ಸಮಾಜದ ವೈಷಮ್ಯ ಸ್ಥಿತಿಗೆ ಭಗವದ್ಗೀತೆ ಸಂಜೀವಿನಿ
Team Udayavani, Oct 29, 2018, 5:30 PM IST
ಹುಬ್ಬಳ್ಳಿ: ಇಂದಿನ ವೈಷಮ್ಯ ಸ್ಥಿತಿಗೆ ಭಗವಾನ್ ಶ್ರೀಕೃಷ್ಣ ಬೋಧಿಸಿದ ಭಗವದ್ಗೀತೆ ಸಂಜೀವಿನಿಯಾಗಿದೆ. ಜೀವನದಲ್ಲಿ ಗೀತೆಯ ಅನುಸರಣೆಯಿಂದ ಉತ್ತಮ ಸಮಾಜ ನಿರ್ಮಿಸಬಹುದು ಎಂದು ಸೋಂದಾ ಸ್ವರ್ಣವಲ್ಲಿ ಮಹಾಸಂಸ್ಥಾನದ ಜಗದ್ಗುರು ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ಹೇಳಿದರು. ಭಗವದ್ಗೀತಾ ಅಭಿಯಾನ ಸಮರ್ಪಣಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ ರವಿವಾರ ಇಲ್ಲಿನ ಸ್ಟೇಶನ್ ರಸ್ತೆಯ ಶೃಂಗಾರ ಪ್ಯಾಲೇಸ್‌ನಲ್ಲಿ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಅವರು ಆಶೀರ್ವಚನ ನೀಡಿದರು.
ವಿಶ್ವದಲ್ಲಿ ಇಂದು ಭಯೋತ್ಪಾದನೆ ತಾಂಡವಾಡುತ್ತಿದೆ. ಉತ್ತಮವಾಗಿರುವ ಭಾರತೀಯ ಸಂಸ್ಕೃತಿಯ ಮೇಲೆ ಆಕ್ರಮಣಗಳು ನಡೆದಿದ್ದು, ಸಮಾಜ ದ್ವಂದ್ವದಲ್ಲಿ ಸಿಲುಕಿಕೊಂಡಿದೆ. ಮಾನಸಿಕ ನೆಮ್ಮದಿ ಕಳೆದುಕೊಂಡಿದೆ. ಇದೆಲ್ಲದರ ಪರಿಹಾರವಾಗಿ ಶ್ರೀಕೃಷ್ಣ ಉಪದೇಶಿಸಿದ ಭಗವದ್ಗೀತೆಯ ಅನುಷ್ಠಾನ ಮತ್ತು ಅನುಸಂಧಾನದಿಂದ ಮತ್ತೆ ಮಾನವ ಕುಲವನ್ನು ಉತ್ತಮ ಮಾರ್ಗದಲ್ಲಿ ಕೊಂಡೊಯ್ಯಲು ಸಾಧ್ಯವಾಗುತ್ತದೆ. ಅನೇಕ ದಿನಗಳಿಂದ ಅನೂಚಾನವಾಗಿ ನಡೆಸಿಕೊಂಡು ಬಂದಿರುವ ಈ ಗೀತಾ ಅಭಿಯಾನದ ಬೃಹತ್ ಸಮರ್ಪಣಾ ಸಮಾರಂಭ ನಗರದಲ್ಲಿ ಡಿಸೆಂಬರ್‌ನಲ್ಲಿ ನಡೆಯಲಿದೆ. ಭಕ್ತರು ತನು-ಮನ-ಧನದಿಂದ ಸೇವೆ ಸಲ್ಲಿಸಬೇಕು ಎಂದರು.
ಪದ್ಮಶ್ರೀ ಡಾ| ಎಂ.ಎಂ. ಜೋಶಿ ಮಾತನಾಡಿ, ಸ್ವರ್ಣವಲ್ಲಿ ಶ್ರೀಗಳು ಸಮಾಜಮುಖಿಯಾಗಿ ಭಗವದ್ಗೀತಾ ಅಭಿಯಾನ ಹಮ್ಮಿಕೊಳ್ಳುವ ಮೂಲಕ ನೈತಿಕತೆ ಮತ್ತು ಸಂಸ್ಕಾರ ಬಿತ್ತುತ್ತಿದ್ದಾರೆ. ಇಂಥ ಕಾರ್ಯಕ್ರಮಕ್ಕೆ ನಗರವು ಸದಾ ಸಿದ್ಧವಾಗಿದ್ದು, ಎಲ್ಲ ರೀತಿಯ ಸಹಕಾರ ನೀಡಲಾಗುವುದು ಎಂದು ಹೇಳಿದರು. ಬ್ರಾಹ್ಮಣ ಸಮಾಜದ ಮುಖಂಡ ಎಂ.ಬಿ. ನಾತು ಮಾತನಾಡಿ, ಗೀತಾ ಜಯಂತಿ ಡಿ. 19ರಂದು ಭಗವದ್ಗೀತಾ ಅಭಿಯಾನದ ಸಮರ್ಪಣೆ ನಡೆಯಲಿದೆ. ಇದಕ್ಕಾಗಿ ಈಗಾಗಲೇ ವಲಯಗಳನ್ನಾಗಿಸಿ ಪ್ರಚಾರ ಕಾರ್ಯ ನಡೆಸಲಾಗುತ್ತಿದೆ. ಲಕ್ಷಕ್ಕೂ ಅಧಿಕ ಜನತೆ ಆಗಮಿಸುವುದರಿಂದ ವಿವಿಧ ಸಮಿತಿ ರಚಿಸಲಾಗಿದೆ. ಮಾಡಬೇಕಾದ ಕೆಲಸ ಕಾರ್ಯಗಳಿಗೆ ಇನ್ನಷ್ಟು ವೇಗ ನೀಡಬೇಕಾಗಿದ್ದು, ಎಲ್ಲರೂ ಸಹಕರಿಸಬೇಕು ಎಂದರು.
