ನಾಳೆ-ನಾಡಿದ್ದು ಸಂಪೂರ್ಣ ಲಾಕ್‌


Team Udayavani, May 21, 2021, 7:49 PM IST

21-12

ಧಾರವಾಡ/ಹುಬ್ಬಳ್ಳಿ: ಜಿಲ್ಲೆಯಲ್ಲಿ ಕೋವಿಡ್‌ ನಿಯಂತ್ರಣಕ್ಕಾಗಿ ಮೇ 22ರ ಬೆಳಿಗ್ಗೆ 6:00 ಗಂಟೆಯಿಂದ ಮೇ 24ರ ಬೆಳಿಗ್ಗೆ 6:00 ಗಂಟೆವರೆಗೆ ಜಿಲ್ಲೆಯಾದ್ಯಂತ ಸಂಪೂರ್ಣ ಲಾಕ್‌ಡೌನ್‌ ಘೋಷಿಸಿ, ಡಿಸಿ ನಿತೇಶ ಪಾಟೀಲ ಗುರುವಾರ ಆದೇಶ ಹೊರಡಿಸಿದ್ದಾರೆ. ಈ ಅವಧಿಯಲ್ಲಿ ಸಾರ್ವಜನಿಕರು ತುರ್ತು ವೈದ್ಯಕೀಯ ಸೌಲಭ್ಯ ಹೊರತುಪಡಿಸಿ, ಉಳಿದ ಎಲ್ಲ ಅಂಗಡಿ- ಮುಂಗಟ್ಟುಗಳನ್ನು ತೆರೆಯುವುದನ್ನು ನಿಷೇಧಿಸಲಾಗಿದೆ.

ಇದಲ್ಲದೇ ಮೇ 22-23 ರಂದು ಬೆಳಿಗ್ಗೆ 6:00 ರಿಂದ ಬೆಳಿಗ್ಗೆ 8:00 ಗಂಟೆವರೆಗೆ ಮಾತ್ರ ಹಣ್ಣು-ತರಕಾರಿ, ಹಾಲು ಮಾರಾಟ ಕೇಂದ್ರಗಳಿಗೆ ಅವಕಾಶ ನೀಡಲಾಗಿದೆ. ಸರಕಾರಿ ವಾಹನಗಳಿಗೆ ಮತ್ತು ಕೋವಿಡ್‌ -19 ಕಾರ್ಯಾಚರಣೆಯಲ್ಲಿ ಕರ್ತವ್ಯನಿರತ ಸಿಬ್ಬಂದಿ ಮತ್ತು ವಾಹನಗಳಿಗೆ ಈ ಆದೇಶ ಅನ್ವಯಿಸಲ್ಲ. ಅಂತ್ಯಸಂಸ್ಕಾರಕ್ಕೆ ಕೇವಲ 5 ಜನರಿಗೆ ಮಾತ್ರ ಪಾಲ್ಗೊಳ್ಳುವುದಕ್ಕೆ ಈ ಆದೇಶ ಆನ್ವಯ ಆಗದು. ಈ ನಿಯಮಗಳನ್ನು ಸಾರ್ವಜನಿಕರು ಪಾಲಿಸದೇ ಇದ್ದಲ್ಲಿ ಅಂತಹವರ ಮೇಲೆ ಕಠಿಣ ಕ್ರಮ ಕೈಗೊಳ್ಳಲು ಆದೇಶದಲ್ಲಿ ತಿಳಿಸಲಾಗಿದೆ.

