Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್
ಕಾಂಗ್ರೆಸ್ ಸರ್ಕಾರಕ್ಕೆ ಮುಸ್ಲಿಮರ ಓಲೈಸುವುದು ಬಿಟ್ಟರೆ ಬೇರೆ ಏನು ಇಲ್ಲ: ವಿಪಕ್ಷ ಉಪನಾಯಕ
Team Udayavani, Dec 14, 2024, 8:34 PM IST
ಹುಬ್ಬಳ್ಳಿ: ಬೆಳಗಾವಿಯ ಸುವರ್ಣಸೌಧದ ಮುಂದೆ 2ಎ ಮೀಸಲಾತಿಗಾಗಿ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ಪಂಚಮಸಾಲಿ ಸಮುದಾಯದವರ ಮೇಲೆ ಪೊಲೀಸರು ನಡೆಸಿದ ಲಾಠಿಚಾರ್ಜ್ ಸಂಬಂಧಿಸಿ ಗೃಹ ಸಚಿವ ಪರಮೇಶ್ವರ್ ಹೇಳಿಕೆ ಹಾಗೂ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ವಿರುದ್ಧ ವಿಪಕ್ಷ ಬಿಜೆಪಿ ನಾಯಕರು ಮುಗಿಬಿದ್ದಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮುಸ್ಲಿಮರೆಂದರೆ ಪ್ರೀತಿ. ಅವರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು ಕೊಡುತ್ತಾರೆ ಎಂದು ವಿಧಾನಸಭೆ ವಿಪಕ್ಷ ಉಪನಾಯಕ ಅರವಿಂದ ಬೆಲ್ಲದ್ ಆಕ್ಷೇಪಿಸಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಹುಬ್ಬಳ್ಳಿಯಲ್ಲಿ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದವರಿಗೆ ಇವರು ಮುತ್ತು ಕೊಡುತ್ತಾರೆ, ಡಿಜೆ ಹಳ್ಳಿ, ಕೆಜೆ ಹಳ್ಳಿ ಗಲಭೆಕೋರರಿಗೆ ಮುತ್ತು ಕೊಡುತ್ತಾರೆ, ಕುಕ್ಕರ್ ಬಾಂಬ್ ಇಟ್ಟವರಿಗೂ ಮುತ್ತು ಕೊಡುತ್ತಾರೆ. ಆದರೆ ಶಾಂತ ರೀತಿಯಿಂದ ಹೋರಾಟ ಮಾಡಿದ ನಮ್ಮ ಮೇಲೆ ಲಾಠಿ ಚಾರ್ಜ್ ಮಾಡುತ್ತಾರೆ ಎಂದು ವಾಗ್ದಾಳಿ ಮಾಡಿದ್ದಾರೆ.
ಮುಸ್ಲಿಮರು ಬಿಟ್ಟು ಬೇರೆ ಯಾರು ಏನು ಕೇಳಬಾರದೇ?:
ಲಿಂಗಾಯತರಿಗೆ, ಒಕ್ಕಲಿಗರಿಗೆ, ಮರಾಠರಿಗೆ ಮೀಸಲಾತಿ ಕೊಡಲ್ಲ ಅಂತ ಘೋಷಣೆ ಮಾಡಲಿ. ಸಂವಿಧಾನಕ್ಕೆ ವಿರುದ್ಧವಾಗಿ ಮುಸ್ಲಿಮರಿಗೆ ಮೀಸಲಾತಿ ಕೊಡಲಾಗಿದೆ. ಅದರ ಬಗ್ಗೆ ಇವರು ಮಾತನಾಡಲ್ಲ. ಸಿಎಂ ಪ್ರಕಾರ ಮುಸ್ಲಿಮರು ಬಿಟ್ಟು ಬೇರೆ ಯಾರು ಏನು ಕೇಳಬಾರದು, ಏನೇ ಕೇಳಿದರೂ ಮುಸ್ಲಿಮರಷ್ಟೇ ಕೇಳಬೇಕು. ಕಾಂಗ್ರೆಸ್ ಸರ್ಕಾರ ನಮಗೆ ಮೀಸಲಾತಿ ಕೊಡುತ್ತೆ ಅಂತ ಗ್ಯಾರಂಟಿ ಇಲ್ಲ. ಲಾಠಿ ಚಾರ್ಜ್ ಸಂಪೂರ್ಣ ಜವಾಬ್ದಾರಿ ಸಿಎಂ ಸಿದ್ದರಾಮಯ್ಯನವರದ್ದು. ನಮ್ಮ ಸರ್ಕಾರ ಇದ್ದಾಗ ಇದಕ್ಕಿಂತ ಬಹಳ ಜನ ಕೂಡಿದ್ದರು. ಆವಾಗ ನಮ್ಮ ಸಿಎಂ ಮತ್ತು ಸಚಿವರು ಸೇರಿ ಒಂದು ಪರಿಹಾರ ಕಂಡು ಹಿಡಿಯಲು ಮುಂದಾಗಿದ್ವಿ ಎಂದು ಹೇಳಿದ್ದಾರೆ.
ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಸರ್ಕಾರಕ್ಕೆ ಮುಸ್ಲಿಮರ ಓಲೈಸುವುದು ಬಿಟ್ಟರೆ ಏನು ಇಲ್ಲ. ಹಿಂದೂ ಸಮಾಜ ಅವರಿಗೆ ಮತ ಹಾಕಿದೆ ಎನ್ನುವ ಕಲ್ಪನೆ ಕೂಡ ಅವರಿಗಿಲ್ಲ. ಕೇವಲ ಮುಸ್ಲಿಂ ಸಮಾಜದ ಬಗ್ಗೆ ಕಾಳಜಿ ಇದೆ. ಮುಸ್ಲಿಂ ಸಮಾಜಕ್ಕೂ ಕೊಡಲಿ, ನಾವು ಬೇಡ ಅನ್ನಲ್ಲ, ಆದರೆ ಬೇರೆಯವರೂ ಇದಾರಲ್ಲ. ಎಲ್ಲಾ ದುಡ್ಡು ಮೀಸಲಾತಿ ಮುಸ್ಲಿಂ ಸಮಾಜಕ್ಕೆ ಕೊಡುವುದಾದರೆ ಹೇಗೆ ಎಂದು ಪ್ರಶ್ನಿಸಿದ್ದಾರೆ.
ಮುಸ್ಲಿಮರಿಗೆ ಶೇ. 23 ಮೀಸಲಾತಿ ಕೊಟ್ಟರೆ ಹೇಗೆ?
ಶೇ. 36 ಒಬಿಸಿ ಮೀಸಲಾತಿ ಇದೆ. ಅದರಲ್ಲಿ ಶೇ. 23 ಮುಸ್ಲಿಂ ಸಮಾಜಕ್ಕಿದೆ. ಧರ್ಮ ಆಧಾರಿತ ಮೀಸಲಾತಿ ಇಲ್ಲ ಅಂತ ಅಂಬೇಡ್ಕರ್ ಸಂವಿಧಾನ ಹೇಳಿದೆ. ಶೈಕ್ಷಣಿಕ ಮತ್ತು ಸಾಮಾಜಿಕ ಆಧಾರದ ಮೇಲೆ ಮೀಸಲಾತಿ ಇದೆ. ಸಂಪೂರ್ಣ ಮುಸ್ಲಿಂ ಅಂತ ನಾಲ್ಕು ಪರ್ಸೆಂಟ್ ಕೆಟಗೆರಿ ಮಾಡಿದ್ದಾರೆ. ಕೆಟಗೆರಿ 2ಎ ದಲ್ಲಿ ಶೇ. 18 ರಷ್ಟು ಮುಸ್ಲಿಂಗೆ ನೀಡಿದ್ದಾರೆ. ಕೆಟಗೆರಿ 1ರಲ್ಲಿ ಮುಸ್ಲಿಂ ಸಮಾಜಕ್ಕೆ ನೀಡಿದ್ದಾರೆ. ಮುಸ್ಲಿಂಮರಿಗೆ ಶೇ. 23 ರಷ್ಟು ಕೊಟ್ಟರೆ ಬೇರೆಯವರು ಏನು ಮಾಡಬೇಕು? ಶೇ. 4 ರಷ್ಟು ಮೀಸಲಾತಿ ಸಂವಿಧಾನ ವಿರೋಧವಾಗಿ ಅದನ್ನ ತೆಗೆದು ಮರಾಠ, ಒಕ್ಕಲಿಗರು, ಲಿಂಗಾಯತರು, ರೆಡ್ಡಿಗೆ ಕೊಡಬೇಕು ಎಂದು ಅರವಿಂದ್ ಬೆಲ್ಲದ್ ಆಗ್ರಹಿಸಿದರು.
