ಅತಿಥಿ ಉಪನ್ಯಾಸಕರು-ಶಿಕ್ಷಕರ ಸಂಕಷ್ಟಕ್ಕೆ ಸ್ಪಂದಿಸಲು ಒತ್ತಾಯ
Team Udayavani, Jun 11, 2020, 10:25 AM IST
ಸಾಂದರ್ಭಿಕ ಚಿತ್ರ
ಹುಬ್ಬಳ್ಳಿ: ರಾಜ್ಯದಲ್ಲಿನ ಅತಿಥಿ ಉಪನ್ಯಾಸಕರು, ಶಿಕ್ಷಕರು ಹಲವು ಸಮಸ್ಯೆಗಳನ್ನು ಎದುರಿಸುತ್ತ ತೀವ್ರ ಸಂಕಷ್ಟದಲ್ಲಿದ್ದು, ರಾಜ್ಯ ಸರಕಾರ ಕೂಡಲೇ ನೆರವಿಗೆ ಧಾವಿಸಬೇಕೆಂದು ಕರ್ನಾಟಕ ರಾಜ್ಯ ಅತಿಥಿ ಉಪನ್ಯಾಸಕರು, ಶಿಕ್ಷಕರ ವೇದಿಕೆ ಒತ್ತಾಯಿಸಿದೆ.
ಅತಿಥಿ ಉಪನ್ಯಾಸಕರಿಗೆ ಸಮರ್ಪಕವಲ್ಲದ ವೇತನ ನೀಡಲಾಗುತ್ತಿದೆ. ಅಲ್ಲದೆ ಯಾವುದೇ ಕನಿಷ್ಟ ಸೌಲಭ್ಯಗಳು ಇಲ್ಲ. ಇಪಿಎಫ್ ಅನ್ನು ಶಿಕ್ಷಣ ಸಂಸ್ಥೆಗಳು ನೀಡುತ್ತಿಲ್ಲ. ವಯೋಮಿತಿ ಮೀರಿದ ಹಾಗೂ ಮೀರುತ್ತಿರುವ ಅತಿಥಿ ಉಪನ್ಯಾಸಕರಿಗೆ, ಶಿಕ್ಷಕರಿಗೆ ಸೇವಾ ಭದ್ರತೆ ಇಲ್ಲ ಸೇರಿದಂತೆ ಅನೇಕ ಸಮಸ್ಯೆಗಳ ಸುಳಿಯಲ್ಲಿ ಅತಿಥಿ ಉಪನ್ಯಾಸಕರು, ಶಿಕ್ಷಕರು ಸಿಲುಕಿದ್ದಾರೆ. ಇಂತಹುಗಳ ನಡುವೆ ಮಹಾಮಾರಿ ಕೋವಿಡ್ ಹಾವಳಿಯಿಂದ ಕಳೆದೆರಡು ತಿಂಗಳಿಂದ ವೇತನವಿಲ್ಲ. ಅಲ್ಲದೇ ಮುಂದಿನ ಮೂರು ತಿಂಗಳವರೆಗೂ ವೇತನ ಸಿಗುವ ಭರವಸೆ ಇಲ್ಲದಾಗಿದೆ. ಈ ನಿಟ್ಟಿನಲ್ಲಿ ಅತಿಥಿ ಉಪನ್ಯಾಸಕರು, ಶಿಕ್ಷಕರು ಕೆಲಸ ಮಾಡುತ್ತಿರುವ ಶಿಕ್ಷಣ ಸಂಸ್ಥೆಗಳು ಗಮನ ಹರಿಸಿಲ್ಲ. ಕೇಂದ್ರ ಸರಕಾರ ರೂಪಿಸಿರುವ 20 ಲಕ್ಷ ಕೋಟಿ ರೂ. ಪ್ಯಾಕೇಜ್‌ನಲ್ಲಿಯೂ ಕೂಡ ಅತಿಥಿ ಉಪನ್ಯಾಸಕರ, ಶಿಕ್ಷಕರ ಸ್ಥಿತಿ ಸುಧಾರಿಸುವ ಅಂಶಗಳಿಗೆ ಆದ್ಯತೆ ನೀಡಿಲ್ಲ. ಆದ್ದರಿಂದ ರಾಜ್ಯ ಸರಕಾರ ತಕ್ಷಣವೇ ಅತಿಥಿ ಉಪನ್ಯಾಸಕರು ಹಾಗೂ ಶಿಕ್ಷಕ ಕಲ್ಯಾಣಕ್ಕಾಗಿ ಕಾರ್ಯಯೋಜನೆ ರೂಪಿಸಿ ಅನುಷ್ಠಾನಗೊಳಿಸಬೇಕು. ಇಲ್ಲವಾದರೆ ಹೋರಾಟ ಅನಿವಾರ್ಯವಾಗುತ್ತದೆ ಎಂದು ವೇದಿಕೆ ಅಧ್ಯಕ್ಷ ಶೇಖರ ಸುಂಕದ, ಉಪಾಧ್ಯಕ್ಷ ವೀರನಬಸನಗೌಡ ಎಂ.ಬಿ., ಕಾರ್ಯದರ್ಶಿ ಪ್ರೊ| ಟಿ.ಬಿ. ದೇಸಾಯಿ ಆಗ್ರಹಿಸಿದ್ದಾರೆ.
ಹುಬ್ಬಳ್ಳಿ ನವನಗರದಲ್ಲಿ ಅಸ್ತಿತ್ವಕ್ಕೆ ಬಂದಿರುವ ಕರ್ನಾಟಕ ರಾಜ್ಯ ಅತಿಥಿ ಉಪನ್ಯಾಸಕರ/ಶಿಕ್ಷಕರ ವೇದಿಕೆ ಸದಸ್ಯತ್ವ ಅಭಿಯಾನ ಆರಂಭವಾಗಿದ್ದು, ರಾಜ್ಯದ ಅತಿಥಿ ಉಪನ್ಯಾಸಕರು, ಶಿಕ್ಷಕರು ಸದಸ್ಯತ್ವ ಪಡೆದುಕೊಳ್ಳಬೇಕು. ಹೆಚ್ಚಿನ ಮಾಹಿತಿಗೆ ಶೇಖರ ಸುಂಕದ(9945629809), ಪ್ರೊ|ಟಿ.ಬಿ. ದೇಸಾಯಿ (8050649099) ಅವರನ್ನು ಸಂಪರ್ಕಿಸಬೇಕೆಂದು ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ
Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್
Hubli: ಕ್ರಿಮಿನಲ್ ಜತೆಯೇ ಪೊಲೀಸ್ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್ ಕಾರ್ಯಾಚರಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.