ಕ್ಷೇತ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ 


Team Udayavani, May 9, 2018, 5:42 PM IST

9-May-22.jpg

ರಾಮದುರ್ಗ: ರೈತರು ಹಾಗೂ ಸಾರ್ವಜನಿಕರಿಗೆ ಉಪಯುಕ್ತವಾಗುವ ರೀತಿಯಲ್ಲಿ ಅನೇಕ ಅಭಿವೃದ್ಧಿ ಕಾರ್ಯ ಮಾಡಿರುವೆ. ಆ ನಿಟ್ಟಿನಲ್ಲಿ ನೀರಾವರಿಯಿಂದ ವಂಚಿತವಾದ ಈ ಭಾಗಕ್ಕೆ ಸುಮಾರು 12 ಕೋಟಿ ಅನುದಾನದಲ್ಲಿ ವೀರಭದ್ರೇಶ್ವರ ಹಾಗೂ ಸಾಲಾಪುರ ಬಸವೇಶ್ವರ ಏತ ನೀರಾವರಿ ಯೋಜನೆ ತರಲಾಗಿದೆ ಎಂದು ಕಾಂಗ್ರೆಸ್‌ ಅಭ್ಯರ್ಥಿ, ಶಾಸಕ ಅಶೋಕ ಪಟ್ಟಣ ಹೇಳಿದರು.

ತಾಲೂಕಿನ ಸಾಲಾಪುರದಲ್ಲಿ ಪ್ರಚಾರ ಸಭೆ ಉದ್ದೇಶಿಸಿ ಮಾತನಾಡಿದ ಅವರು, ವಿನಾಕಾರಣ ವಿರೋಧ ಪಕ್ಷದವರು ಆರೋಪ ಮಾಡುತ್ತಿದ್ದಾರೆ. ನಾನು ಪ್ರಾಮಾಣಿಕವಾಗಿ ಅಭಿವೃದ್ಧಿ ಕಾರ್ಯ ಮಾಡಿರುವೆ. ಈ ಭಾಗಕ್ಕೆ ರಸ್ತೆ, ಸಮುದಾಯ ಭವನ, ಬಸ್‌ ನಿಲ್ದಾಣ ಸೇರಿದಂತೆ ಅನೇಕ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದೆ ಎಂದರು.

ಶಾಸಕನಾಗಿ ನನ್ನ ಕೆಲಸ ಮಾಡಿದ್ದೇನೆ. ಅಭಿವೃದ್ಧಿ ನೋಡಿ ನನಗೆ ಮತ ನೀಡಿ. ಮೇ 12 ರಂದು ಮತದಾನವಿದ್ದು, ಕಾಂಗ್ರೆಸ್‌ಗೆ ಮತ ನೀಡಿ ನನ್ನ ಗೆಲುವಿಗೆ ಕೈ ಜೋಡಿಸಬೇಕು ಎಂದು ಮನವಿ ಮಾಡಿದರು.

ಧನಲಕ್ಷ್ಮೀ ಸಹಕಾರಿ ಸಕ್ಕರೆ ಕಾರ್ಖಾನೆ ನಿರ್ದೇಶಕ ಬಸವರಾಜ ಹಿರೇರಡ್ಡಿ ಮಾತನಾಡಿ, ಶಾಸಕ ಅಶೋಕ ಪಟ್ಟಣ ಯಾವುದೇ ಭಾಗಕ್ಕೆ ತಾರತಮ್ಯ ಮಾಡದೇ ಅಭಿವೃದ್ಧಿ ಕೈಗೊಂಡಿದ್ದಾರೆ. ಅಂತವರ ಗೆಲುವಿಗೆ ಒಟ್ಟಾಗಿ ಶ್ರಮಿಸಬೇಕಿದೆ ಎಂದರು.

ಗ್ರಾಪಂ ಮಾಜಿ ಅಧ್ಯಕ್ಷ ಸೋಮಶೇಖರ ಹಂಪನ್ನವರ, ಜಿಪಂ ಸದಸ್ಯ ಕೃಷ್ಣಪ್ಪ ಲಮಾಣಿ, ಗ್ರಾಪಂ ಅಧ್ಯಕ್ಷ ಮಾನಿಂಗಪ್ಪ ಹಂಪಿಹೊಳಿ, ಮುಖಂಡರಾದ ಕಲ್ಲಣ್ಣ ವಜ್ರಮಟ್ಟಿ, ಬಸವರಾಜ ಪ್ಯಾಟಿಗೌಡ್ರ, ಸೋಮು ಲಮಾಣಿ, ನಿಂಗನಗೌಡ ಪಾಟೀಲ, ಜಗದೀಶ ದೇಸಾಯಿ, ಶಿವಪ್ಪ ಸುಣಗದ, ಯಲ್ಲಪ್ಪ ಅವರಾದಿ, ಹನಮಂತ ಬಂಡಿವಡ್ಡರ, ಶಿವಾನಂದ ಲಗಳಿ ಉಪಸ್ಥಿತರಿದ್ದರು. ಓಬಳಾಪುರ ತಾಂಡಾ, ದಾಡಿಬಾಂವಿ ತಾಂಡಾ, ಓಬಳಾಪುರ ಎಸ್‌.ಎಲ್‌.ಟಿ, ದಾಡಿಬಾಂವಿ, ಸಾಲಾಪುರ ತಾಂಡಾ, ವೆಂಕಟಾಪುರ, ಸೊಪ್ಪಡ್ಲ, ಓಬಳಾಪುರ, ಓಬಳಾಪುರ ಡಿಎಲ್‌ಡಿ, ಗೊಣ್ಣಾಗರ, ಮಾರಡಗಿ,
ಹುಲಿಗೊಪ್ಪ, ಕೊಳಚಿ, ಘಟಕನೂರ, ಚಿಂಚಖಂಡಿ, ದೊಡಮಂಗಡಿ ಗ್ರಾಮಗಳಲ್ಲಿ ಶಾಸಕರು ಮತಯಾಚನೆ ಮಾಡಿದರು.