ರಾಹುಲ್ ಕೈಯಲ್ಲಿ ಹಿಡಿಯೋದು ಬೈಬಲ್:
ರಾಹುಲ್ ಗಾಂಧಿ ಕೈಯಲ್ಲಿ ಸಂವಿಧಾನ ಹಿಡಿದುಕೊಂಡವರ ಹಾಗೆ ಬೈಬಲ್ ಹಿಡಿದುಕೊಂಡಿರುತ್ತಾರೆ. ಮಾತು ಎತ್ತಿದ್ರೆ ಕಾಂಗ್ರೆಸ್ನವರು ಅಂಬೇಡ್ಕರ್ ಸಂವಿಧಾನದ ಬಗ್ಗೆ ಮಾತನಾಡುತ್ತಾರೆ. ರಾಹುಲ್ ಗಾಂಧಿ ಮೆಲ್ನೋಟಕ್ಕೆ ಸಂವಿಧಾನದ ಪ್ರತಿ ಹಿಡಿದುಕೊಂಡಂತೆ ಮಾಡುತ್ತಾರೆ. ಆದರೆ ಅವರು ಬೈಬಲ್ ಹಿಡಿದಿರುತ್ತಾರೆ. ಅಂಬೇಡ್ಕರ್ ಸಂವಿಧಾನ ಅಂತ ಹೇಳಿಕೊಂಡು ಆಟ ಆಡುತ್ತಾರೆ ಎಂದು ಕಿಡಿಕಾರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಇಬ್ಬರು ಅಪ್ರಾಪ್ತೆಯರ ಮೇಲೆ ಸಾಮೂಹಿಕ ಅತ್ಯಾಚಾ*ರ
ಶಿವಮೊಗ್ಗದಲ್ಲಿ ಹೆಚ್ಚಾಯ್ತು ಪುಂಡರ ಹಾವಳಿ… ಕಚೋರಿ ವ್ಯಾಪಾರಿಗೆ ಚಾಕು ಇರಿದು ಪರಾರಿ
Belagavi ಕಾಂಗ್ರೆಸ್ ಒಳಜಗಳ: ಸತೀಶ್ ಬೆಂಬಲಕ್ಕೆ ನಿಂತ ಅಣ್ಣ ರಮೇಶ್ ಜಾರಕಿಹೊಳಿ
Arrested: ಪಾಲಿಕೆ ಆಯುಕ್ತರ ನಕಲಿ ಸಹಿ ಹಾಕಿ ಹಣ ಡ್ರಾ ಮಾಡಿದ ಪ್ರಕರಣ.. ಪಿಎ ಸೇರಿ ಐವರ ಬಂಧನ
State Govt ಗೋ ಹಂತಕರಿಗೆ ಬೆಂಬಲ ನೀಡುತ್ತಿದೆ, ಹಿಂದೂಗಳನ್ನು ನಿರ್ಲಕ್ಷಿಸುತ್ತಿದೆ:ಈಶ್ವರಪ್ಪ
MUST WATCH
ಹೊಸ ಸೇರ್ಪಡೆ
Old Age Home: ಶಿಕ್ಷಣ ವೃದ್ಧಾಶ್ರಮ ಹೆಚ್ಚಿಸದಿರಲಿ!
ಬೈಕ್ ನಲ್ಲಿ ಚಲಿಸುತ್ತಿದ್ದ ವೇಳೆ ತುಂಡಾಗಿ ಬಿದ್ದ ಕೊಂಬೆ;ಸವಾರರಿಗೆ ಗಂಭೀರ ಗಾಯ, ಮೂಳೆ ಮುರಿತ
ಐದನೇ ಬಾರಿ ಜತೆಯಾದ ಧನುಷ್ – ವೆಟ್ರಿಮಾರನ್; ತೆರೆಮೇಲೆ ʼಕೆಜಿಎಫ್ʼ ರಿಯಲ್ ಕಹಾನಿ?
Belagavi: ಇಬ್ಬರು ಅಪ್ರಾಪ್ತೆಯರ ಮೇಲೆ ಸಾಮೂಹಿಕ ಅತ್ಯಾಚಾ*ರ
ಶಿವಮೊಗ್ಗದಲ್ಲಿ ಹೆಚ್ಚಾಯ್ತು ಪುಂಡರ ಹಾವಳಿ… ಕಚೋರಿ ವ್ಯಾಪಾರಿಗೆ ಚಾಕು ಇರಿದು ಪರಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.