ರೈತರ ಬದುಕಿಗೆ ಬರೆ ಎಳೆದ ಆಲಿಕಲ್ಲು ಮಳೆ
Team Udayavani, Apr 20, 2018, 5:10 PM IST
ಹುಬ್ಬಳ್ಳಿ: ಬರದ ಛಾಯೆ ನಡುವೆಯೇ ಅಷ್ಟು ಇಷ್ಟು ನೀರಾವರಿ ವ್ಯವಸ್ಥೆಯಿಂದ ಬೆಳೆದಿದ್ದ ಭತ್ತ, ದ್ರಾಕ್ಷಿ ಇನ್ನಿತರ ಬೆಳೆ ಇತ್ತೀಚೆಗೆ ಬಿದ್ದ ಆಲಿಕಲ್ಲು ಮಳೆಯಿಂದ ಹಾನಿಗೀಡಾಗಿದೆ. ಈಗಾಗಲೇ ಸಂಕಷ್ಟದಲ್ಲಿರುವ ಅನ್ನದಾತನ ಬದುಕಿಗೆ ಆಲಿಕಲ್ಲು ಮಳೆ ಬರೆ ಎಳೆದಿದೆ.
ಇತ್ತೀಚೆಗೆ ಬಿದ್ದ ಮಳೆ ಹಾಗೂ ಆಲಿಕಲ್ಲು ಮಳೆಯಿಂದಾಗಿ ರಾಯಚೂರು, ವಿಜಯಪುರ, ಬಾಗಲಕೋಟೆ, ಯಾದಗಿರಿ ಇನ್ನಿತರ ಜಿಲ್ಲೆಗಳಲ್ಲಿ ಕೊಯ್ಲಿಗೆ ಬಂದಿದ್ದ ಭತ್ತ, ದ್ರಾಕ್ಷಿ ಇನ್ನಿತರ ಬೆಳೆಗಳು ಹಾನಿಗೀಡಾಗಿವೆ. ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾದ ಸ್ಥಿತಿ ರೈತರದ್ದಾಗಿದೆ.
ಒಂದು ವಾರ ಆಲಿಕಲ್ಲು ಮಳೆ ವಿಳಂಬವಾಗಿದ್ದರೂ ಸಾಕಾಗಿತ್ತು. ಭತ್ತದ ಕೊಯ್ಲು ಆಗಿ ರೈತರ ಕೈಗೆ ಬೆಳೆ ದಕ್ಕುತ್ತಿತ್ತು. ಇನ್ನೊಂದು ಕಡೆ ಉತ್ತಮ ಫಸಲು ಕಂಡಿದ್ದ ದ್ರಾಕ್ಷಿ ಕೂಡ ಕೈಗೆ ದಕ್ಕದಾಗಿದೆ. ಅಕಾಲಿಕ ಮಳೆಯ ಹೊಡೆತಕ್ಕೆ ರೈತರು ಕಂಗಾಲಾಗಿದ್ದಾರೆ.
2-3 ಸಾವಿರ ಎಕರೆ ಭತ್ತ ಹಾನಿ?: ರಾಯಚೂರು, ಕೊಪ್ಪಳ, ಬಳ್ಳಾರಿ, ಯಾದಗಿರಿ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಭತ್ತ ಪ್ರಮುಖ ಬೆಳೆಯಾಗಿ ಗುರುತಿಸಿಕೊಂಡಿದೆ. ಕೇವಲ ರಾಯಚೂರು-ಕೊಪ್ಪಳ ಜಿಲ್ಲೆಗಳಲ್ಲಿಯೇ ಸುಮಾರು 5-6 ಲಕ್ಷ ಎಕರೆಪ್ರದೇಶದಲ್ಲಿ ಭತ್ತ ಬೆಳೆಯಲಾಗುತ್ತದೆ. ಕೆಲವು ವರ್ಷಗಳಿಂದ ನೀರಾವರಿ ಸೌಲಭ್ಯ ಪಡೆದ ಯಾದಗಿರಿ ಜಿಲ್ಲೆಯ ಸುರಪುರ, ಶಹಾಪುರ ತಾಲೂಕುಗಳಲ್ಲಿಯೂ ಭತ್ತದ ಬೆಳೆ ವಿಸ್ತರಣೆ ಕಂಡಿದೆ.
