ಜನರಿಗೆ ಮತ್ತೆ ಮೋಸ ಮಾಡುತ್ತಿದ್ದಾರೆ: ಕಳಸ ಬಂಡೂರಿ ಯೋಜನೆ ಸಂಬಂಧ ಎಚ್.ಕೆ. ಪಾಟೀಲ್ ಕಿಡಿ

Team Udayavani, Dec 30, 2022, 12:01 PM IST

hk-patil

ಹುಬ್ಬಳ್ಳಿ: ಕಳಸಾ ಬಂಡೂರಿ ನಾಲಾ ಯೋಜನೆಗೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಬಿಡುಗಡೆ ಮಾಡಿರುವ ದಾಖಲೆ ದಿನಾಂಕವಿಲ್ಲದ ನಿರ್ಗತಿಕ ದಾಖಲೆಯಾಗಿದೆ. ಕೆಲಸ ಆರಂಭ ಮಾಡಬೇಕಾದ ಸಂದರ್ಭದಲ್ಲಿ ಡಿಪಿಆರ್ ಅನುಮತಿ ಬಗ್ಗೆ ಮಾತನಾಡುತ್ತಿರುವುದು ಪುನಃ ಜನರನ್ನು ಮೋಸ ಮಾಡುವುದಾಗಿದೆ. ಯೋಜನೆ ಬಗ್ಗೆ ಕಾಳಜಿಯಿದ್ದರೆ ಪರಿಸರ ಮತ್ತು ಅರಣ್ಯ ಇಲಾಖೆಯ ಅನುಮತಿ ಪಡೆಯಬೇಕಾಗಿತ್ತು ಎಂದು ಜಲಸಂಪನ್ಮೂಲ ಮಾಜಿ ಸಚಿವ ಎಚ್.ಕೆ.ಪಾಟೀಲ ತಿಳಿಸಿದರು.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನೇವರಿ 2 ರಂದು ಹುಬ್ಬಳ್ಳಿಯ ನೆಹರು ಮೈದಾನದಲ್ಲಿ ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿರುವ ಮಹದಾಯಿ ಜಲ ಜನಾದೋಲನ ಸಮಾವೇಶದ ಮುಜುಗರದಿಂದ ತಪ್ಪಿಸಿಕೊಳ್ಳಲು ಮಾಡಿರುವ ಕುತಂತ್ರವಿದು. ಈಗಾಗಲೇ ಯೋಜನೆಗೆ ಅನುಮತಿ ಪಡೆದ ನಂತರವೂ ಪುನಃ ಡಿಪಿಆರ್ ಅನುಮತಿ ಮಾತನಾಡುತ್ತಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ. ಕೇಂದ್ರ ಪರಿಸರ ಹಾಗೂ ಅರಣ್ಯ ಇಲಾಖೆಯಿಂದ ಅನುಮತಿ ಪಡೆದಿದ್ದರೆ ಒಂದು ಹಂತ ಮುಂದೋಗಿದ್ದಾರೆ ಎನ್ನಬಹುದಿತ್ತು. ಅದುಬಿಟ್ಟು ಪರಿಷ್ಕೃತ ಡಿಪಿಆರ್ ಸಲ್ಲಿಸಿ ಅದಕ್ಕೆ ಅನುಮತಿ ನೀಡಿದೆ ಎಂದು ಜನರನ್ನು ವಂಚಿಸುವ ಕೆಲಸವಾಗಿದೆ. ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಬಿಡುಗಡೆ ಮಾಡಿರುವ ದಾಖಲೆಗಳಲ್ಲಿ ದಿನಾಂಕವಿಲ್ಲ. ಇದು ಸರಕಾರಿ ದಾಖಲೆ ಎನ್ನಲು ಸಾಧ್ಯವೇ ಎಂದು ಪ್ರಶ್ನಿಸಿದರು.