ಬಹುತೇಕರ ಸಮ್ಮತಿ: ಜಿಲ್ಲಾಧಿಕಾರಿಗಳ ಆದೇಶಕ್ಕೂ ಮುನ್ನ ಹುಬ್ಬಳ್ಳಿ ಪ್ರವಾಸಿ ಮಂದಿರದಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ, ಜಿಲ್ಲಾ ಧಿಕಾರಿ ನಿತೇಶ ಪಾಟೀಲ ನೇತೃತ್ವದಲ್ಲಿ ವರ್ತಕರು, ಉದ್ದಿಮೆದಾರರು, ವಾಣಿಜ್ಯ ಸಂಘಟನೆಗಳ ಸದಸ್ಯರ ಸಭೆ ನಡೆದಿದ್ದು, ಜಿಲ್ಲೆಯಲ್ಲಿ ಕೋವಿಡ್‌ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಿವಿಧ ಜಿಲ್ಲೆಗಳ ಮಾದರಿಯಲ್ಲಿ ಜಿಲ್ಲೆಯಲ್ಲೂ ಸಂಪೂರ್ಣ ಲಾಕ್‌ಡೌನ್‌ ಮಾಡುವ ಕುರಿತು ಬಹುತೇಕರು ಸಮ್ಮತಿಸಿದ್ದಾರೆ. ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೋವಿಡ್‌ ಸೋಂಕಿತರ ಪ್ರಮಾಣ ಹೆಚ್ಚಳ, ಸಂಪೂರ್ಣ ಲಾಕ್‌ಡೌನ್‌ ಅನಿವಾರ್ಯತೆ ಕುರಿತಾಗಿ ಚರ್ಚಿಸಲಾಗಿದ್ದು, ಲಾಕ್‌ಡೌನ್‌ ಹೇಗಿರಬೇಕು ಎಂಬುದರ ಕುರಿತಾಗಿ ಅನೇಕರು ಸಲಹೆ ನೀಡಿದ್ದಾರೆ.

ಎಪಿಎಂಸಿ ಅಧ್ಯಕ್ಷ ಸಹದೇವಪ್ಪ ಮಾತನಾಡಿ, ಮುಂದಿನ 15 ದಿನಗಳಿಗೆ ಬೇಕಾಗುವ ಅಗತ್ಯ ಆಹಾರ ಪದಾರ್ಥಗಳು ದಾಸ್ತಾನು ಇದೆ. ಜನರು ಜೀವ ಉಳಿಸುವ ನಿಟ್ಟಿನಲ್ಲಿ ಸಂಪೂರ್ಣ ಲಾಕ್‌ಡೌನ್‌ ಮಾಡುವುದು ಅಗತ್ಯವಿದೆ. ಮೊದಲು ಜನಸಾಮಾನ್ಯರು ಕೂಡ ಖರೀದಿಗೆ ಎಪಿಎಂಸಿಗೆ ಆಗಮಿಸುತ್ತಿದ್ದರು. ಅದಕ್ಕೆ ಕಡಿವಾಣ ಹಾಕಲಾಗಿದೆ. ಕೇವಲ ವ್ಯಾಪಾರಸ್ಥರು ಮಾತ್ರ ಇಲ್ಲಿಗೆ ಬರುತ್ತಿದ್ದಾರೆಂದರು. ಉದ್ಯಮಿ ನಾಗರಾಜ ದಿವಟೆ ಮಾತನಾಡಿ, ಜನರು ಅಗತ್ಯ ವಸ್ತುಗಳ ಖರೀದಿ ನೆಪ ಮಾಡಿಕೊಂಡು ತಿರುಗಾಡುತ್ತಿದ್ದಾರೆ. ಜನರ ಜೀವಕ್ಕಿಂತ ದೊಡ್ಡದು ಯಾವುದೂ ಅಲ್ಲ. ಹೀಗಾಗಿ ಮೇ 30ರವರೆಗೆ ಸಂಪೂರ್ಣ ಲಾಕ್‌ಡೌನ್‌ ಮಾಡುವುದು ಸೂಕ್ತ. ಹಿಂದಿನ ಲಾಕೌಡೌನ್‌ ಜನರಿಗೆ ಅನುಭವವಿದೆ ಎಂದರು.

