Hubli; ಸರಕಾರ ಮಾಡಿರುವ ಸ್ಥಿರಾಸ್ತಿಗಳ ಮಾರ್ಗಸೂಚಿ ದರ ಹೆಚ್ಚಳ ಸರಿಯಾಗಿದೆ; ಕೃಷ್ಣ ಬೈರೇಗೌಡ
Team Udayavani, Sep 14, 2023, 2:02 PM IST
ಹುಬ್ಬಳ್ಳಿ: ಸರಕಾರ ಮಾಡಿರುವ ಸ್ಥಿರಾಸ್ತಿಗಳ ಮಾರ್ಗಸೂಚಿ ದರ ಹೆಚ್ಚಳ ಸರಿಯಾಗಿದ್ದು, ಮಾರುಕಟ್ಟೆ ಮೌಲ್ಯಕ್ಕೆ ಹೋಲಿಸಿದರೆ ಶೇ.1000 ದಿಂದ 2000 ವ್ಯತ್ಯಾಸವಿದೆ. ಸರಕಾರ ಕೈಗೊಂಡಿರುವ ಕ್ರಮದಿಂದ ಬ್ಲಾಕ್ ಮನಿ ತಪ್ಪಲಿದೆ. ಮಾರಾಟ ಮಾಡುವವರಿಗೆ ಅನ್ಯಾಯವಾಗುವುದಿಲ್ಲ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಐದು ವರ್ಷಗಳಿಂದ ಇದು ಹೆಚ್ಚಳವಾಗಿರಲಿಲ್ಲ. ಹೆಚ್ಚಳದಿಂದ ಸರಕಾರಕ್ಕೆ ಆದಾಯ ಎನ್ನುವುದಕ್ಕಿಂತ ಮಿಗಿಲಾಗಿ ಆಗುತ್ತಿದ್ದ ಶೋಷಣೆ ತಡೆಯುವುದಾಗಿದೆ. ಮಾರುಕಟ್ಟೆ ದರ ಮೌಲ್ಯಕ್ಕೆ ಹೋಲಿಸಿದರೆ ಸರಕಾರದ ಮಾರ್ಗಸೂಚಿದರ ಸಾಕಷ್ಟು ಕಡಿಮೆಯಿತ್ತು. ಕಡಿಮೆಯಿದ್ದರೆ ಕೊಳ್ಳುವವರಿಗೆ ಅನುಕೂಲವಾಗಲಿದೆ ಎಂಬುದು ಸರಿಯಾದರೂ ಮಾರುಕಟ್ಟೆ ದರಕ್ಕೆ ಮಾರಾಟ ಮಾಡಿ ಉಳಿದ ಹಣವನ್ನು ನಗದು ರೀತಿಯಲ್ಲಿ ಪಡೆಯುತ್ತಿದ್ದಾರೆ. ಇದು ಎಲ್ಲರಿಗೂ ಗೊತ್ತಿರುವ ವಿಚಾರ ಎಂದರು.
ರೈತರ ಭೂಮಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಸ್ವಾಧಿನಪಡಿಸಿಕೊಂಡಾಗ ಅವರಿಗೆ ಪರಿಹಾರ ನಿಗದಿ ಮಾಡುವುದು ಸರಕಾರದ ಮಾರ್ಗಸೂಚಿ ದರದ ಪ್ರಕಾರ. ಆಗ ರೈತರಿಗೆ ಅನ್ಯಾಯವಾಗುತ್ತದೆ. ಇನ್ನೂ ಕೆಲವರು ಇದೇ ಮಾರ್ಗ ಸೂಚಿದರದಂತೆ ಆಸ್ತಿ ಖರೀದಿಸಿ ಮಾರುಕಟ್ಟೆ ದರಕ್ಕೆ ಮಾರಾಟ ಮಾಡುತ್ತಾರೆ. ಇದರಿಂದ ಮಾರಾಟ ಮಾಡುವವರಿಗೆ ಅನ್ಯಾವಾಗುತ್ತದೆ. ಈಗಿರುವ ಮಾರುಕಟ್ಟೆ ದರಕ್ಕೆ ಮಾರ್ಗಸೂಚಿ ದರ ಸಾಧ್ಯವಿಲ್ಲ. ಕನಿಷ್ಠ ಪಕ್ಷ ಒಂದಿಷ್ಟು ವ್ಯತ್ಯಾಸ ಕಡಿಮೆ ಮಾಡಬಹುದಾಗಿದೆ. ಈ ಎಲ್ಲಾ ಅಂಶಗಳನ್ನು ನೋಡಿದಾಗ ಸರಕಾರ ಕೈಗೊಂಡಿರುವ ನಿರ್ಧಾರ ಸರಿಯಿದೆ. ಒಂದು ವೇಳೆ ಮಾರುಕಟ್ಟೆ ದರಕ್ಕಿಂತ ಹೆಚ್ಚಾಗಿದ್ದರೆ ಕಡಿಮೆ ಮಾಡಲು ಸೂಚಿಸಿದ್ದೇನೆ ಎಂದರು.
ಕೇಂದ್ರ ಸರ್ಕಾರದ ಮಾನದಂಡಗಳ ಪ್ರಕಾರ ರಾಜ್ಯದಲ್ಲಿ ಬರಗಾಲ ಘೋಷಣೆ ಅಸಾಧ್ಯವಾಗಿದೆ. ಆದರಿಂದ ಮಾನದಂಡಗಳ ಬದಲಾಯಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಳೆದ ಒಂದು ತಿಂಗಳ ಹಿಂದೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಅಷ್ಟಾದರೂ ರಾಜ್ಯದಲ್ಲಿ 195 ತಾಲೂಕುಗಳ ಸಮೀಕ್ಷೆ ಮಾಡಿ ಬರ ಘೋಷಿಸಬಹುದು. ಅದರಲ್ಲಿ 162 ತೀವ್ರ ಬರಗಾಲ ತಾಲೂಕು, 34 ಸಾಧಾರಣ ಬರ ಪೀಡಿತ ತಾಲೂಕುಗಳಾಗಿದ್ದು, ಕೇಂದ್ರ ಸರ್ಕಾರದ ಮಾನದಂಡ ಪ್ರಕಾರ ಘೋಷಣೆ ಅಸಾಧ್ಯವಾದರೂ ಸಹ ವರದಿ ನೀಡಲಾಗಿದೆ. ಕೇಂದ್ರ ಸರ್ಕಾರ ಇವುಗಳನ್ನು ಮಾಡಬೇಕು ಎಂಬುದು ನಮ್ಮ ಆಗ್ರಹವಾಗಿದೆ. ಅಷ್ಟೇ ಅಲ್ಲದೆ ತಿಂಗಳ ಕೊನೆಯಲ್ಲಿ ಮತ್ತೆ ಸರ್ವೇ ಪ್ರಕ್ರಿಯೆ ಮತ್ತೆ ಆರಂಭಿಸಿ ಉಳಿದ ತಾಲೂಕುಗಳನ್ನು ಸೇರಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Rohit Sharma; ಮುಗಿಯಿತಾ ರೋಹಿತ್ ಕ್ರಿಕೆಟ್ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?
Channapatna; ನ್ಯೂಇಯರ್ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.