![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Aug 4, 2019, 9:46 AM IST
ಹುಬ್ಬಳ್ಳಿ: ದಾಜಿಬಾನಪೇಟೆ ವೃತ್ತದಲ್ಲಿ ಸಂಗ್ರಹವಾದ ಮಳೆ ನೀರು-ವಾಹನ ಸಂಚಾರ ತಡೆಯಲು ಬ್ಯಾರಿಕೇಡ್ ಹಾಕಲಾಗಿತ್ತು.
ಹುಬ್ಬಳ್ಳಿ: ತಾಲೂಕಿನಾದ್ಯಾಂತ ಶನಿವಾರ ಉತ್ತಮ ಮಳೆಯಾಗಿದ್ದು, ರೇವಡಿಹಾಳದಲ್ಲಿ ಎರಡು ಮನೆ ಬಿದ್ದಿರುವ ಬಗ್ಗೆ ವರದಿಯಾಗಿದೆ.
ಮಳೆಗಾಲದ ಆರಂಭದಿಂದ ಇಲ್ಲಿಯವರೆಗೆ ಹೋಲಿಸಿದರೆ ಶನಿವಾರ ಉತ್ತಮ ಮಳೆಯಾಗಿದ್ದು, ನಗರದ ತಗ್ಗು ಪ್ರದೇಶದಲ್ಲಿನ ರಸ್ತೆಗಳಲ್ಲಿ ಮಳೆ ನೀರು ತುಂಬಿತ್ತು. ಬೆಳಗ್ಗಿನಿಂದ ಆರಂಭವಾದ ಮಳೆ ಬಿಟ್ಟು ಬಿಡದೆ ಸುರಿದಿದ್ದು, ಮಲೆನಾಡಿನ ಮಳೆ ನೆನಪಿಸುವಂತಿತ್ತು. ರೇವಡಿಹಾಳ ಗ್ರಾಮದಲ್ಲಿ ಎರಡು ಮನೆ ಕುಸಿದಿದ್ದು, ಯಾವುದೇ ಪ್ರಾಣ ಹಾನಿಯಾಗಿಲ್ಲ. ತಾಲೂಕಿನಾದ್ಯಾಂತ ಉತ್ತಮ ಮಳೆಯಾಗಿದೆ ಎಂದು ತಹಶೀಲ್ದಾರ್ ಸಂಗಪ್ಪ ಬಾಡಗಿ ತಿಳಿಸಿದ್ದಾರೆ.
ಸತತವಾಗಿ ಸುರಿಯುತ್ತಿರುವ ಮಳೆಯಿಂದ ಈಗಾಗಲೇ ರಸ್ತೆಗಳು ಹೊಂಡಮಯವಾಗಿದ್ದು, ಕೆಸರುಗದ್ದೆಯಂತಾಗಿವೆ. ದ್ವಿಚಕ್ರ ವಾಹನ ಸವಾರರು ಜೀವ ಕೈಯಲ್ಲಿ ಹಿಡಿದುಕೊಂಡು ಓಡಾಡುವಂತಾಗಿದೆ. ಗುಂಡಿಗಳನ್ನು ಮುಚ್ಚುವ ಕೆಲಸಕ್ಕೆ ಪಾಲಿಕೆ ಮುಂದಾಗಿದ್ದು, ಗುಂಡಿಗಳಿಗೆ ವೆಟ್ಮಿಕ್ಸ್ ಹಾಕುತ್ತಿದೆ. ಕೆಲವೆಡೆ ಮಳೆ ನೀರು ಸರಾಗವಾಗಿ ಹರಿಯದ ಕಾರಣ ರಸ್ತೆ ಮೇಲೆ ಸಂಗ್ರಹವಾಗಿತ್ತು. ವಿಷಯ ತಿಳಿಯುತ್ತಿದ್ದಂತೆ ಪಾಲಿಕೆ ಸಿಬ್ಬಂದಿ ಸ್ಥಳಕ್ಕೆ ತೆರಳಿ ನೀರನ್ನು ಚರಂಡಿಗೆ ಹರಿಸುವ ಕೆಲಸ ಮಾಡಿದರು. ದಾಜಿಬಾನಪೇಟೆ ವೃತ್ತದಲ್ಲಿ ನೀರು ಸಂಗ್ರಹವಾದ ಹಿನ್ನೆಲೆಯಲ್ಲಿ ರಸ್ತೆ ಸಂಚಾರ ಸ್ಥಗಿತಗೊಂಡಿತ್ತು. ಮುನ್ನೆಚ್ಚರಿಕಾ ಕ್ರಮವಾಗಿ ವಾಹನಗಳ ಸಂಚಾರ ತಡೆಗೆ ವೃತ್ತದ ಸುತ್ತಲೂ ಬ್ಯಾರಿಕೇಡ್‌ಗಳನ್ನು ಹಾಕಲಾಗಿತ್ತು.
Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’
ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ
Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು
Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್ ವಶಕ್ಕೆ
ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್
You seem to have an Ad Blocker on.
To continue reading, please turn it off or whitelist Udayavani.