ನರಗುಂದದಲ್ಲಿ ಗಾಳಿ-ಮಳೆ: ಜನಜೀವನ ಅಸ್ತವ್ಯಸ್ತ
Team Udayavani, May 14, 2018, 4:39 PM IST
ನರಗುಂದ: ತಾಲೂಕಿನಲ್ಲಿ ರವಿವಾರ ಸಂಜೆ ಗಾಳಿ ಮಳೆಯಾಗಿದ್ದು, ಪಟ್ಟಣದ ಕೆಲವೆಡೆ ಮರಗಳು ಧರೆಗುರುಳಿವೆ. ಪರಿಣಾಮ ಕೆಲವೆಡೆ ಮನೆಗಳಿಗೆ ಧಕ್ಕೆಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.
ಸಂಜೆ 5ರ ಬಳಿಕ ಜೋರಾದ ಗಾಳಿ ಬೀಸುತ್ತಿದ್ದಂತೆ ಧೋ ಎಂದು ಮಳೆ ಸುರಿದಿದೆ. ಮಳೆಯೊಂದಿಗೆ ರಭಸದ ಗಾಳಿಗೆ ಪಟ್ಟಣದ ವಿನಾಯಕ ನಗರದಲ್ಲಿ ವಿದ್ಯುತ್ ಕಂಬವೊಂದು ಧರೆಗುರುಳಿದೆ. ಮೇಲಾಗಿ ಸವದತ್ತಿ ರಾಜ್ಯ ಹೆದ್ದಾರಿಗೆ ಹೊಂದಿಕೊಂಡ ಶಿವಕೃಪಾ ಖಾನಾವಳಿ ಮುಂಭಾಗ ಹೆದ್ದಾರಿಗೆ ಹೊಂದಿಕೊಂಡ ಅರಳಿ ಮರವೊಂದರ ದೊಡ್ಡ ಟೊಂಗೆಯೊಂದು ಮುರಿದು ಧರೆಗುರುಳಿದೆ. ಇದರಿಂದ ಸಂಚಾರ ಮೊಟಕುಗೊಂಡ ಪರಿಣಾಮ ಪಟ್ಟಣದ ಸ್ವಯಂ ಸೇವಕರು ಮತ್ತು ಸಾರ್ವಜನಿಕರು ಸೇರಿ ಮರದ ಟೊಂಗೆ ಬದಿಗೆ ಸರಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.
ಮೇಲಾಗಿ ಪಟ್ಟಣದ ಕೆಲವೆಡೆ ಮಳೆಯಿಂದ ಚರಂಡಿಗಳು ತುಂಬಿ ರಸ್ತೆಗಳ ಮೇಲೆ ಹರಿದಿವೆ. ಕೆಲವೆಡೆ ಮನೆಗಳಿಗೆ ಚರಂಡಿ ನೀರು ಹೊಕ್ಕಿದ್ದು, ಸಾರ್ವಜನಿಕರು ಪರದಾಡಿದ್ದಾರೆ. ಗಾಳಿ ಸಹಿತ ಮಳೆಯಾಗುತ್ತಿದ್ದಂತೆ ವಿದ್ಯುತ್ ಕಡಿತಗೊಳಿಸಲಾಗಿದೆ. ಸಾಯಂಕಾಲದಿಂದ ಸಂಜೆ 9ರ ವರೆಗೂ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿತ್ತು. ಇದರಿಂದ ಜನರು ಪರದಾಡುವಂತಾಯಿತು.
ಪಟ್ಟಣದ ಅರ್ಬನ್ ಓಣಿಯ ಕೇಸರಿಪ್ರಸಾದ ಸುಬೇದಾರ ಎಂಬುವರ ಮನೆ ಮುಂದಿದ್ದ ಮರವೊಂದು ಬೇರು ಸಮೇತ ಉರುಳಿ ಮನೆ ಮೇಲೆ ಬಿದ್ದಿದ್ದು, ಕುಂಚಿ ಕೊರವರ ಬಡಾವಣೆಯಲ್ಲಿ ಟ್ರ್ಯಾಕ್ಟರ್ ಮೇಲೆ ಮರ ಉರುಳಿ ಬಿದ್ದಿದೆ. ಒಟ್ಟಾರೆ ಗಾಳಿ ಸಹಿತ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ
ಸಿಎಂ ಆಗಿದ್ದವರು ಈ ರೀತಿ ಹೇಳಿಕೆ ನೀಡುವ ಬದಲು, ಸ್ಪಷ್ಟ ಹೇಳಿಕೆ ನೀಡಲಿ: ಸಚಿವ ಶಿವಾನಂದ
dharwad: ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್ ನಿಂದ ಹಲ್ಲೆ
Covid Scam: ಸಚಿವ ಸಂಪುಟದಲ್ಲಿ ಚರ್ಚಿಸಿ ಮುಂದಿನ ಕ್ರಮ: ಸಿಎಂ ಸಿದ್ದರಾಮಯ್ಯ
By Election: ಹಣ ಕೊಟ್ಟರೂ ಸಿಎಂ ಕಾರ್ಯಕ್ರಮಕ್ಕೆ ಜನ ಬರುತ್ತಿಲ್ಲ: ಬಿಎಸ್ ವೈ
MUST WATCH
ಹೊಸ ಸೇರ್ಪಡೆ
Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್
Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ
Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್
Protest: ಕಾಶ್ಮೀರ ಚರ್ಚೆ: ಆಕ್ಸ್‌ಫರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ
Chennai: ಲಾಟರಿ ಕಿಂಗ್ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.