ರಾಯಚೂರು, ಕೊಪ್ಪಳ, ಬಳ್ಳಾರಿ ಜಿಲ್ಲೆಗಳಲ್ಲಿ ತುಂಗಭದ್ರಾ ಜಲಾಶಯ ನಂಬಿಕೊಂಡು ಭತ್ತ ಕೃಷಿ ಕೈಗೊಳ್ಳಲಾಗುತ್ತಿದೆ. ಈ ಬಾರಿ ನೀರಿನ ಕೊರತೆಯಿಂದ ಹಿಂಗಾರು ಹಂಗಾಮಿಗೆ ಭತ್ತ ನಾಟಿ ಬೇಡ ಎಂಬ ಸೂಚನೆ ನಡುವೆಯೂ ಅನೇಕ ರೈತರು ತಮ್ಮ ಹೊಲಗಳಲ್ಲಿ ಕೆರೆಗಳನ್ನು ಮಾಡಿಕೊಂಡು ಬಿಟ್ಟ ನೀರು ಸಂಗ್ರಹಿಸಿ ಭತ್ತ ಬೆಳೆದಿದ್ದರು.
ಇತ್ತೀಚೆಗೆ ಬಿದ್ದ ಆಲಿಕಲ್ಲು ಮಳೆಯಿಂದ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಹಂಚಿನಾಳ, ಹಂಚಿನಾಳ ಕ್ಯಾಂಪ್, ಬಸವಣ್ಣ ಕ್ಯಾಂಪ್, ಗೊರೆಬಾಳ, ಅಂಬಾಮಠ ವ್ಯಾಪ್ತಿಯಲ್ಲಿ ಕೊಯ್ಲಿಗೆ ಸಿದ್ಧವಾಗಿದ್ದ ಭತ್ತದ ಬೆಳೆ ಹಾಗೂ ಕೊಯ್ಲು ಮಾಡಿದ್ದ ಭತ್ತ ಹಾನಿಗೀಡಾಗಿದೆ.
ಕೆಲ ರೈತರ ಪ್ರಕಾರ ಸುಮಾರು 2,000 ರಿಂದ 2,500ಎಕರೆಯಷ್ಟು ಭತ್ತದ ಬೆಳೆ ಹಾನಿಗೀಡಾಗಿದೆ ಎಂದು ಹೇಳಲಾಗುತ್ತಿದೆ. ಅದೇ ರೀತಿ ಯಾದಗಿರಿ ಜಿಲ್ಲೆಯ ಶಹಾಪುರ, ಸುರಪುರ ತಾಲೂಕಿನ ಹಲವು
ಹಳ್ಳಿಗಳಲ್ಲಿ ಬೆಳೆದು ನಿಂತ ಭತ್ತದ ಬೆಳೆ ಹಾನಿಗೀಡಾಗಿದೆ.
ಐವತ್ತರಿಂದ ಹತ್ತಿಪ್ಪತ್ತು ಚೀಲಕ್ಕೆ: ಸಿಂಧನೂರು ತಾಲೂಕಿನಲ್ಲಿ ಆಲಿಕಲ್ಲು ಮಳೆ ಬಾರದಿದ್ದರೆ ಎಕರೆಗೆ ಸುಮಾರು 45-50 ಚೀಲ ಭತ್ತ ಬರುತ್ತಿತ್ತು. ಆದರೆ ಆಲಿಕಲ್ಲು ಮಳೆ ಹಾಗೂ ಗಾಳಿಯಿಂದ ಕೊಯ್ಲಿಗೆ ಬಂದ ಭತ್ತ ನೆಲಕ್ಕೆ ಮಲಗಿದೆ. ಇದರಿಂದಾಗಿ ಇದೀಗ ಎಕರೆಗೆ 10-20 ಚೀಲ ಬರುವುದು ಕಷ್ಟವಾಗಿದೆ.
ಒಂದು ಎಕರೆಗೆ ಸುಮಾರು 30-35 ಸಾವಿರ ರೂ.ವೆಚ್ಚ ಬಂದಿದ್ದು, ಎಕರೆಗೆ 45-50 ಚೀಲ ಬಂದಿದ್ದರೆ ವೆಚ್ಚ ಕಳೆದು ಒಂದಿಷ್ಟು ಆದಾಯ ಬರುತ್ತಿತ್ತು. ಇದೀಗ ವೆಚ್ಚ ಮಾಡಿದ ಹಣವೂ ಕೈಗೆ ದಕ್ಕದ ಸ್ಥಿತಿ ಇದೆ. ಅದೇ ರೀತಿ ಭತ್ತದ ಹುಲ್ಲು ನೀರಿಗೆ ಬಿದ್ದಿದ್ದರಿಂದ ಜಾನುವಾರುಗಳಿಗೆ ಮೇವು ಇಲ್ಲದ ಸ್ಥಿತಿ ನಿರ್ಮಾಣವಾಗಲಿದೆ ಎಂಬುದು ರೈತರ ಅಳಲು.