ಟಾಪ್ ನ್ಯೂಸ್

Fraud: “ವಿಡಿಯೋಗೆ ಲೈಕ್‌ ನೀಡಿ’ 13.97 ಲಕ್ಷ ಕಳೆದುಕೊಂಡರು!

Fraud: “ವಿಡಿಯೋಗೆ ಲೈಕ್‌ ನೀಡಿ’ 13.97 ಲಕ್ಷ ಕಳೆದುಕೊಂಡರು!

Surathkal: ಅಂಗನವಾಡಿ ಎದುರು ನಿಲ್ಲಿಸಿದ್ದ ಕಾರಿಗೆ ಬೆಂಕಿ…

Surathkal: ಅಂಗನವಾಡಿ ಎದುರು ನಿಲ್ಲಿಸಿದ್ದ ಕಾರು ಬೆಂಕಿಗಾಹುತಿ

4-gangavathi

Gangavathi: ಪತ್ನಿ ವರದಕ್ಷಿಣೆ ತಂದಿಲ್ಲ ಎಂದು ಮನೆಗೆ ಬೀಗ ಹಾಕಿ ಪತಿ ಹಾಗೂ ಮನೆಯವರು ಪರಾರಿ

Video: ಮದುವೆ ಸಂಭ್ರಮದಲ್ಲಿದ್ದ ವರನಿಗೆ ಹೃದಯಾಘಾತ… ಕುಟುಂಬ ಸದಸ್ಯರಿಗೆ ಆಘಾತ

Video: ಮದುವೆ ಸಂಭ್ರಮದಲ್ಲಿದ್ದ ವರನಿಗೆ ಹೃದಯಾಘಾತ… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು

BBK11: ಬಿಗ್‌ ಬಾಸ್‌ ಮನೆಯಲ್ಲಿ ಶೋಭಾ ಆರ್ಭಟಕ್ಕೆ ಗಪ್‌ ಚುಪ್‌ ಆದ ಮಂಜು.!

BBK11: ಬಿಗ್‌ ಬಾಸ್‌ ಮನೆಯಲ್ಲಿ ಶೋಭಾ ಆರ್ಭಟಕ್ಕೆ ಗಪ್‌ ಚುಪ್‌ ಆದ ಮಂಜು.!

Maharastra: ಕಾರಿನ ಮೇಲೆ ಕಲ್ಲು ತೂರಾಟ… ಮಾಜಿ ಸಚಿವ ಅನಿಲ್ ದೇಶಮುಖ್ ಹಣೆಗೆ ಗಾಯ

Maharastra: ಕಾರಿನ ಮೇಲೆ ಕಲ್ಲು ತೂರಾಟ… ಮಾಜಿ ಸಚಿವ ಅನಿಲ್ ದೇಶಮುಖ್ ಹಣೆಗೆ ಗಾಯ

Maha-Leaders

Assembly Election: ಮಹಾರಾಷ್ಟ್ರ ಕದನದಲ್ಲಿ ಘಟಾನುಘಟಿಗಳ ಭವಿಷ್ಯ ಪಣಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ

Hubli: Bankrupt govt cutting BPL card: Prahlada Joshi

Hubli: ದಿವಾಳಿಯಾದ ಸರ್ಕಾರ ಬಿಪಿಎಲ್‌ ಕಾರ್ಡ್‌ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ

Yathanaa

Waqf Issue: ಮೂರು ತಂಡ ರಚನೆಗೆ ಅವ್ವ-ಅಪ್ಪ ಏನೂ ಇಲ್ಲ: ಬಸನಗೌಡ ಪಾಟೀಲ್‌ ಯತ್ನಾಳ್‌ ಆಕ್ಷೇಪ

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ

Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

‌Max Movie: ಬಿಗ್‌ ಬಾಸ್‌ ವೇದಿಕೆಯಲ್ಲಿ  ʼಮ್ಯಾಕ್ಸ್‌ʼ ಬಗ್ಗೆ ಮಾತನಾಡಿದ ಕಿಚ್ಚ ಸುದೀಪ್

‌Max Movie: ಬಿಗ್‌ ಬಾಸ್‌ ವೇದಿಕೆಯಲ್ಲಿ ʼಮ್ಯಾಕ್ಸ್‌ʼ ಬಗ್ಗೆ ಮಾತನಾಡಿದ ಕಿಚ್ಚ ಸುದೀಪ್

Fraud: “ವಿಡಿಯೋಗೆ ಲೈಕ್‌ ನೀಡಿ’ 13.97 ಲಕ್ಷ ಕಳೆದುಕೊಂಡರು!

Fraud: “ವಿಡಿಯೋಗೆ ಲೈಕ್‌ ನೀಡಿ’ 13.97 ಲಕ್ಷ ಕಳೆದುಕೊಂಡರು!

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

Surathkal: ಅಂಗನವಾಡಿ ಎದುರು ನಿಲ್ಲಿಸಿದ್ದ ಕಾರಿಗೆ ಬೆಂಕಿ…

Surathkal: ಅಂಗನವಾಡಿ ಎದುರು ನಿಲ್ಲಿಸಿದ್ದ ಕಾರು ಬೆಂಕಿಗಾಹುತಿ

6

Accident: ಆರೋಪಿ ಸೆರೆಗೆ 200 ಕ್ಯಾಮೆರಾ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.