ಗ್ರಾಮಸ್ಥರ ಹಠದಿಂದ ಗ್ರಾಮಸಭೆ ಮುಂದಕ್ಕೆ

Team Udayavani, Aug 9, 2018, 5:30 PM IST

9-agust-25.jpg

ಲಕ್ಷ್ಮೇಶ್ವರ: ಸಮೀಪದ ಸೂರಣಗಿ ಗ್ರಾಮದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಗ್ರಾಮ ಸಭೆಗೆ ಕೆಲ ಇಲಾಖೆ ಹಿರಿಯ ಅಧಿಕಾರಿಗಳ ಗೈರು ಹಾಜರಿ ಮತ್ತು ಅಸಮರ್ಪಕ ಮಾಹಿತಿಯಿಂದ ಆಕ್ರೋಶಗೊಂಡ ಗ್ರಾಮಸ್ಥರು ಗ್ರಾಮ ಸಭೆ ಕಾಟಾಚಾರಕ್ಕೆ ಮಾಡುವುದು ಬೇಡವೆಂದು ಹಠ ಹಿಡಿದು ಮುಂದೂಡಿದ ಘಟನೆ ನಡೆದಿದೆ.

ನಿಗದಿಯಂತೆ ಬೆಳಗ್ಗೆ ಗ್ರಾಮ ಪಂಚಾಯತ್‌ ಆವರಣದಲ್ಲಿ ಗ್ರಾಮ ಸಭೆ ಆರಂಭವಾಗುತ್ತಿದ್ದಂತೆಯೇ ಗ್ರಾಮದ ಯುವ ಮುಖಂಡರಾದ ಕುಮಾರ ಬೆಟಗೇರಿ, ಮಂಜುನಾಥ ಮೂಲಿಮನಿ, ಬಸವರಾಜ ಮೇಲ್ಮುರಿ ಇನ್ನೂ ಅನೇಕರು, ಸತತ ಬರಗಾಲದ ನಡುವೆಯೂ ಸಾಲಶೂಲ ಮಾಡಿ ಪಾವತಿಸಿದ್ದ ಬೆಳೆ ವಿಮೆ ಹಣ ಇನ್ನೂವರೆಗೂ ಬಂದಿಲ್ಲ. ಇದರಲ್ಲಿ ತಾರತಮ್ಯ ಮತ್ತು ಅನ್ಯಾಯವಾಗಿದೆ. ಕಾರಣವೇನು ಸ್ಪಷ್ಟ ಉತ್ತರ ನೀಡಬೇಕು. ಹೆಸರು ಕೇಂದ್ರ ಪ್ರಾರಂಭವಾಗಿಲ್ಲ ಏಕೆ ಎಂದು ಪ್ರಶ್ನಿಸಿದರು. ಇದಕ್ಕೆ ಉತ್ತರಿಸಲು ಕೃಷಿ ಇಲಾಖೆ ತಾಲೂಕು ಮಟ್ಟದ ಅಧಿಕಾರಿಗಳೇ ಇರಲಿಲ್ಲ. ಇದರಿಂದ ಗ್ರಾಮಸ್ಥರು ಆಕ್ರೋಶಗೊಂಡರು. 

ಬಳಿಕ ಕಂದಾಯ ಇಲಾಖೆಗೆ ಸಂಬಂಧಪಟ್ಟಂತೆ ಉಂಟಾಗಿರುವ ಸಮಸ್ಯೆ ಬಗ್ಗೆ ಕೇಳಲಾದ ಪ್ರಶ್ನೆಗೆ ಬಡ್ನಿ ಗ್ರಾಮದ ಗ್ರಾಮ ಲೆಕ್ಕಾಧಿಕಾರಿ ಸಮಜಾಯಿಸಿ ಉತ್ತರ ನೀಡಲು ಯತ್ನಿಸುತ್ತಿದ್ದಂತೇ ಸೂರಣಗಿ ಗ್ರಾಪಂ ವ್ಯಾಪ್ತಿಗೆ ಸೇರಿದ ಗ್ರಾಮ ಲೆಕ್ಕಾಧಿಕಾರಿಯಿಂದ ಇಲ್ಲಿನ ಜನರಿಗೆ ಯಾವುದೇ ರೀತಿಯ ಕಾರ್ಯಗಳಾಗುತ್ತಿಲ್ಲ. ಕೂಡಲೇ ಅವರನ್ನು ಬದಲಾಯಿಸಬೇಕು ಎಂದು ಆಗ್ರಹಿಸಿದರು.

ಮುಖ್ಯವಾಗಿ ಕೃಷಿ ಮತ್ತು ಕಂದಾಯ ಇಲಾಖೆಗೆ ಸೇರಿರುವ ಸಮಸ್ಯೆಗಳೇ ಸಾಕಷ್ಟಿದ್ದು, ಸಮರ್ಪಕ ಉತ್ತರ ಕೊಡಬೇಕಾದ ತಾಲೂಕು ಮಟ್ಟದ ಅಧಿಕಾರಿಗಳನ್ನು ಸೇರಿಸಿ ಮತ್ತೊಮ್ಮೆ ಸಭೆ ಮಾಡಬೇಕು. ಇಲ್ಲಿಗೆ ಸಭೆ ಮೊಟಕುಗೊಳಿಸಬೇಕು ಎಂದು ಗ್ರಾಮಸ್ಥರು ಹಠ ಹಿಡಿದರು. ಅಧಿಕಾರಿಗಳು ಸಮಾಧಾನ ಮಾಡಲು ಪ್ರಯತ್ನಿಸಿದರೂ ಗ್ರಾಮಸ್ಥರು ಸಭೆಯಿಂದ ಹೊರ ಹೋದ ಹಿನ್ನಲೆಯಲ್ಲಿ ಅನಿವಾರ್ಯವಾಗಿ ನೋಡಲ್‌ ಅಧಿಕಾರಿ ಸಭೆಯನ್ನು ಮುಂದೂಡಿದರು. ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷ ಮತ್ತು ಸದಸ್ಯರು, ವಿವಿಧ ಇಲಾಖೆ ಅಧಿಕಾರಿಗಳು, ಪಿಡಿಒ, ಸಿಬ್ಬಂದಿ ಇದ್ದರು.

