ಬಾದಾಮಿಯಲ್ಲಿ  ಸಿದ್ದುಗೆ ಮನೆ 


Team Udayavani, May 18, 2018, 4:48 PM IST

18-may-20.jpg

ಬಾಗಲಕೋಟೆ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈಗ ಬಾದಾಮಿಯ ಶಾಸಕರು. ಕ್ಷೇತ್ರದ ಸಾರ್ವಜನಿಕರ ಸಂಪರ್ಕಕ್ಕಾಗಿ ಬಾದಾಮಿಯಲ್ಲೇ ಹೊಸದಾಗಿ ಮನೆಯೊಂದನ್ನು ಹುಡುಕಲು ತಮ್ಮ ಆಪ್ತರಿಗೆ ಸೂಚನೆ ಕೊಟ್ಟಿದ್ದಾರೆ. ಸದ್ಯ ರಾಜ್ಯ ರಾಜಕೀಯ ವಿದ್ಯಮಾನ ಪೂರ್ಣಗೊಂಡ ಬಳಿಕ ಬಾದಾಮಿಗೆ ಆಗಮಿಸಿ ಮತದಾರರಿಗೆ ಕೃತಜ್ಞತೆ ಸಭೆಯೊಂದನ್ನು ಮಾಡುವ ಜತೆಗೆ ಸಾಧ್ಯವಾದರೆ
ಅದೇ ವೇಳೆ ಹೊಸ ಮನೆಯಲ್ಲಿ ಪೂಜೆ ಕೂಡ ನಡೆಸಲಿದ್ದಾರೆ.

ಗುರುವಾರವಷ್ಟೇ ಸಿದ್ದರಾಮಯ್ಯ ಅವರು ತಮ್ಮ ಆಪ್ತ ಹಾಗೂ ಗುಳೇದಗುಡ್ಡ ಕಾಂಗ್ರೆಸ್‌ ಮುಖಂಡ ಹೊಳೆಬಸು ಶೆಟ್ಟರಗೆ ದೂರವಾಣಿ ಮೂಲಕ ಮಾತನಾಡಿ, ಬಾದಾಮಿಯಲ್ಲಿ ಮನೆ ನೋಡು. ರಾಜಕೀಯ ಬೆಳವಣಿಗೆ ಮುಗಿದ ತಕ್ಷಣ ಬಾದಾಮಿಗೆ ಬರುತ್ತೇನೆ. ಹೆಡ್‌ಕ್ವಾರ್ಟರ್‌ (ಬಾದಾಮಿ ಕೇಂದ್ರ ಸ್ಥಾನ)ದಲ್ಲಿ ಒಂದು ಸಭೆ ಏರ್ಪಡಿಸಿ. ಪಕ್ಷದ ಎಲ್ಲ ಮುಖಂಡರು, ಕಾರ್ಯಕರ್ತರು ಹಾಗೂ ಮತದಾರರಿಗೆ ಕೃತಜ್ಞತೆ ಸಲ್ಲಿಸುವ ಸಭೆ ನಡೆಸೋಣ. ಜನರ ಸಂಪರ್ಕಕ್ಕೆ ಅನುಕೂಲವಾಗಲು ಸುಸಜ್ಜಿತ ಮನೆಯೊಂದನ್ನು ಬಾಡಿಗೆಗೆ ನೋಡು ಎಂದು ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.

ತಿಂಗಳಲ್ಲಿ ನಾಲ್ಕು ಐದು ದಿನ: ಎರಡು ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಸಿದ್ದರಾಮಯ್ಯ ಅವರು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋತಿದ್ದು, ಬಾದಾಮಿಯಲ್ಲಿ ಅಲ್ಪ ಮತಗಳಿಂದ ಗೆದ್ದಿದ್ದಾರೆ. ಸದ್ಯ ಅವರು ಜಿಲ್ಲೆಯ ಬಾದಾಮಿ ಶಾಸಕರು. ಇನ್ಮುಂದೆ ಪ್ರತಿಯೊಂದು ದೊಡ್ಡ, ಸಣ್ಣ ಕಾರ್ಯಕ್ರಮಕ್ಕೂ ಶಿಷ್ಟಾಚಾರದ ಪ್ರಕಾರ ಅವರು ಹೆಸರು ನಿತ್ಯವೂ ಇರಲಿವೆ. ಬಾದಾಮಿ ಕ್ಷೇತ್ರ ಹಾಗೂ ಜಿಲ್ಲೆಯ ಮಹತ್ವದ ಸಭೆ, ಸಮಾರಂಭಗಳಿಗೆ ಅವರು ಆಗಮಿಸಲಿದ್ದಾರೆ ಎನ್ನಲಾಗಿದೆ.

