ಪ್ರಾಮಾಣಿಕತೆ ಮೆರೆದ ಬಸ್ ಚಾಲಕ-ನಿರ್ವಾಹಕ
Team Udayavani, Nov 28, 2019, 12:11 PM IST
ಕಲಘಟಗಿ: ಗಂಜೀಗಟ್ಟಿ-ಹುಬ್ಬಳ್ಳಿ ನಡುವೆ ಸಂಚರಿಸುತ್ತಿದ್ದ ಸಾರಿಗೆ ಬಸ್‌ನಲ್ಲಿದ್ದ ಮಹಿಳೆಯೊಬ್ಬರು ಕಳೆದುಕೊಂಡ ಚಿನ್ನಾಭರಣವಿದ್ದ ಪರ್ಸ್ ಅನ್ನು ನಿರ್ವಾಹಕ ಮತ್ತು ಚಾಲಕ ಮರಳಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ. ಗ್ರಾಮದ ನಿವಾಸಿ ಅಂಬಿಕಾ ಹಿರೇಮಠ ಎಂಬುವವರು ಮರಳಿ ಪರ್ಸ್ ಪಡೆದವರು.
ಇವರು ಹುಬ್ಬಳ್ಳಿಯಿಂದ ಗಂಜಿಗಟ್ಟಿಗೆ ಸಾರಿಗೆ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಸುಮಾರು 1.5 ಲಕ್ಷಕ್ಕೂ ಹೆಚ್ಚು ಮೌಲ್ಯದ ಬಂಗಾರದ ತಾಳಿ ಸರ್ ಇಟ್ಟಿರುವ ಪರ್ಸ್‌ನ್ನು ಬಸ್‌ನಲ್ಲಿಯೇ ಬೀಳಿಸಿಕೊಂಡಿದ್ದರು. ನಂತರ ಮನೆಗೆ ಹೋಗಿ ನೋಡುತ್ತಿದ್ದಂತೆ ಚೀಲದಲ್ಲಿದ್ದ ಪರ್ಸ್ ಇರಲಿಲ್ಲ. ತಿರುಗಿ ಗ್ರಾಮದ ಬಸ್ ನಿಲ್ದಾಣಕ್ಕೆ ಬಂದರೆ ಬಸ್ ಹುಬ್ಬಳ್ಳಿಗೆ ಹೋಗಿತ್ತು. ಫೋನ್‌ಮೂಲಕ ಚಾಲಕ ಮತ್ತು ನಿರ್ವಾಹಕರಿಗೆ ವಿಷಯ ತಿಳಿಸಿದ್ದಾರೆ.
ಅವರು ಬಸ್‌ನಲ್ಲಿ ಹುಡುಕಿದಾಗ ಪರ್ಸ್ ದೊರಕಿದೆ. ಮರುದಿನ ಮಹಿಳೆಗೆ ಪರ್ಸ್‌ನ್ನು ಹಿಂತಿರುಗಿಸಿದ್ದಾರೆ. ಪ್ರಾಮಾಣಿಕತೆ ಮೆರೆದ ನಿರ್ವಾಹಕ ರಮೇಶ ಹಡಪದ ಹಾಗೂ ಚಾಲಕ ಶಿವಪ್ಪ ಮಂಕಣಿ ಅವರನ್ನು ಗ್ರಾಮದ ನಾಗಲಿಂಗಯ್ಯ ಹಿರೇಮಠಹಾಗೂ ಗ್ರಾಪಂ ಸದಸ್ಯ ಅಶೋಕ ಅರಳಿ ಸತ್ಕರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಜೋಶಿ ಅವರಿಗೆ ನನ್ನ ಸಾಮರ್ಥ್ಯ ಗೊತ್ತಿಲ್ಲ… ಅಸಮರ್ಥ ಹೇಳಿಕೆಗೆ ತಿರುಗೇಟು ನೀಡಿದ ಪರಮೇಶ್ವರ್
Alnavar: ಟಿಟಿ- ಕ್ಯಾಂಟರ್ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Congress: ಚುನಾವಣಾ ನಿಯಮ ತಿದ್ದುಪಡಿ ಪ್ರಶ್ನಿಸಿ ಕಾಂಗ್ರೆಸ್ ಸುಪ್ರೀಂ ಕೋರ್ಟ್ ಗೆ
Jasprit Bumrah ಬೌಲಿಂಗ್ ಶೈಲಿಯನ್ನೇ ಶಂಕಿಸಿದ ಆಸೀಸ್ ಮಾಧ್ಯಮಗಳು!
Mangaluru: ಎರಡು ಸೈಬರ್ ವಂಚನೆ ಪ್ರಕರಣ: ಸೆನ್ ಪೊಲೀಸರಿಂದ ಇಬ್ಬರ ಬಂಧನ
High Court: ಕಬ್ಬಿಣದ ಅದಿರಿಗೆ ದರ ನಿಗದಿ: ಕೇಂದ್ರ, ರಾಜ್ಯಕ್ಕೆ ನೋಟಿಸ್
Valmiki Nigama Scam: ಪ್ರಕರಣ ರದ್ದು ಕೋರಿ ಮಾಜಿ ಸಚಿವ ನಾಗೇಂದ್ರ ಹೈಕೋರ್ಟ್‌ಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.