ಸೀಲ್ ಇದ್ದವರ ತಿರುಗಾಟ?
Team Udayavani, Apr 20, 2020, 1:57 PM IST
ಹುಬ್ಬಳ್ಳಿ: ಇಲ್ಲಿನ ಮುಲ್ಲಾ ಓಣಿಯಲ್ಲಿ ಕೋವಿಡ್ 19 ಸೋಂಕಿತರಿಂದ ಆಹಾರ ಧಾನ್ಯ ಪಡೆದ ಕುಟುಂಬದವರು ಯಾರಾದರೂ ಇದ್ದಲ್ಲಿ ಕೋವಿಡ್ 19 ವೈರಸ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದ್ದು, ಅದರಲ್ಲಿ ಕೆಲವೊಬ್ಬರು ಬಂದು ತಪಾಸಣೆ ಮಾಡಿಸಿಕೊಂಡು ಕ್ವಾರಂಟೈನ್ ಸೀಲ್ ಹಾಕಿಸಿಕೊಂಡು ಹೊರಗಡೆ ತಿರುಗುತ್ತಿದ್ದಾರೆಂದು ಹೇಳಲಾಗುತ್ತಿದ್ದು, ಇದು ಜನರನ್ನು ಆತಂಕಕ್ಕೆ ದೂಡುವಂತೆ ಮಾಡಿದೆ.
ಮಾರ್ಚ್ 27 ರಂದು ಕೋವಿಡ್ 19 ವೈರಸ್ ಸೋಂಕಿತರು ಸುತ್ತಮುತ್ತಲಿನ ಪ್ರದೇಶದಲ್ಲಿ ಆಹಾರ ಧಾನ್ಯ ವಿತರಿಸಿದ್ದು, ಅದರಲ್ಲಿ ಬಹಳಷ್ಟು ಜನರು ದವಸ ಧಾನ್ಯ ಪಡೆದಿದ್ದಾರೆ. ಇದಾದ ಕೆಲ ದಿನಗಳ ನಂತರ ಆಹಾರ ಧಾನ್ಯ ಹಂಚಿದವರಿಗೆ ಕೋವಿಡ್ 19 ವೈರಸ್ ಬಂದಿದ್ದು ತಪಾಸಣೆಯಿಂದ ಕಂಡು ಬಂದಿದ್ದರಿಂದ, ಜಿಲ್ಲಾಡಳಿತ ಕಾರ್ಯ ಪ್ರವೃತ್ತವಾಗಿ ಸುತ್ತಲಿನ ಪ್ರದೇಶವನ್ನು ಕಂಟೇನ್ಮೆಂಟ್ ಪ್ರದೇಶವೆಂದು ಘೋಷಿಸಿ ಎಲ್ಲೆಡೆ ವ್ಯಾಪಕ ಬಂದೋಬಸ್ತ್ ಕಲ್ಪಿಸಿತು. ತದ ನಂತರ ಆಹಾರ ಧಾನ್ಯ ಹಂಚಿರುವ ಮಾಹಿತಿ ತಿಳಿಯುತ್ತಿದ್ದಂತೆ ಎಚ್ಚೆತ್ತುಕೊಂಡ ಜಿಲ್ಲಾಡಳಿತ ಸುತ್ತಮುತ್ತ ಧ್ವನಿವರ್ಧಕದ ಮೂಲಕ ಮಾಹಿತಿ ನೀಡಿ ಅಂತಹವರು ಯಾರಾದರೂ ಇದ್ದಲ್ಲಿ ಕೂಡಲೇ ತಪಾಸಣೆ ಮಾಡಿಸಿಕೊಳ್ಳಿರೆಂದು ಸೂಚನೆ ನೀಡಿತು. ಪ್ರದೇಶದ ಕೆಲ ಜನರ ಮೇಲೆ ನಿಗಾ ಇಟ್ಟ ಜಿಲ್ಲಾಡಳಿತ ಕೆಲವರಿಗೆ ಸೀಲ್ ಹಾಕಿ ಕ್ವಾರಂಟೈನ್ ಮಾಡಿ ಮನೆಯಲ್ಲಿಯೇ ಇರುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿತು. ಆದರೆ ಇದರಲ್ಲಿ ಕೆಲವರು ಹೊರಗಡೆ ತಿರುಗುತ್ತಿರುವುದು ಕಂಡು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ
Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್
Hubli: ಕ್ರಿಮಿನಲ್ ಜತೆಯೇ ಪೊಲೀಸ್ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್ ಕಾರ್ಯಾಚರಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.