ಮೀಸಲಾತಿ ಅರ್ಥಹೀನ ಮಾಡುವ ಹುನ್ನಾರ

Team Udayavani, Apr 15, 2021, 7:41 PM IST

15-4

ಹುಬ್ಬಳ್ಳಿ: ವಿಶ್ವಕಂಡ ಶ್ರೇಷ್ಠ ಮಾನವತಾವಾದಿ ಡಾ| ಬಿ.ಆರ್‌. ಅಂಬೇಡ್ಕರ್‌ ಅವರು ಸಾಮಾಜಿಕ ಕ್ರಾಂತಿಯ ಸಂಕೇತವಾಗಿದ್ದಲ್ಲದೇ, ತಳ ಸಮುದಾಯ ಜನರ ಶೋಷಣೆ ನಿವಾರಣೆಗೆ ನಿರಂತರ ಹೋರಾಡಿ ಅವರ ಬದುಕಿಗೆ ನೈಜ ಅರ್ಥ ಕೊಟ್ಟ ಕ್ರಾಂತಿಕಾರಕ ಶಿಲ್ಪಿಯಾಗಿದ್ದರು ಎಂದು ಶಾಸಕ ಪ್ರಸಾದ ಅಬ್ಬಯ್ಯ ಹೇಳಿದರು.

ಡಾ|ಬಿ.ಆರ್‌.ಅಂಬೇಡ್ಕರ್‌ ಅವರ 130ನೇ ಜಯಂತ್ಯುತ್ಸವ ನಿಮಿತ್ತ ಬುಧವಾರ ಸ್ಟೇಶನ್‌ ರಸ್ತೆಯ ಡಾ|ಬಿ.ಆರ್‌. ಅಂಬೇಡ್ಕರ್‌ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಅವರು ಮಾತನಾಡಿದರು. ಡಾ.ಬಿ.ಆರ್‌. ಅಂಬೇಡ್ಕರ್‌ ಅವರ ಜಯಂತಿ ದೇಶದ ಜನತೆಗೆ ರಾಷ್ಟ್ರೀಯ ಹಬ್ಬದಂತಾಗಿದೆ. ಶೋಷಿತ, ತಳಸಮುದಾಯ ಜನರು ಇಂದಿಗೂ ಆರಾಧ್ಯ ದೈವ ಎಂದು ಪೂಜಿಸುವ ಶ್ರೇಷ್ಠ ವ್ಯಕ್ತಿ ಅವರಾಗಿದ್ದಾರೆ. ಇಂದು ಎಲ್ಲೆಡೆ ಜಾತಿ ವ್ಯವಸ್ಥೆ ತಾಂಡವಾಡುತ್ತಿದ್ದ ಅಂದಿನ ಕಾಲದಲ್ಲಿ ಎಸ್ಸಿ-ಎಸ್ಟಿ- ಒಬಿಸಿ ಸಮುದಾಯವನ್ನು ಅವರು ರಕ್ಷಿಸಿದಂತೆ ಇಂದು ಅವರು ಬರೆದುಕೊಟ್ಟ ಸಂವಿಧಾನ ನಮ್ಮೆಲ್ಲರನ್ನು ರಕ್ಷಿಸುತ್ತಿದೆ ಎಂದರು. ಹಿಂದೂ ಕೋಡ್‌ ಬಿಲ್‌ ಮುಖಾಂತರ ಸ್ತ್ರೀಯರಿಗೆ ಸಾಮಾಜಿಕ ನ್ಯಾಯ, ಸಮಾನತೆಗಾಗಿ ಹೋರಾಡಿದ ಅವರು, ಕ್ಯಾಬಿನೇಟ್‌ನಲ್ಲಿ ಆ ಮಸೂದೆ ಬಿದ್ದು ಹೋದಾಗ ವಿಷಯಾಧಾರಿತವಾಗಿ ರಾಜಿನಾಮೆ ನೀಡಿ ಹೊರ ಬಂದ ಏಕೈಕ ರಾಜತಾಂತ್ರಿಕ ಆಗಿದ್ದಾರೆ. ಮಹಿಳೆಯರಿಗೆ ಮತದಾನ, ರಾಜಕೀಯ ಹಕ್ಕುಗಳೊಂದಿಗೆ ಎಲ್ಲ ಕ್ಷೇತ್ರದಲ್ಲೂ ಸಮಾನತೆಯ ಹಕ್ಕು ನೀಡಿದ್ದಾರೆ.

