ಆಸ್ಪತ್ರೆ ದಾರಿ ಏಕಾಏಕಿ ಬಂದ್!
•ತಹಶೀಲ್ದಾರ್ ನೇತೃತ್ವದ ತಂಡದಿಂದ ದಡ್ಡಿಕಮಲಾಪುರದಲ್ಲಿ ಕಾರ್ಯಾಚರಣೆ
Team Udayavani, Jul 16, 2019, 2:10 PM IST
ಧಾರವಾಡ: ದಡ್ಡಿಕಮಲಾಪುರದಲ್ಲಿರುವ ಯೋಗ ಮತ್ತು ನಿಸರ್ಗ ಚಿಕಿತ್ಸಾ ಕೇಂದ್ರದ ಎದುರು ರಸ್ತೆ ಅಗೆದು ಹಾಕಲಾಗಿದೆ.
ಧಾರವಾಡ: ದಡ್ಡಿ ಕಮಲಾಪುರ ಬಳಿ ಇರುವ ಯೋಗ ಮತ್ತು ನಿಸರ್ಗ ಚಿಕಿತ್ಸಾ ಕೇಂದ್ರಕ್ಕೆ ಇರುವ ಏಕೈಕ ದಾರಿಯನ್ನು ಅಧಿಕಾರಿಗಳು ಸೋಮವಾರ ದಿಢೀರ್ ಬಂದ್ ಮಾಡಿದ್ದಾರೆ.
ಬೆಳ್ಳಂಬೆಳಗ್ಗೆ ಜೆಸಿಬಿ ಯಂತ್ರಗಳನ್ನು ಬಳಸಿದ ತಹಶೀಲ್ದಾರ್ ನೇತೃತ್ವದ ತಂಡ ಈ ಆಸ್ಪತ್ರೆಗೆ ಇರುವ ಮಾರ್ಗದ ಮೂರು ಕಡೆಗಳಲ್ಲಿ ತೆಗ್ಗು ತೋಡಿ ಹಾಕಿದ್ದು, ಆಸ್ಪತ್ರೆಗೆ ಬರುವವರು ಮತ್ತು ಹೋಗುವವರು ಪರದಾಡುವಂತಾಗಿದೆ. ಯಾವುದೇ ಮುನ್ನೆಚ್ಚರಿಕೆ ನೋಟಿಸ್ ನೀಡದೇ ಅಧಿಕಾರಿಗಳು ಈ ರೀತಿ ಮಾಡಿದ್ದಾರೆ ಎಂದು ಯೋಗ ಚಿಕಿತ್ಸಾ ಕೇಂದ್ರದ ಹಿರಿಯ ವೈದ್ಯರು ಅಧಿಕಾರಿಗಳ ವಿರುದ್ಧ ಕಿಡಿಕಾರಿದ್ದು, ಕೂಡಲೇ ಜಿಲ್ಲಾಧಿಕಾರಿಗಳು ಮಧ್ಯ ಪ್ರವೇಶ ಮಾಡಿ ಅಗತ್ಯ ಅನುಕೂಲ ಮಾಡಿಕೊಡಬೇಕು ಎಂದು ಆಗ್ರಹಿಸಿದ್ದಾರೆ.
ಏನಿದರ ಹಿನ್ನೆಲೆ?: ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕೇಂದ್ರಕ್ಕೆ ಧಾರವಾಡ-ಅಳ್ನಾವರ ಹೆದ್ದಾರಿಯಿಂದ ದಾರಿ ಇರಲಿಲ್ಲ. 2003ರಲ್ಲಿ ಅಂದಿನ ಜಿಲ್ಲಾಧಿಕಾರಿಗಳು ಇಲ್ಲಿನ ಸರ್ಕಾರಿ ಜಾಗೆಯಲ್ಲಿ ದಾಟಿಕೊಂಡು ಹೋಗುವುದಕ್ಕೆ ಅನುಮತಿ ನೀಡಿದ್ದರು. ಇದನ್ನು ಕಾಯಂ ಆಗಿ ಬಳಸಿಕೊಳ್ಳುವಂತೆ ಅಧಿಕೃತವಾಗಿ ಪತ್ರವೊಂದನ್ನು ಯೋಗ ಚಿಕಿತ್ಸಾ ಕೇಂದ್ರಕ್ಕೆ ನೀಡಿದ್ದರು. ಈವರೆಗೂ ಅದೇ ರೀತಿಯಾಗಿ ಮಾರ್ಗವಿತ್ತು. ಆದರೆ, ಇದ್ದಕ್ಕಿದ್ದಂತೆ ಇದೀಗ ಇದು ಸರ್ಕಾರದ ಜಾಗೆ. ಇಲ್ಲಿ ನಿಮ್ಮ ಹಕ್ಕಿನ ಯಾವ ಪತ್ರವೂ ನಮ್ಮ ಬಳಿ ಇಲ್ಲ. ಕೂಡಲೇ ಇದನ್ನು ತೆರವುಗೊಳಿಸಿ ಎಂದು ಸ್ಥಳದಲ್ಲಿಯೇ ಎಚ್ಚರಿಕೆ ನೀಡಿದ್ದಾರೆ. ಆದರೆ ಯಾವುದೇ ಸಮಯವನ್ನು ನೀಡದೆ, ನೋಟಿಸ್ ಕೂಡ ಕೊಡದೆ ಸೋಮವಾರ ಬೆಳಗ್ಗೆ ಕಂದಾಯ ಇಲಾಖೆ ಅಧಿಕಾರಿಗಳು ರಸ್ತೆಯನ್ನು ಅಗೆದು ಹಾಕಿದ್ದಾರೆ. ಇದರಿಂದ ಆಸ್ಪತ್ರೆ ವೈದ್ಯರು ಮತ್ತು ರೋಗಿಗಳು ಪರದಾಡುವಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
MUST WATCH
ಹೊಸ ಸೇರ್ಪಡೆ
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
Discipline: ಬದುಕಿನಲ್ಲಿ ಶಿಸ್ತಿರಲಿ
Chikkamagaluru: ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಗುಡಿಸಲು
Eye Surgeries: ವೈದ್ಯಕೀಯ ಪದವಿ ಪೂರ್ಣಗೊಳಿಸದೇ 44 ಕಣ್ಣಿನ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯ
Perth test: ಜೈಸ್ವಾಲ್-ರಾಹುಲ್ ಅಜೇಯ ಆಟ; ಪರ್ತ್ ನಲ್ಲಿ ಭಾರತದ ಮೇಲಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.