್ರಾಪ್ತೆಯೊಂದಿಗೆ ಅನುಚಿತ ವರ್ತನೆ: ಮುಖ್ಯ ಪೇದೆ ವಿರುದ್ದ ಪೋಕ್ಸೋ ಕೇಸ್
Hubli: ಹಣಕಾಸು ಆಯೋಗದ ಅನ್ಯಾಯದ ಬಗ್ಗೆ ಬಿಜೆಪಿಯರಿಂದ ಮೌನ: ಸಿದ್ದರಾಮಯ್ಯ ಕಿಡಿ
Hubli: ಜನರ ದಿಕ್ಕು ತಪ್ಪಿಸಲು ಬಿಜೆಪಿಯಿಂದ ವಕ್ಫ್ ಹೋರಾಟ: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್ ಆಗಲಿದೆ ʼಕಂಗುವʼ
Urwa: ಬಾಯ್ದೆರೆದ ಕಾಂಕ್ರೀಟ್ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.