ಡಾ|ಮಹಾಂತ ಶಿವಯೋಗಿಗಳಿಗೆ ಗೌರವ ನಮನ
Team Udayavani, May 21, 2018, 5:26 PM IST
ಇಳಕಲ್ಲ: ವ್ಯಸನಮುಕ್ತ ಸಮಾಜ ನಿರ್ಮಾಣಕ್ಕಾಗಿ ತಮ್ಮ ಜೀವನವನ್ನು ಮುಡುಪಾಗಿಟ್ಟಿದ್ದ, ಮಹಾಂತ ಜೋಳಿಗೆಯ ಮೂಲಕ ಕ್ರಾಂತಿಕಾರಿ ಹೋರಾಟ ನಡೆಸಿದ್ದ ಇಳಕಲ್ಲ-ಚಿತ್ತರಗಿ ವಿಜಯ ಮಹಾಂತೇಶ್ವರ ಸಂಸ್ಥಾನಮಠದ ಡಾ|ಮಹಾಂತ ಶಿವಯೋಗಿಗಳ ಅಂತ್ಯಕ್ರಿಯೆ ಸೋಮವಾರ ಬೆಳಗ್ಗೆ ಇಳಕಲ್ಲದ
ಗದ್ದುಗೆಯಲ್ಲಿ ನೆರವೇರಲಿದೆ.
ಇದಕ್ಕೂ ಮುಂಚೆ ಆರ್.ವೀರಮಣಿ ಕ್ರೀಡಾಂಗಣದಿಂದ ನಗರದ ಪ್ರಮುಖ ಬೀದಿಗಳಲ್ಲಿ ಶ್ರೀಗಳ ಪಾರ್ಥಿವ ಶರೀರದ ಮೆರವಣಿಗೆ ನಡೆಯಲಿದೆ. ನಾಡಿನ ಮಠಾಧೀಶರು, ಶರಣರು ಹಾಗೂ ಸಾವಿರಾರು ಭಕ್ತರು ಪಾಲ್ಗೊಳ್ಳಲಿದ್ದಾರೆ.
ಸವದಿ-ಹಿಪ್ಪರಗಿಯಲ್ಲಿ ದರ್ಶನ: ಬೆಳಗಾವಿಯ ಕೆಎಲ್‌ಇ ಆಸ್ಪತ್ರೆಯಲ್ಲಿ ಶನಿವಾರ ಬೆಳಗ್ಗೆ ಲಿಂಗೈಕ್ಯರಾದ ಮಹಾಂತ ಶ್ರೀಗಳ ಪಾರ್ಥೀವ ಶರೀರವನ್ನು ಆಸ್ಪತ್ರೆಯಿಂದ ಗುರುಗಳು ಈ ಹಿಂದೆ ಪಟ್ಟಾಧಿಕಾರಿಯಾಗಿದ್ದ ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಸವದಿ ಮಠಕ್ಕೆ ತರಲಾಯಿತು. ಅಲ್ಲಿ ಸಾವಿರಾರು ಭಕ್ತರು ಶ್ರೀಗಳ ಅಂತಿಮ ದರ್ಶನ ಪಡೆದರು. ಭಕ್ತರ ಅಪೇಕ್ಷೆ ಮೇರೆಗೆ ಪೂಜ್ಯರ ಪೂರ್ವಾಶ್ರಮದ ಹುಟ್ಟೂರು ಜಮಖಂಡಿ ತಾಲೂಕಿನ ಹಿಪ್ಪರಗಿಗೆ ತರಲಾಯಿತು. ಅಲ್ಲಿ ನೂರಾರು ಭಕ್ತರು, ಶ್ರೀಗಳಿಗೆ ಅಂತಿಮ ನಮನ ಸಲ್ಲಿಸಿ ಕಂಬನಿ ಮಿಡಿದರು.
ಹಿಪ್ಪರಗಿಯಿಂದ ನೇರವಾಗಿ ಬಾಗಲಕೋಟೆ ನಗರದ ಪ್ರತಿಷ್ಠಿತ ಬಸವೇಶ್ವರ ವೀರಶೈವ ವಿದ್ಯಾರ್ವಧಕ ಸಂಘದ ಆವರಣದಲ್ಲಿರುವ ಲಿಂ| ಬೀಳೂರು ಗುರುಬಸವ ಅಜ್ಜನವರ ಗುಡಿ ಎದುರು ಪೂಜ್ಯರ ಪಾರ್ಥಿವ ಶರೀರ ಇರಿಸಲಾಯಿತು. ಬಿವಿವಿ ಸಂಘದಿಂದ ಅಂತಿಮ ನಮನ ಸಲ್ಲಿಸಲಾಯಿತು. 44 ವರ್ಷಗಳ ಬಿವಿವಿ ಸಂಘದ ಅಧ್ಯಕ್ಷರಾಗಿದ್ದ ಶ್ರೀಗಳ ಸೇವೆಯನ್ನು, ಸಂಘದ ಆಡಳಿತ ಮಂಡಳಿಯ ಪ್ರಮುಖರು ಸ್ಮರಿಸಿದರು. ಗಣ್ಯರು-ಮಠಾಧೀಶರ ದರ್ಶನ: ರಾತ್ರಿ ಬಿವಿವಿ ಸಂಘದ ಆವರಣದಿಂದ ನೇರವಾಗಿ ಇಳಕಲ್ಲದ ವಿಜಯ ಮಹಾಂತೇಶ್ವರ ಮಠಕ್ಕೆ ಕರೆ ತರಲಾಯಿತು. ಸಾವಿರಾರು ಭಕ್ತರು, ಸಾರ್ವಜನಿಕರು ಶ್ರೀಗಳ ಅಂತಿಮ ದರ್ಶನ ಪಡೆಯಲು ಕಾದು ಕುಳಿತಿದ್ದರು.