ತಿಂಗಳಲ್ಲಿ ನಾಲ್ಕು ದಿನ ಬಾದಾಮಿಯಲ್ಲೇ ವಾಸ್ತವ್ಯ ಮಾಡಲು ಸಿದ್ದರಾಮಯ್ಯ ನಿರ್ಧರಿಸಿದ್ದಾರೆ. ಅದಕ್ಕಾಗಿಯೇ ಒಂದು ಮನೆ ನೋಡಲು ಹೇಳಿದ್ದಾರೆ. ಸರ್ಕಾರದ ವತಿಯಿಂದ ತಾಪಂ ಕಚೇರಿ ಕಟ್ಟಡದಲ್ಲಿ ಒಂದು ಕಟ್ಟಡ ನೀಡಲಿದ್ದು, ಅದರ ಹೊರತಾಗಿ ಮನೆ ಇದ್ದರೆ ಎಲ್ಲ ಮುಖಂಡರು, ಕಾರ್ಯಕರ್ತರು, ಜನರು ಭೇಟಿ ಮಾಡಲು ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ ಎಂದು ಹೇಳಲಾಗಿದೆ.

ಪ್ರಮಾಣ ಪತ್ರವೂ ಪಡೆದಿಲ್ಲ: ವಿಧಾನಸಭೆ ಚುನಾವಣೆ ಬಾದಾಮಿ ಕ್ಷೇತ್ರದಿಂದ ಆಯ್ಕೆಯಾದ ಬಳಿಕ ಚುನಾವಣಾಧಿಕಾರಿಯಿಂದ ಅಧಿಕೃತವಾಗಿ ನೀಡುವ ಪ್ರಮಾಣ ಪತ್ರ ಪಡೆದಿಲ್ಲ. ಗೆದ್ದ ಅಭ್ಯರ್ಥಿ ಇಲ್ಲವೇ ಅವರ ಮತ ಎಣಿಕೆ ಏಜೆಂಟರು ಪ್ರಮಾಣ ಪತ್ರ ಪಡೆಯಲು ಅವಕಾಶವಿದೆ. ಹೀಗಾಗಿ ಬಾದಾಮಿ ಮಾಜಿ ಶಾಸಕ ಬಿ.ಬಿ. ಚಿಮ್ಮನಕಟ್ಟಿ ಅವರ ಪುತ್ರ ಭೀಮಸೇನ ಚಿಮ್ಮನಕಟ್ಟಿ ಮತ್ತು ಹೊಳೆಬಸು ಶೆಟ್ಟರ ಈ ಪ್ರಮಾಣ ಪತ್ರ ಪಡೆದಿದ್ದಾರೆ .

ಬಾದಾಮಿಯಲ್ಲಿ ಮನೆ ಹಾಗೂ ಅದಕ್ಕೆ ಬೇಕಾಗುವ ಸಿಬ್ಬಂದಿ ನೋಡಲು ಸಿದ್ದರಾಮಯ್ಯ ಹೇಳಿದ್ದಾರೆ. ತಿಂಗಳಲ್ಲಿ 3ರಿಂದ 4 ದಿನ ಬಾದಾಮಿಯಲ್ಲೇ ವಾಸ್ತವ್ಯ ಮಾಡಲಿದ್ದಾರೆ. ಅವರಿಗೆ ಸೂಕ್ತವಾಗಲಿರುವ ಮನೆ ಹುಡುಕುತ್ತಿದ್ದೇವೆ. ಅಡುಗೆಯವರು, ಕಂಪ್ಯೂಟರ್‌ ಆಪರೇಟರ್‌ ಮುಂತಾದ ಸಿಬ್ಬಂದಿಯನ್ನೂ ನೋಡುತ್ತಿದ್ದೇವೆ.
ಹೊಳೆಬಸು ಶೆಟ್ಟರ, ಕಾಂಗ್ರೆಸ್‌ ಮುಖಂಡ

„ಶ್ರೀಶೈಲ ಕೆ. ಬಿರಾದಾರ

ಟಾಪ್ ನ್ಯೂಸ್

12-sirsi

Sirsi: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ

EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್‌ ಟೀಕೆ

EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್‌ ಟೀಕೆ

11-sirsi

Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ

1

India: 68 ಮಿಲಿಯನ್‌ ಟನ್‌ ಆಹಾರ ಪೋಲು…ದೇಶದ ಅಭಿವೃದ್ಧಿ, ಜನರ ಸಾವು, ಆಹಾರ ಭದ್ರತೆಗೂ ಮಾರಕ

Vijayapura: Unnatural assault on 6-year-old boy: Convict sentenced to 20 years in prison

Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು

The day will come when our team member will become CM: Yatnal

Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್

ಯಡಿಯೂರಪ್ಪ

Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್‌ ಯಡಿಯೂರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

11-kundagol’

Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

13-

Gundlupete: ವಿದ್ಯುತ್ ತಂತಿಗೆ ಸಿಲುಕಿ ಮರಿಯಾನೆ ಸಾವು

Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ

Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ

12-sirsi

Sirsi: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ

EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್‌ ಟೀಕೆ

EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್‌ ಟೀಕೆ

11-sirsi

Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.