ನ್ಯಾಯವಾದಿ ಬಿ.ಡಿ. ಹೆಗಡೆ, ವಿನಾಯಕ ಆಕಳವಾಡಿ, ಅನಂತ ಹೆಗಡೆ ಸೇರಿದಂತೆ ಇತರರು ಮಾತನಾಡಿ, ಶ್ರೀಗಳು ಸದಾಕಾಲ ಶ್ರೀಕೃಷ್ಣನ ಗೀತೆಯಿಂದಲೇ ಸಮಾಜದ ಉದ್ಧಾರವೆಂದು ಕಂಡಿದ್ದಾರೆ. ಆ ನಿಟ್ಟಿನಲ್ಲಿ ಸರ್ವ ಸಮಾಜದ ಏಳ್ಗೆ ಬಯಸಿ ಕಾರ್ಯಕ್ರಮ ಹಮ್ಮಿಕೊಂಡಿದ್ದು ಸಂತಸ ತಂದಿದೆ. ಕಾರ್ಯಕ್ರಮದ ಯಶಸ್ಸಿಗೆ ಶ್ರಮಿಸಲಾಗುವುದು ಎಂದರು.
ಎಸ್‌ಎಸ್‌ಕೆ ಸಮಾಜದ ನೀಲಕಂಠ ಜಡಿ, ವಿಠಲ ಲದ್ವಾ, ಗೀತಾ ಅಭಿಯಾನದ ಪ್ರಚಾರ ಸಮಿತಿ ಮುಖಂಡ ಎ.ಸಿ. ಗೋಪಾಲ, ಶೃಂಗಾರ ಪ್ಯಾಲೇಸ್ ಮಾಲೀಕ ತುಳಸಿದಾಸ ಧರ್ಮದಾಸ ಬಂಧುಗಳು, ಹೋಟೆಲ್ ಉದ್ಯಮಿ ಕೃಷ್ಣರಾಜ ಕೆಮ್ತೂರು, ಜುವೆಲರಿ ಮಾಲೀಕ ಶ್ರೀಕಾಂತ ಕರಿ, ನೀಲಕಂಠ ಆಕಳವಾಡಿ, ಕನ್ಹಯ್ನಾಲಾಲ್ ಠಕ್ಕರ, ಮನೋಹರ ಪರ್ವತಿ, ವೆಂಕಟರಮಣ ಹೆಗಡೆ, ಶ್ರೀಕಾಂತ ಹೆಗಡೆ ಮೊದಲಾದವರಿದ್ದರು. ವೀಣಾ ಶಿವರಾಮ ಹೆಗಡೆ ತಂಡದಿಂದ ಭಗವದ್ಗೀತಾ ಶ್ಲೋಕ ಪಠಣ ನಡೆಯಿತು. ಸುಭಾಸಸಿಂಗ ಜಮಾದಾರ ನಿರೂಪಿಸಿದರು. ಅರವಿಂದ ಮುತಗಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Weather: ರಾಜ್ಯದ ಮೂರು ನಗರದಲ್ಲಿ ಹವಾಮಾನ ರಾಡಾರ್ ಸ್ಥಾಪನೆ: ಕೇಂದ್ರ ಸಚಿವ ಜೋಶಿ
BSY POCSO Case: ಜ.10ಕ್ಕೆ ವಿಚಾರಣೆ ಮುಂದೂಡಿದ ಧಾರವಾಡ ಹೈಕೋರ್ಟ್
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
ಹೊಸ ವರ್ಷದ ಕೊಡುಗೆ: ಬೈಸಿಕಲ್ ಉತ್ತೇಜನಕ್ಕೆ ಉಚಿತ ರೈಡ್
Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Arrested: ಪೈಂಟ್ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ
Dharmasthala: ದೇವರ ದರ್ಶನ ಇನ್ನಷ್ಟು ಸುಲಲಿತ
ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್
Mollywood: ನಟಿ ಹನಿ ರೋಸ್ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ
OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.