2ರ ವರೆಗೆ ಸ್ವಚ್ಛತೆಯೇ ಸೇವೆ ಅಭಿಯಾನ: ಜೋಶಿ
Team Udayavani, Sep 16, 2018, 5:11 PM IST
ಹುಬ್ಬಳ್ಳಿ: ದೇಶಾದ್ಯಂತ ನಡೆಯುತ್ತಿರುವ ಸ್ವಚ್ಛತಾ ಸೇವೆ ಅಭಿಯಾನದ ನಿಮಿತ್ತ ಮಂಟೂರ ರಸ್ತೆ ಅರಳಿಕಟ್ಟಿ ಕಾಲೋನಿಯಲ್ಲಿ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ ಶನಿವಾರ ನಡೆಯಿತು. ಸಂಸದ ಪ್ರಹ್ಲಾದ ಜೋಶಿ ಕಾರ್ತಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ರಾಷ್ಟ್ರಪಿತ ಮಹಾತ್ಮಾ ಗಾಂಧಿ ಅವರ 150ನೇ ಜಯಂತಿ ನಿಮಿತ್ತ ಸೆ. 15ರಿಂದ ಅ. 2ರ ವರೆಗೆ ದೇಶಾದ್ಯಂತ ಸ್ವಚ್ಛತಾ ಅಭಿಯಾನ ನಡೆಸಲಾಗುತ್ತಿದೆ. ನಗರದಲ್ಲಿರುವ ಎಲ್ಲ ಅಸ್ವತ್ಛ ಪ್ರದೇಶಗಳಲ್ಲಿ ಸಂಪೂರ್ಣವಾಗಿ ಸ್ವಚ್ಛತೆ ಮಾಡುವ ಕಾರ್ಯ ನಡೆಸಲಾಗುತ್ತದೆ ಎಂದರು.
ರಸ್ತೆಯಲ್ಲಿ ಕಸ ಎಸೆಯದೆ ಕಸ ಸಾಗಣೆ ವಾಹನ ಆಗಮಿಸಿದಾಗ ಅದರಲ್ಲಿ ಹಾಕುವ ಮೂಲಕ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಸೆ. 17ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜನ್ಮದಿನವಿದ್ದು, ಅಂದು ಆರೋಗ್ಯ ಶಿಬಿರ ಹಮ್ಮಿಕೊಳ್ಳಲಾಗುವುದು. ಸೆ. 25ರಂದು ಪಂ| ದೀನದಯಾಳ ಉಪಾಧ್ಯಾಯ ಅವರ ಜನ್ಮದಿನವಿದ್ದು ಅಲ್ಲಿವರೆಗೆ ಆರೋಗ್ಯ ಶಿಬಿರ ಮುಂದುವರಿಯಲಿದೆ ಎಂದರು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿಡಿಯೋ ಸಂವಾದ ಕಾರ್ಯಕ್ರಮ ನಡೆಯಿತು. ಉಪಮಹಾಪೌರ ಮೇನಕಾ ಹುರುಳಿ, ಮುಖಂಡರಾದ ವೀರಭದ್ರಪ್ಪ ಹಾಲಹರವಿ, ಶಿವು ಮೆಣಸಿನಕಾಯಿ, ಶಿವಾನಂದ ಮುತ್ತಣ್ಣವರ, ಅಶೋಕ ಕಾಟವೆ, ಚಂದ್ರಶೇಖರ ಗೋಕಾಕ, ಬಾಳು ಮಗಜಿಕೊಂಡಿ, ರಂಗಾ ಬದ್ದಿ, ರಂಗನಾಯಕ ತಪೇಲಾ, ಸತೀಶ ಶೇಜವಾಡಕರ, ರಾಜು ಕೋರ್ಯಾನಮಠ, ಗೋಪಾಲ ಬದ್ದಿ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Weather: ರಾಜ್ಯದ ಮೂರು ನಗರದಲ್ಲಿ ಹವಾಮಾನ ರಾಡಾರ್ ಸ್ಥಾಪನೆ: ಕೇಂದ್ರ ಸಚಿವ ಜೋಶಿ
BSY POCSO Case: ಜ.10ಕ್ಕೆ ವಿಚಾರಣೆ ಮುಂದೂಡಿದ ಧಾರವಾಡ ಹೈಕೋರ್ಟ್
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
ಹೊಸ ವರ್ಷದ ಕೊಡುಗೆ: ಬೈಸಿಕಲ್ ಉತ್ತೇಜನಕ್ಕೆ ಉಚಿತ ರೈಡ್
Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ
MUST WATCH
ಹೊಸ ಸೇರ್ಪಡೆ
BBK11: ನನ್ನನ್ನು ಸಾಬೀತು ಮಾಡಿಕೊಳ್ಳಲು ಅವಕಾಶ ಸಿಗಲಿಲ್ಲ: ದೊಡ್ಮನೆಯಲ್ಲಿ ಚೈತ್ರಾ ಅಳಲು..
Mangaluru: MCC ಬ್ಯಾಂಕ್ ಅಧ್ಯಕ್ಷರ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗೆ ಹೈಕೋರ್ಟ್ ತಡೆ
Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ
Kasaragod Crime News: ಬೀದಿ ನಾಯಿಗೆ ಹೆದರಿ ಓಡಿದ ಬಾಲಕ ಬಾವಿಗೆ ಬಿದ್ದು ಸಾವು
Alankaru: ಮನೆಯಲ್ಲಿ ಬೆಂಕಿ ದುರಂತ: ಎಲ್ಲ ವಸ್ತುಗಳು ಸುಟ್ಟು ಕರಕಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.