ದೇಶದಲ್ಲಿ ಶಿಕ್ಷಣ, ಆರೋಗ್ಯ, ಕೃಷಿ ಭೂಮಿ ರಾಷ್ಟ್ರೀಕರಣವಾಗಬೇಕೆಂದು ಅವರು ಕನಸು ಕಂಡಿದ್ದರು. ಆದರೆ, ಇಂದು ಅವೆಲ್ಲ ಖಾಸಗೀಕರಣಗೊಳ್ಳುತ್ತಿವೆ. ಇದರಲ್ಲಿ ಪರೋಕ್ಷವಾಗಿ ನಮ್ಮ ಮೀಸಲಾತಿ ಕಸಿಯುವ ಹುನ್ನಾರ ಅಡಗಿದೆ ಎಂದರು. ದೇಶದಲ್ಲಿ ಇಂತಿಷ್ಟೇ ಅವ ಧಿಗೆ ಮೀಸಲಾತಿ ಎಂಬ ನಿ ರ್ದಿಷ್ಟ ಕಾಲಮಿತಿಯಿಲ್ಲ. ದೇಶದಲ್ಲಿ ಎಲ್ಲಿಯವರೆಗೆ ಸಾಮಾಜಿಕ ಪಿಡುಗು, ಅಸಮಾನತೆ, ಶೋಷಣೆ, ಜಾತಿ ವ್ಯವಸ್ಥೆ ನಿವಾರಣೆಯಾಗುವುದಿಲ್ಲವೋ ಅಲ್ಲಿವರೆಗೂ ಮೀಸಲಾತಿ ಇದ್ದೆ ಇರುತ್ತದೆ ಎಂದು ಪ್ರತಿಪಾದಿಸಿದರು.

ಮುಖಂಡರಾದ ಸದಾನಂದ ಡಂಗನವರ, ವೆಂಕಟೇಶ ಮೇಸ್ತ್ರೀ, ಯಮನೂರು ಜಾಧವ, ಯಮನೂರು ಗುಡಿಹಾಳ, ದಶರಥ ವಾಲಿ, ವಿಜನಗೌಡ ಪಾಟೀಲ, ಗುರುನಾಥ ಉಳ್ಳಿಕಾಶಿ, ಪ್ರೇಮನಾಥ ಚಿಕ್ಕತುಂಬಳ, ಪ್ರಭು ಪ್ರಭಾಕರ, ಚೇತನ ಹಿರೇಕೆರೂರ, ಗಣೇಶ ದೊಡ್ಡಮನಿ, ಮಾರುತಿ ದೊಡ್ಡಮನಿ ಇನ್ನಿತರರಿದ್ದರು.