ದ್ರಾಕ್ಷಿ ಹಾನಿ: ವಿಜಯಪುರ ಜಿಲ್ಲೆಯಲ್ಲಿ ಬೆಳೆದ ದ್ರಾಕ್ಷಿ ಬೆಳೆ ಆಲಿಕಲ್ಲು ಮಳೆಗೆ ಹಾನಿಗೀಡಾಗಿದೆ. ತಿಕೋಟಾ, ಬಬಲೇಶ್ವರ, ವಿಜಯಪುರ, ಚಡಚಣ ಪ್ರದೇಶದಲ್ಲಿ ದ್ರಾಕ್ಷಿ ಬೆಳೆ ಹೆಚ್ಚಿನ ಪ್ರಮಾಣದಲ್ಲಿ ಹಾನಿಗೀಡಾಗಿದ್ದರೆ, ನಿಡಗುಂದಿ ಹಾಗೂ ಕೊರ್ತಿ-ಕೊಲ್ಹಾರ ಪ್ರದೇಶದ ಕೆಲವು ಭಾಗಗಳಲ್ಲಿ ದ್ರಾಕ್ಷಿ ಬೆಳೆ ಸ್ವಲ್ಪ ಪ್ರಮಾಣದಲ್ಲಿ ಹಾನಿಗೀಡಾಗಿದೆ.
ಉತ್ತಮ ಬೆಳೆಯ ನಿರೀಕ್ಷೆಯಲ್ಲಿದ್ದ ಭತ್ತ ಹಾಗೂ ದ್ರಾಕ್ಷಿ ಬೆಳೆಗಾರರು ಇದೀಗ ಪರಿತಪಿಸುವಂತಾಗಿದ್ದು, ಪರಿಹಾರದ ನಿರೀಕ್ಷೆಯಲ್ಲಿದ್ದಾರೆ.
ಇನ್ನೊಂದು ವಾರ ತಡವಾಗಿದ್ದರೂ ಭತ್ತದ ಕೊಯ್ಲು ಆಗಿ ಭತ್ತ ಮನೆ ಸೇರುತ್ತಿತ್ತು. ದಿಢೀರ್‌ನೆ ಸುರಿದ ಆಲಿಕಲ್ಲು
ಮಳೆ ಬೆಳೆ ಹಾನಿ ಮಾಡಿದೆ. ಕೆಲ ದಿನಗಳ ಹಿಂದೆಯಷ್ಟೇ 75ಕೆ.ಜಿ. ತೂಕದ ಚೀಲದ ಭತ್ತಕ್ಕೆ ಸುಮಾರು 1,400-1,500ರೂ. ನಷ್ಟು ಇದ್ದ ಬೆಲೆ ಇದೀಗ 1,000-1,150ರೂ.ಗೆ ಇಳಿದಿದೆ. ರೈತರಿಗೆ ಒಂದು ಕಡೆ ಬೆಳೆ ನಷ್ಟ,
ಇನ್ನೊಂದು ಕಡೆ ಬೆಲೆ ಕುಸಿತದ ಸಂಕಷ್ಟ ಎದುರಾಗಿದೆ.
ಸಂತೋಷ ಪಾಟೀಲ, ಹಂಚಿನಾಳ ರೈತ.
ಅಮರೇಗೌಡ ಗೋನವಾರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
ಹೊಸ ವರ್ಷದ ಕೊಡುಗೆ: ಬೈಸಿಕಲ್ ಉತ್ತೇಜನಕ್ಕೆ ಉಚಿತ ರೈಡ್
Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ
Hubballi: ಹಳೇ ವೈಷಮ್ಯದಿಂದ ಸಹಚರರೊಂದಿಗೆ ಸೇರಿ ಹಲ್ಲೆ; ವ್ಯಕ್ತಿ ಮೃತ್ಯು
Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijay Hazare; ವಾಸುಕಿ,ಗೋಪಾಲ್ ಬೊಂಬಾಟ್ ಬೌಲಿಂಗ್; ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Gangolli: ಪಂಚಾಯತ್‌ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.