ಟಾಪ್ ನ್ಯೂಸ್

E-Khata ಇದ್ದರಷ್ಟೇ ಆಸ್ತಿ ನೋಂದಣಿ: ಸಚಿವ ಕೃಷ್ಣ ಬೈರೇಗೌಡ

E-Khata ಇದ್ದರಷ್ಟೇ ಆಸ್ತಿ ನೋಂದಣಿ: ಸಚಿವ ಕೃಷ್ಣ ಬೈರೇಗೌಡ

illegal sand mining ಸಹಕಾರ ಮಾಡಿರುವ ಆರೋಪ: ಕಾಪು ಎಸ್‌ಐ ಅಮಾನತು

illegal sand mining ಸಹಕಾರ ಮಾಡಿರುವ ಆರೋಪ: ಕಾಪು ಎಸ್‌ಐ ಅಮಾನತು

Kaniyoor: ಮರಳುಗಾರಿಕೆಯ ಬೋಟ್‌ ಅನ್ನು ಕಟ್ಟಿ ಹಾಕಿದರು

Kaniyoor: ಮರಳುಗಾರಿಕೆಯ ಬೋಟ್‌ ಅನ್ನು ಕಟ್ಟಿ ಹಾಕಿದರು

Ullal; ಉಳ್ಳಾಲ: ಹಲ್ಲೆ; ದೂರು-ಪ್ರತಿದೂರು

Ullal; ಉಳ್ಳಾಲ: ಹಲ್ಲೆ; ದೂರು-ಪ್ರತಿದೂರು

Bantwal: ಬಿ.ಸಿ.ರೋಡ್; ರೈಲು ಢಿಕ್ಕಿಯಾಗಿ ವ್ಯಕ್ತಿ ಮೃತ್ಯು

Bantwal: ಬಿ.ಸಿ.ರೋಡ್; ರೈಲು ಢಿಕ್ಕಿಯಾಗಿ ವ್ಯಕ್ತಿ ಮೃತ್ಯು

Sullia: ವಿದ್ಯುತ್‌ ಕಂಬದಿಂದ ಬಿದ್ದಿದ್ದ ವ್ಯಕ್ತಿ ಸಾವು

Sullia: ವಿದ್ಯುತ್‌ ಕಂಬದಿಂದ ಬಿದ್ದಿದ್ದ ವ್ಯಕ್ತಿ ಸಾವು

ಕುಲಕಸುಬನ್ನು ಉಳಿಸಿ ಬೆಳೆಸಬೇಕಿದೆ: ಕಾಳಹಸ್ತೇಂದ್ರ ಶ್ರೀ

Barkur Shri Kallikamba Temple: ಕುಲಕಸುಬನ್ನು ಉಳಿಸಿ ಬೆಳೆಸಬೇಕಿದೆ: ಕಾಳಹಸ್ತೇಂದ್ರ ಶ್ರೀ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

bellad

Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನ‌ಪ್ಪನವರ ವಿರುದ್ದ ಬೆಲ್ಲದ್‌ ಟೀಕೆ

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

11-kundagol’

Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

E-Khata ಇದ್ದರಷ್ಟೇ ಆಸ್ತಿ ನೋಂದಣಿ: ಸಚಿವ ಕೃಷ್ಣ ಬೈರೇಗೌಡ

E-Khata ಇದ್ದರಷ್ಟೇ ಆಸ್ತಿ ನೋಂದಣಿ: ಸಚಿವ ಕೃಷ್ಣ ಬೈರೇಗೌಡ

illegal sand mining ಸಹಕಾರ ಮಾಡಿರುವ ಆರೋಪ: ಕಾಪು ಎಸ್‌ಐ ಅಮಾನತು

illegal sand mining ಸಹಕಾರ ಮಾಡಿರುವ ಆರೋಪ: ಕಾಪು ಎಸ್‌ಐ ಅಮಾನತು

Kaniyoor: ಮರಳುಗಾರಿಕೆಯ ಬೋಟ್‌ ಅನ್ನು ಕಟ್ಟಿ ಹಾಕಿದರು

Kaniyoor: ಮರಳುಗಾರಿಕೆಯ ಬೋಟ್‌ ಅನ್ನು ಕಟ್ಟಿ ಹಾಕಿದರು

Ullal; ಉಳ್ಳಾಲ: ಹಲ್ಲೆ; ದೂರು-ಪ್ರತಿದೂರು

Ullal; ಉಳ್ಳಾಲ: ಹಲ್ಲೆ; ದೂರು-ಪ್ರತಿದೂರು

Bantwal: ಬಿ.ಸಿ.ರೋಡ್; ರೈಲು ಢಿಕ್ಕಿಯಾಗಿ ವ್ಯಕ್ತಿ ಮೃತ್ಯು

Bantwal: ಬಿ.ಸಿ.ರೋಡ್; ರೈಲು ಢಿಕ್ಕಿಯಾಗಿ ವ್ಯಕ್ತಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.