ಟಾಪ್ ನ್ಯೂಸ್

CKB-Crime

Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ

Rafael Nadal: ದೈತ್ಯ ಆಟಗಾರ ನಡಾಲ್‌ಗೆ ಸೋಲಿನ ವಿದಾಯ

Rafael Nadal Retire: ದೈತ್ಯ ಆಟಗಾರ ನಡಾಲ್‌ಗೆ ಸೋಲಿನ ವಿದಾಯ

Belagavi: ಬಾಲಕಿ ಮೇಲೆ ಅತ್ಯಾಚಾರ… ಆರೋಪಿಗೆ 20 ವರ್ಷ ಜೈಲು ಶಿಕ್ಷೆ

Belagavi: ಬಾಲಕಿ ಮೇಲೆ ಅತ್ಯಾಚಾರ… ಆರೋಪಿಗೆ 20 ವರ್ಷ ಜೈಲು ಶಿಕ್ಷೆ

BBK11: ಬಿಗ್ ಬಾಸ್ ಮನೆಯಲ್ಲಿ ದುಡ್ಡು ಕದ್ದು ಓಡಿದ ಚೈತ್ರಾ.! ಮನೆಮಂದಿ ಶಾಕ್

BBK11: ಬಿಗ್ ಬಾಸ್ ಮನೆಯಲ್ಲಿ ದುಡ್ಡು ಕದ್ದು ಓಡಿದ ಚೈತ್ರಾ.! ಮನೆಮಂದಿ ಶಾಕ್

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಟ್ರೋಫಿ ಪಂದ್ಯಾವಳಿ.. ಹಾಕಿ ಕಿರೀಟ ಉಳಿಸಿಕೊಂಡ ಭಾರತ

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಟ್ರೋಫಿ ಪಂದ್ಯಾವಳಿ.. ಹಾಕಿ ಕಿರೀಟ ಉಳಿಸಿಕೊಂಡ ಭಾರತ

BJP-JDS-congress-Party

By Election: ರಾಜ್ಯದ ಮೂರು ಕ್ಷೇತ್ರಗಳ ಪೈಕಿ ಎನ್‌ಡಿಎಗೆ ಯಾವುದು? ಕಾಂಗ್ರೆಸ್‌ಗೆ ಎಷ್ಟು?

55th IFFI Goa: 55ನೇ ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ವಿಧ್ಯುಕ್ತ ಚಾಲನೆ

55th IFFI Goa: 55ನೇ ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ವಿಧ್ಯುಕ್ತ ಚಾಲನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ

Hubli: Bankrupt govt cutting BPL card: Prahlada Joshi

Hubli: ದಿವಾಳಿಯಾದ ಸರ್ಕಾರ ಬಿಪಿಎಲ್‌ ಕಾರ್ಡ್‌ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ

Yathanaa

Waqf Issue: ಮೂರು ತಂಡ ರಚನೆಗೆ ಅವ್ವ-ಅಪ್ಪ ಏನೂ ಇಲ್ಲ: ಬಸನಗೌಡ ಪಾಟೀಲ್‌ ಯತ್ನಾಳ್‌ ಆಕ್ಷೇಪ

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

MUST WATCH

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

ಹೊಸ ಸೇರ್ಪಡೆ

CKB-Crime

Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ

Rafael Nadal: ದೈತ್ಯ ಆಟಗಾರ ನಡಾಲ್‌ಗೆ ಸೋಲಿನ ವಿದಾಯ

Rafael Nadal Retire: ದೈತ್ಯ ಆಟಗಾರ ನಡಾಲ್‌ಗೆ ಸೋಲಿನ ವಿದಾಯ

Belagavi: ಬಾಲಕಿ ಮೇಲೆ ಅತ್ಯಾಚಾರ… ಆರೋಪಿಗೆ 20 ವರ್ಷ ಜೈಲು ಶಿಕ್ಷೆ

Belagavi: ಬಾಲಕಿ ಮೇಲೆ ಅತ್ಯಾಚಾರ… ಆರೋಪಿಗೆ 20 ವರ್ಷ ಜೈಲು ಶಿಕ್ಷೆ

BBK11: ಬಿಗ್ ಬಾಸ್ ಮನೆಯಲ್ಲಿ ದುಡ್ಡು ಕದ್ದು ಓಡಿದ ಚೈತ್ರಾ.! ಮನೆಮಂದಿ ಶಾಕ್

BBK11: ಬಿಗ್ ಬಾಸ್ ಮನೆಯಲ್ಲಿ ದುಡ್ಡು ಕದ್ದು ಓಡಿದ ಚೈತ್ರಾ.! ಮನೆಮಂದಿ ಶಾಕ್

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಟ್ರೋಫಿ ಪಂದ್ಯಾವಳಿ.. ಹಾಕಿ ಕಿರೀಟ ಉಳಿಸಿಕೊಂಡ ಭಾರತ

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಟ್ರೋಫಿ ಪಂದ್ಯಾವಳಿ.. ಹಾಕಿ ಕಿರೀಟ ಉಳಿಸಿಕೊಂಡ ಭಾರತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.