ಧಾರವಾಡ ಹೈಕೋರ್ಟ್ ಪೀಠ ಲೋಕ ಅದಾಲತ್: 5 ಕೋಟಿ 77 ಲಕ್ಷ ರೂ.ಮೊತ್ತದ 183 ಪ್ರಕರಣಗಳ ಇತ್ಯರ್ಥ
Team Udayavani, Aug 13, 2022, 5:01 PM IST
ಧಾರವಾಡ : ಇಲ್ಲಿನ ಕರ್ನಾಟಕ ಉಚ್ಛ ನ್ಯಾಯಾಲಯ ಪೀಠದಲ್ಲಿ ಇಂದು ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ 183 ಪ್ರಕರಣಗಳನ್ನು 5,77,12,376 ರೂ.ಮೊತ್ತಕ್ಕೆ ಇತ್ಯರ್ಥಪಡಿಸಲಾಯಿತು .
ಹಿರಿಯ ನ್ಯಾಯಮೂರ್ತಿಗಳಾದ ಎಸ್ .ಜಿ.ಪಂಡಿತ್ ಅವರ ಮಾರ್ಗದರ್ಶನದಲ್ಲಿ , ನ್ಯಾಯಮೂರ್ತಿಗಳಾದ ಎಚ್.ಪಿ. ಸಂದೇಶ್ , ರವಿ ವಿ . ಹೊಸಮನಿ ಮತ್ತು ಅನಂತ ರಾಮನಾಥ ಹೆಗಡೆ ಹಾಗೂ ಲೋಕ ಅದಾಲತ್‌ನ ಸದಸ್ಯರುಗಳಾದ ಎಲ್ . ಟಿ . ಮಂಟಗಣಿ, ಎಸ್. ಎಸ್. ಬಾವಾಖಾನ, ಎಮ್. ಟಿ. ಬಂಗಿ ಮತ್ತು ಎಮ್. ಸಿ . ಹುಕ್ಕೇರಿ ಅವರನ್ನೊಳಗೊಂಡ 4 ಪೀಠಗಳಲ್ಲಿ ವ್ಯಾಜ್ಯಗಳ ರಾಜಿ ಸಂಧಾನ ನಡೆದವು.
ಇದನ್ನೂ ಓದಿ:ಹರ್ ಘರ್ ತಿರಂಗಾ: ಗುಡಿಸಲು,ಜಮೀನಿನಲ್ಲಿ ತ್ರಿವರ್ಣ ಧ್ವಜ ಹಾರಿಸಿ ಸಂಭ್ರಮಾಚರಣೆ
ನ್ಯಾಯಮೂರ್ತಿ ಅನಂತ ರಾಮನಾಥ ಹೆಗಡೆ ಹಾಗೂ ವಕೀಲರಾದ ಎಮ್. ಸಿ. ಹುಕ್ಕೇರಿ ಅವರ ಪೀಠವು ಜಮೀನಿನ ವ್ಯಾಜ್ಯಕ್ಕೆ ಸಂಬಂಧಿಸಿದಂತೆ 13 ವರ್ಷಗಳ ಹಳೆಯದಾದ ದಿವಾಣಿ ಪ್ರಕರಣವನ್ನು ರಾಜಿ – ಸಂಧಾನದ ಮೂಲಕ ಉಭಯ ಪಕ್ಷಗಾರರ ಸಮಕ್ಷಮ ಇತ್ಯರ್ಥಪಡಿಸಿದ್ದು ಈ ಬಾರಿಯ ರಾಷ್ಟ್ರೀಯ ಲೋಕ ಅದಾಲತ್‌ನ ಹೆಗ್ಗಳಿಕೆಯಾಗಿದೆ ಎಂದು ಹೈಕೋರ್ಟ್ ಕಾನೂನು ಸೇವಾ ಸಮಿತಿಯ ಕಾರ್ಯದರ್ಶಿ ಹಾಗೂ ನ್ಯಾಯಾಂಗದ ಅಧಿಕ ವಿಲೇಖನಾಧಿಕಾರಿ ವೆಂಕಟೇಶ ಆರ್ ಹುಲಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಡಬಲ್ ಗೇಮ್; ವಕ್ಫ್ ಆಸ್ತಿ ರಕ್ಷಣೆ ಬಗ್ಗೆ ಬಿಜೆಪಿ ಪ್ರಣಾಳಿಕೆಯಲ್ಲಿ ಉಲ್ಲೇಖ: ಸಿದ್ದು
Hubli: ಅಪ್ರಾಪ್ತೆಯೊಂದಿಗೆ ಅನುಚಿತ ವರ್ತನೆ: ಮುಖ್ಯ ಪೇದೆ ವಿರುದ್ದ ಪೋಕ್ಸೋ ಕೇಸ್
Hubli: ಹಣಕಾಸು ಆಯೋಗದ ಅನ್ಯಾಯದ ಬಗ್ಗೆ ಬಿಜೆಪಿಯರಿಂದ ಮೌನ: ಸಿದ್ದರಾಮಯ್ಯ ಕಿಡಿ
Hubli: ಜನರ ದಿಕ್ಕು ತಪ್ಪಿಸಲು ಬಿಜೆಪಿಯಿಂದ ವಕ್ಫ್ ಹೋರಾಟ: ಸಿಎಂ ಸಿದ್ದರಾಮಯ್ಯ
By Election: ಶಿಗ್ಗಾವಿ ಸಮರ: ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಮುಖಂಡರ ಸಭೆ
MUST WATCH
ಹೊಸ ಸೇರ್ಪಡೆ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.