ಜಾನುವಾರು ಆರೋಗ್ಯಕ್ಕೆ ಪ್ರಾಮಾಣಿಕವಾಗಿ ಶ್ರಮಿಸಿ: ಶಾಸಕ
Team Udayavani, Oct 16, 2019, 10:28 AM IST
ಕಲಘಟಗಿ: ರೈತ ವರ್ಗದ ಬಾಳ ಸಂಗಾತಿ ಜಾನುವಾರುಗಳಲ್ಲಿ ಹರಡುವ ಕಾಲು ಬಾಯಿ ರೋಗ ನಿರ್ಮೂಲನೆ ಗುರಿ ಹೊಂದಿರುವ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯನ್ನು ಯಶಸ್ವಿಗೊಳಿಸಲು ಪಶುಪಾಲನಾ ಇಲಾಖೆಯ ಎಲ್ಲ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗ ಪ್ರಾಮಾಣಿಕವಾಗಿ ಶ್ರಮಿಸಬೇಕೆಂದು ಶಾಸಕ ಸಿ.ಎಂ. ನಿಂಬಣ್ಣವರ ಹೇಳಿದರು.
ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಯೋಜನೆಯಡಿ ತಾಲೂಕಿನಾದ್ಯಂತ ಜರುಗಲಿರುವ 16ನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಅಭಿಯಾನಕ್ಕೆ ಪಟ್ಟಣದ ಪಶುಆಸ್ಪತ್ರೆ ಆವರಣದಲ್ಲಿ ಚಾಲನೆ ನೀಡಿ ಅವರು ಮಾತನಾಡಿದರು.
ಕಳೆದ 2-3 ವರ್ಷಗಳಲ್ಲಿ ಕಲಘಟಗಿ ಮತಕ್ಷೇತ್ರದಲ್ಲಿ ಈ ರೋಗಗಳು ಕಾಣಿಸಿಕೊಂಡ ವರದಿಯಾಗಿಲ್ಲ. ಮುಂಬರುವ ದಿನಗಳಲ್ಲಿಯೂ ಈ ರೋಗಗಳು ಕಾಣಿಸಿಕೊಳ್ಳದಂತೆ ಜಾಗೃತಿ ವಹಿಸಿ ಕಾರ್ಯನಿರ್ವಹಿಸಬೇಕು. ಎಲ್ಲ ರೈತ ಬಾಂಧವರು ಸಹಕರಿಸಿ ತಮ್ಮಲ್ಲಿರುವ ಎಲ್ಲ ಜಾನುವಾರುಗಳಿಗೆ ಕಡ್ಡಾಯವಾಗಿ ಲಸಿಕೆ ಹಾಕಿಸಬೇಕೆಂದರು.
ಪಶು ಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಸಹಾಯಕ ನಿರ್ದೇಶಕ ಡಾ| ಎಸ್.ವಿ. ಸಂತಿ ಮಾತನಾಡಿ, ಅ. 14 ರಿಂದ ನ. 4ರ ವರೆಗೆ ನಡೆವ ಅಭಿಯಾನದಲ್ಲಿ ರೈತರ ಮನೆ ಬಾಗಿಲಿಗೆ ಹೊಗಿ ಲಸಿಕೆ ಹಾಕುವ ಗುರಿ ಇಟ್ಟುಕೊಳ್ಳಲಾಗಿದೆ. ಇದಕ್ಕಾಗಿ 7 ಲಸಿಕಾ ತಂಡಗಳನ್ನು ರಚಿಸಲಾಗಿದೆ. ಪ್ರತಿ ತಂಡದಲ್ಲಿ 5ರಂತೆ ಒಟ್ಟು 35 ಲಸಿಕೆದಾರರು ಗ್ರಾಮವಾರು ಸಿದ್ಧಪಡಿಸಿದ ವೇಳಾಪಟ್ಟಿಯಂತೆ ಪ್ರತಿ ಗ್ರಾಮಕ್ಕೆ ಭೇಟಿ ನೀಡಿ ಲಸಿಕೆ ಹಾಕಲಿದ್ದಾರೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Alnavar: ಟಿಟಿ- ಕ್ಯಾಂಟರ್ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್
Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ
Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ
Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್ ಗೋಯಲ್
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.