ರವಿವಾರ ಬೆಳಗ್ಗೆ ಶ್ರೀಗಳ ಪಾರ್ಥಿವ ಶರೀರವನ್ನು ನಗರದ ಆರ್. ವೀರಮಣಿ ಕ್ರೀಡಾಂಗಣಕ್ಕೆ ಕೊಂಡೊಯ್ಯಲಾಯಿತು. ಬೃಹತ್ ಆವರಣದಲ್ಲಿ ಭಕ್ತರ ದರ್ಶನಕ್ಕೆ ಇರಿಸಲಾಗಿದ್ದು, ನಾಡಿನ ವಿವಿಧ ಗಣ್ಯರು, ಮಠಾಧೀಶರು ಭೇಟಿ ನೀಡಿ ಅಂತಿಮ ನಮನ ಸಲ್ಲಿಸಿದರು. ಉತ್ತರಾಧಿಕಾರಿ ಶ್ರೀ ಗುರುಮಹಾಂತ ಸ್ವಾಮೀಜಿ, ಕೂಡಲಸಂಗಮದ ಪಂಚಮಸಾಲಿ ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ, ದಾವಣಗೆರೆಯ ಪಂಚಮಸಾಲಿ ಪೀಠದ ಶ್ರೀ ವಚನಾನಂದ ಸ್ವಾಮೀಜಿ ಉಸ್ತುವಾರಿ ವಹಿಸಿದ್ದರು.
ಕೊಪ್ಪಳದ ಗವಿಸಿದ್ದೇಶ್ವರ ಸ್ವಾಮೀಜಿ, ಕೋಡಿಮಠ ಶ್ರೀಗಳು ಡಾ| ಮಹಾಂತ ಶಿವಯೋಗಿಗಳ ಅಂತಿಮ ದರ್ಶನ ಪಡೆದರು. ಮಾಜಿ ಸಚಿವ, ಬಬಲೇಶ್ವರದ ಶಾಸಕ ಎಂ.ಬಿ. ಪಾಟೀಲ, ಹುನಗುಂದ ಶಾಸಕ ದೊಡ್ಡನಗೌಡ ಪಾಟೀಲ, ಉದ್ಯಮಿ ಎಸ್.ಆರ್. ನವಲಿ ಹಿರೇಮಠ, ಬಿಜೆಪಿ ಸ್ಲಂ ಮೋರ್ಚಾ ರಾಜ್ಯ ಉಪಾಧ್ಯಕ್ಷ ಡಾ|ಆರ್. ಮಾರುತೇಶ ಮುಂತಾದವರು ಶ್ರೀಗಳ ಅಂತಿಮ ದರ್ಶನ ಪಡೆದು, ಕಂಬನಿ ಮಿಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ
Hubballi: ಬಂಧಿಸಲು ಹೋದ ಪೊಲೀಸರ ಮೇಲೆ ದಾಳಿ… ಆರೋಪಿ ಕಾಲಿಗೆ ಗುಂಡೇಟು
Hubballi: ಸಿಲಿಂಡರ್ ಸ್ಫೋಟ ಪ್ರಕರಣ… ಮತ್ತೋರ್ವ ಕೊನೆಯುಸಿರು, ಮೃತರ ಸಂಖ್ಯೆ 8ಕ್ಕೆ ಏರಿಕೆ
ದಕ್ಷಿಣ ಭಾರತದ ಕುಸ್ತಿ ಚಾಂಪಿಯನ್‌ಶಿಪ್: ಚಿನ್ನ ಗೆದ್ದ ಧಾರವಾಡದ ಹಳ್ಳಿ ಪೈಲ್ವಾನ್
Dharwad; ನಾಲಿಗೆ ಹರಿಬಿಡುವ ನಾಯಕರ ಮೇಲೆ ಕ್ರಮ ಆಗಬೇಕು: ಶಾಸಕ ಬೆಲ್ಲದ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mysuru: ಇನ್ಫೋಸಿಸ್ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್ ಫ್ರಂ ಹೋಂ
Professional Life: ಚಿತ್ರರಂಗಕ್ಕೆ ನಟ ದರ್ಶನ್ ಮರುಪ್ರವೇಶ!
Demand: ಮನೆ ನಿರ್ಮಾಣ: ಶೇ.18 ಜಿಎಸ್‌ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ
Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ
Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್.ಷಡಾಕ್ಷರಿ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.