ನಾಳೆಯಿಂದ ಜಿಲ್ಲಾದ್ಯಂತ ಆರೋಗ್ಯ ಮೇಳ
ಏ.18ರಿಂದ 28ರವರೆಗೆ ಜಿಲ್ಲಾದ್ಯಂತ ಆರೋಗ್ಯ ಮೇಳ
Team Udayavani, Apr 17, 2022, 10:46 AM IST
ಧಾರವಾಡ: ಸ್ವಾತಂತ್ರ್ಯ ಅಮೃತ ಮಹೋತ್ಸವ ಹಾಗೂ ಆಯುಷ್ಮಾನ ಭಾರತ ನಾಲ್ಕನೇ ವರ್ಷದ ಅಂಗವಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಏ.18ರಿಂದ 28ರವರೆಗೆ ಜಿಲ್ಲಾದ್ಯಂತ ಆರೋಗ್ಯ ಮೇಳವನ್ನು ಆಯೋಜಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಶಿವಾನಂದ ಭಜಂತ್ರಿ ಹೇಳಿದರು.
ಡಿಸಿ ಕಚೇರಿಯಲ್ಲಿ ನಡೆದ ಆರೋಗ್ಯ ಮೇಳದ ಪೂರ್ವಸಿದ್ಧತಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯ 5 ತಾಲೂಕು ಕೇಂದ್ರಗಳಲ್ಲಿ ನಡೆಯಲಿರುವ ಆರೋಗ್ಯ ಮೇಳದಲ್ಲಿ ಸಾರ್ವಜನಿಕರಿಗೆ ಆರೋಗ್ಯ ತಪಾಸಣೆ, ರೋಗ ಪತ್ತೆ, ಚಿಕಿತ್ಸೆ ಹಾಗೂ ಆರೋಗ್ಯ ವರ್ಧಕ ಸಲಹೆಗಳನ್ನು ಉಚಿತವಾಗಿ ನೀಡಲಾಗುವುದು. ನೋಂದಣಿ, ಡಿಜಿಟಲ್ ಐಡಿ ರಚನೆಯನ್ನು ಉಚಿತವಾಗಿ ಮಾಡಲಾಗುವುದು ಎಂದರು.
ಸೂಪರ್ ಸ್ಪೆಷಲಿಸ್ಟ್, ತಜ್ಞ ವೈದ್ಯರು, ವೈದ್ಯಾಧಿಕಾರಿಗಳು ಮತ್ತು ಸಮುದಾಯ ಆರೋಗ್ಯ ಅಧಿಕಾರಿಗಳು ಹಾಗೂ ತಜ್ಞರಿಂದ ಟೆಲಿಕನ್ಸಲ್ಟೇಶನ್ ಮೂಲಕ ಉಚಿತ ಸಲಹೆ ನೀಡಲಾಗುವುದು. ಏ.18ರಂದು ಬೆಳಗ್ಗೆ 11 ಗಂಟೆಗೆ ಹುಬ್ಬಳ್ಳಿಯ ಲ್ಯಾಮಿಂಗ್ಟನ್ ಪ್ರೌಢಶಾಲೆ ಆವರಣದಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಷಿ ಅವರು ಮೇಳಕ್ಕೆ ಚಾಲನೆ ನೀಡುವರು.
ಏ.20ರಂದು ಧಾರವಾಡ, 22ರಂದು ನವಲಗುಂದ, 26ರಂದು ಕಲಘಟಗಿ ಹಾಗೂ 28ರಂದು ಕುಂದಗೋಳ ತಾಲೂಕುಗಳಲ್ಲಿ ಆರೋಗ್ಯ ಮೇಳ ಆಯೋಜಿಸಲಾಗುವುದು ಎಂದು ಹೇಳಿದರು.
ಆಹಾರ ಸುರಕ್ಷತಾ ವಿಭಾಗದವರು ಆಹಾರ ಪದಾರ್ಥ ಗಳ ಗುಣಮಟ್ಟ ಪರಿಶೀಲನೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮೂಲಕ ಬೀದಿನಾಟಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಬೇಕು. ಸಂಚಾರಿ ವಾಹನಗಳ ಮೂಲಕ ನೇತ್ರ ತಪಾಸಣೆ ಕಾರ್ಯಕ್ರಮ ಏರ್ಪಡಿಸಲಾಗುವುದು. ಈ ಎಲ್ಲ ಮಾಹಿತಿಗಳನ್ನು ಎಲ್‌ಇಡಿ ವಾಹನಗಳ ಮೂಲಕ ಪ್ರಚಾರ ಕೈಗೊಳ್ಳಬೇಕು ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ| ಬಿ.ಸಿ. ಕರಿಗೌಡರ ಮಾತನಾಡಿ, ಆರೋಗ್ಯ ಮೇಳದಲ್ಲಿ ಮಧುಮೇಹ, ಅಧಿಕ ರಕ್ತದೊತ್ತಡ, ಬಾಯಿ, ಗರ್ಭಕೋಶ, ಕಂಠ ಮತ್ತು ಸ್ತನ ಕ್ಯಾನ್ಸರ್ ಮುಂತಾದವುಗಳ ಉಚಿತ ನೋಂದಣಿ, ತಪಾಸಣೆ ಮತ್ತು ಅಗತ್ಯವಿದ್ದರೆ ಹೆಚ್ಚಿನ ಚಿಕಿತ್ಸೆಗೆ ಒಳಪಡಿಸಲಾಗುವುದು ಎಂದರು. ಆಯುಷ್ಮಾನ ಭಾರತ್ ಆರೋಗ್ಯ ಕರ್ನಾಟಕ ಕಾರ್ಯಕ್ರಮದಡಿ ಆರೋಗ್ಯ ಕಾರ್ಡ್‌ಗಳನ್ನು ಅರ್ಹ ಫಲಾನುಭವಿಗಳಿಗೆ ಉಚಿತ ವಿತರಣೆ ಮಾಡಲಾಗುವುದು.
ಮಹಿಳೆಯರ ಆರೋಗ್ಯ ತಪಾಸಣೆಗೆ ಪ್ರತ್ಯೇಕ ಸ್ಥಳ ಇರಲಿದೆ. ಕೋವಿಡ್ ಲಸಿಕೆ ನೀಡಲಾಗುತ್ತದೆ. ತಾಯಿ ಮತ್ತು ಮಕ್ಕಳ ಆರೋಗ್ಯ, ಮೂಳೆ, ಕಣ್ಣು, ಕಿವಿ, ಮೂಗು, ದಂತ, ಚರ್ಮರೋಗಗಳನ್ನು ಕೂಡ ಪರೀಕ್ಷಿಸಲಾಗುವುದು ಎಂದರು.
ಜಿಲ್ಲಾ ಆಯುಷ್ ಅಧಿಕಾರಿ ಡಾ| ಮೀನಾಕ್ಷಿ ಮಾತನಾಡಿ, ಆಯುರ್ವೆàದ ಚಿಕಿತ್ಸಾ ಪದ್ಧತಿ ಸೇರಿದಂತೆ ಭಾರತೀಯ ವೈದ್ಯ ಪದ್ಧತಿ ಇತರ ವಿಧಾನಗಳ ಕುರಿತು ಮೇಳದಲ್ಲಿ ಸಾರ್ವಜನಿಕರಿಗೆ ಮಾಹಿತಿ ನೀಡಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
MUST WATCH
ಹೊಸ ಸೇರ್ಪಡೆ
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.