ಈಗಾಗಲೇ 2002 ರಲ್ಲಿ ಕಳಸಾ ನಾಲಾ ಯೋಜನೆಗೆ ಕೇಂದ್ರ ಸರಕಾರ ಅನುಮತಿ ನೀಡಿದೆ. ಪರಿಸರ ಮತ್ತು ಅರಣ್ಯ ಇಲಾಖೆ ಅನುಮತಿ ನೀಡಿತ್ತು. ಅಲ್ಲಿ ಕಾಮಗಾರಿ ಕೂಡ ಆಗಿದೆ. ಈ ಎಲ್ಲಾ ಕಾರ್ಯಗಳು ಡಿಪಿಆರ್ ಇಲ್ಲದೆ ನಡೆದಿದೆಯೇ. ಕೆಲಸ ಮಾಡುವ ಹಂತದಲ್ಲಿ ಯೋಜನೆ ಇರುವಾಗ ಡಿಪಿಆರ್ ಎನ್ನುವ ಒಂದನೇ ತರಗತಿಯ ಬಗ್ಗೆ ಮಾತನಾಡುತ್ತಿದ್ದಾರೆ. ಈ ಹಿಂದೆ ಮುಖ್ಯಮಂತ್ರಿಯಾಗಿದ್ದ ಬಿ.ಎಸ್.ಯಡಿಯೂರಪ್ಪ ಅವರು ಮಹದಾಯಿ ಯೋಜನೆಗೆ ಗೋವಾ ಮುಖ್ಯಮಂತ್ರಿ ಇನ್ನು ಮುಂದೆ ಯಾವುದೇ ತಕರಾರು ಸೇರಿದಂತೆ ಇನ್ನಿತರೆ ಸಮಸ್ಯೆ ಮಾಡುವುದಿಲ್ಲ ಎನ್ನುವ ಪತ್ರ ನೀಡಿರುವುದಾಗಿ ಇದೇ ನೆಹರು ಮೈದಾನದಲ್ಲಿ ಪ್ರದರ್ಶಿಸಿದ್ದರು. ಅದು ಬೋಗಸ್ ಪತ್ರ ಎಂಬುವುದು ಗೊತ್ತಾಯಿತು‌. ಇದೀಗ ಕೇಂದ್ರ ಸಚಿವರು ಬಿಡುಗಡೆ ಮಾಡಿರುವ ದಾಖಲೆಯಲ್ಲಿ ದಿನಾಂಕ ಇಲ್ಲದಿರುವುದನ್ನು ನೋಡಿದರೆ ಇದು ಕೂಡ ಜನರನ್ನು ವಂಚಿಸುವ ನಿರ್ಗತಿಕ ದಾಖಲೆ ಅನ್ನಿಸುತ್ತದೆ.

ಇದೇ ದಾಖಲೆಯನ್ನು ಮುಂದಿಟ್ಟುಕೊಂಡು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸದನದಲ್ಲಿ ಪ್ರಸ್ತಾಪ ಮಾಡಿದರು. ಒಂದು ವೇಳೆ ಈ ದಾಖಲೆ ನಿಜವಾಗಿದ್ದರೆ ಹಾಕಿರುವ ನಿಬಂದನೆಗಳು ರಾಜ್ಯದ ಪಾಲಿಗೆ ಸಮಸ್ಯೆ ತಂದೊಡ್ಡಲಿವೆ ಎನ್ನುವುದನ್ನು ಮರೆತಿದ್ದಾರೆ. ಇವರಿಗೆ ಯೋಜನೆ ಬಗ್ಗೆ ಕಾಳಜಿಯಿದ್ದರೆ ಈ ನಿಬಂದನೆಗಳ ಬಗ್ಗೆ ಸರ್ವ ಪಕ್ಷದ ಮುಖಂಡರೊಂದಿಗೆ ಚರ್ಚೆ ಮಾಡಬಹುದಿತ್ತು. ಈ ಎಲ್ಲಾ ಬೆಳವಣಿಗೆ ನೋಡಿದರೆ ಜನರನ್ನು ಮತ್ತೊಮ್ಮೆ ಮೂರ್ಖರನ್ನಾಗಿಸುವ ಕುತಂತ್ರ ಎಂದರು.

ಜ.2 ರಂದು ಮಹದಾಯಿ ಜಲ ಹಾಗೂ ಜನಾಂದೋಲನ: ನ್ಯಾಯಾಧಿಕರಣ ಆದೇಶ ಬಂದು ನಾಲ್ಕು ವರ್ಷ ಕಳೆದಿದ್ದರೂ ಮಹದಾಯಿ ಹಾಗೂ ಕಳಸಾ ಬಂಡೂರಿ ಯೋಜನೆ ಕುರಿತಾದ ಸಣ್ಣ ಪ್ರಗತಿಯೂ ಇಲ್ಲ. ನಾಲ್ಕು ದಿನಗಳ ಹಿಂದೆ ದೆಹಲಿಯ ಅಧಿಕೃತವಾಗಿ ಅಧಿಕಾರಿಗಳನ್ನು ಸಂಪರ್ಕಿಸಿದಾಗ ಇಲ್ಲಿಯವೆರೆಗೂ ಪರಿಸರ ಮತ್ತು ಅರಣ್ಯ ಇಲಾಖೆ ಅನುಮತಿಗೆ ಪ್ರಸ್ತಾವನೆ ಬಂದಿಲ್ಲ ಎಂದಿದ್ದರು. ಜ.೨ ರಂದು ಹುಬ್ಬಳ್ಳಿಯ ನೆಹರು ಮೈದಾನದಲ್ಲಿ ಮಹದಾಯಿ ಜಲ ಹಾಗೂ ಜನಾಂದೋಲನ ನಡೆಯಲಿದೆ. ಕಾಂಗ್ರೆಸ್ ಪಕ್ಷದ ರಾಜ್ಯ ಉಸ್ತುವಾರಿ ರಣದೀಪ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ, ವಿಪಕ್ಷ ನಾಯಕರಾದ ಸಿದ್ದರಾಮಯ್ಯ, ಬಿ.ಕೆ.ಹರಿಪ್ರಸಾದ ಸೇರಿದಂತೆ ಪಕ್ಷದ ನಾಯಕರು ಪಾಲ್ಗೊಳ್ಳಲಿದ್ದಾರೆ ಎಂದು ಎಚ್.ಕೆ.ಪಾಟೀಲ ತಿಳಿಸಿದರು

ಟಾಪ್ ನ್ಯೂಸ್

Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ

Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ

Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ

Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ

1-horoscope

Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ

Karnataka Govt.,: ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ

Karnataka Govt.,: ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ

Kerala: ಅಂಗಿ ತೆಗೆದು ದೇಗುಲ ಪ್ರವೇಶ ಪದ್ಧತಿಗೆ ಕೊಕ್‌?

Kerala: ಅಂಗಿ ತೆಗೆದು ದೇಗುಲ ಪ್ರವೇಶ ಪದ್ಧತಿಗೆ ಕೊಕ್‌?

ರಾಜ್ಯದಲ್ಲಿ ಶೇ. 27 ಪ್ರೌಢಶಾಲಾ ಶಿಕ್ಷಕ ಹುದ್ದೆ ಖಾಲಿ! ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚುರಾಜ್ಯದಲ್ಲಿ ಶೇ. 27 ಪ್ರೌಢಶಾಲಾ ಶಿಕ್ಷಕ ಹುದ್ದೆ ಖಾಲಿ! ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚು

ರಾಜ್ಯದಲ್ಲಿ ಶೇ. 27 ಪ್ರೌಢಶಾಲಾ ಶಿಕ್ಷಕ ಹುದ್ದೆ ಖಾಲಿ! ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚು

New Virus: ಚೀನದಲ್ಲಿ ಹೊಸ ವೈರಸ್‌ ಹಬ್ಬುತ್ತಿರುವ ಬಗ್ಗೆ ವದಂತಿ!

New Virus: ಚೀನದಲ್ಲಿ ಹೊಸ ವೈರಸ್‌ ಹಬ್ಬುತ್ತಿರುವ ಬಗ್ಗೆ ವದಂತಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಸ ವರ್ಷದ ಕೊಡುಗೆ: ಬೈಸಿಕಲ್‌ ಉತ್ತೇಜನಕ್ಕೆ ಉಚಿತ ರೈಡ್‌

ಹೊಸ ವರ್ಷದ ಕೊಡುಗೆ: ಬೈಸಿಕಲ್‌ ಉತ್ತೇಜನಕ್ಕೆ ಉಚಿತ ರೈಡ್‌

Laxmi Hebbalkar  ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ

Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ

Hubballi

Hubballi: ಹಳೇ ವೈಷಮ್ಯದಿಂದ ಸಹಚರರೊಂದಿಗೆ ಸೇರಿ ಹಲ್ಲೆ; ವ್ಯಕ್ತಿ ಮೃತ್ಯು

Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ

Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ

Hubballi: ಬಂಧಿಸಲು ಹೋದ ಪೊಲೀಸರ ಮೇಲೆ ದಾಳಿ… ಆರೋಪಿ ಕಾಲಿಗೆ ಗುಂಡೇಟು

Hubballi: ಬಂಧಿಸಲು ಹೋದ ಪೊಲೀಸರ ಮೇಲೆ ದಾಳಿ… ಆರೋಪಿ ಕಾಲಿಗೆ ಗುಂಡೇಟು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ

Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ

Court-1

Kundapura: ಗ್ರಾಮ ಸಹಾಯಕಿಗೆ ಕಿರುಕುಳ; ಆರೋಪಿಗಳಿಗೆ ನಿರೀಕ್ಷಣ ಜಾಮೀನು

Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ

Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ

1-horoscope

Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ

courts

Kasaragod: ಯೂತ್‌ ಕಾಂಗ್ರೆಸ್‌ ಕಾರ್ಯಕರ್ತರಿಬ್ಬರ ಕೊಲೆ; ಇಂದು ಶಿಕ್ಷೆ ಪ್ರಮಾಣ ಘೋಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.