ವಾರದಲ್ಲಿ ಎರಡು ದಿನ ಬೆಳಿಗ್ಗೆ 6:00 ರಿಂದ 10:00 ಗಂಟೆಯವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಬೇಕು. ಉಳಿದ ಐದು ದಿನ ಸಂಪೂರ್ಣ ಲಾಕ್‌ಡೌನ್‌ ಮಾಡಬೇಕು. ಬೆಳಿಗ್ಗೆ-ಸಂಜೆ ವೇಳೆ ಗುಂಪಾಗಿ ವಾಕಿಂಗ್‌ ಹೋಗುವುದು ಹೆಚ್ಚಾಗುತ್ತಿದೆ ಈ ಬಗ್ಗೆಯೂ ಪೊಲೀಸರು ಗಮನ ಹರಿಸಬೇಕು. ಶೇ.70 ಜನ ಈಗಾಗಲೇ ದಿನಸಿ ಖರೀದಿಸಿದ್ದಾರೆ. ಆರ್ಥಿಕತೆಯ ಮೇಲೆ ಯಾವುದೇ ಪರಿಣಾಮ ಬೀರಿಲ್ಲ. ಇನ್ನಷ್ಟು ಸಡಿಲಿಕೆ ನೀಡಿದರೆ ಬೀದಿ ಬೀದಿಯಲ್ಲಿ ಶವಗಳನ್ನು ನೋಡಬೇಕಾಗುತ್ತದೆ. ಜೀವ ಇದ್ದರೆ ಮುಂದೆ ಬದುಕು ಕಟ್ಟಿಕೊಳ್ಳಬಹುದು. ಎಷ್ಟು ದಿನ ಸಂಪೂರ್ಣ ಲಾಕ್‌ಡೌನ್‌ ಮಾಡಬೇಕು ಎಂಬುದನ್ನು ಪೂರ್ವ ನಿರ್ಧರಿಸಿ ಘೋಷಣೆ ಮಾಡಬೇಕು ಎಂದರು. ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಮಾತನಾಡಿ, ಧಾರವಾಡ ಜಿಲ್ಲೆಯಲ್ಲಿ ಯಾವುದೇ ಸಮಸ್ಯೆ ಆಗದಂತೆ ನೋಡಿಕೊಳ್ಳಲಾಗಿದೆ.

ಆದರೆ ಇದೀಗ ಬ್ಲಾಕ್‌ ಫಂಗಸ್‌ ಕಾಣಿಸಿಕೊಳ್ಳುತ್ತಿದ್ದು, ಅದಕ್ಕೆ ಬೇಕಾದ ಔಷಧ ಉತ್ಪಾದನೆಯಾಗಿಲ್ಲ. ಮುಂದೆ ಇದು ದೊಡ್ಡ ಸಮಸ್ಯೆ ಉಂಟು ಮಾಡಬಹುದು. ನಮ್ಮಲ್ಲಿ ವೈದ್ಯಕೀಯ ವ್ಯವಸ್ಥೆ ಹೇಗಿದೆ ಎನ್ನುವುದನ್ನು ಗಮನದಲ್ಲಿಟ್ಟುಕೊಂಡು ಧಾರವಾಡದಲ್ಲಿ ಇನ್ನೊಂದು ಸಭೆ ಹಾಗೂ ಉಳಿದ ಸಂಘ-ಸಂಸ್ಥೆಗಳ ಅಭಿಪ್ರಾಯ ಪಡೆದು ನಿರ್ಧಾರ ಕೈಗೊಳ್ಳಬೇಕು. ಎಲ್ಲಾ ಸಾಧಕ- ಬಾಧಕಗಳನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಬೇಕಿದೆ ಎಂದರು. ಇನ್ನೂ ಕೆಲ ಸಂಘ-ಸಂಸ್ಥೆಗಳ ಪ್ರಮುಖರು ಸಭೆಗೆ ಬರಬೇಕಿತ್ತು. ಎಲ್ಲರ ಅಭಿಪ್ರಾಯ ಪಡೆದು ಮೇ 24ರ ನಂತರ ಜಿಲ್ಲೆಯಲ್ಲಿ ಹೇಗಿರಬೇಕು ಎಂಬುದನ್ನು ನಿರ್ಧರಿಸಬೇಕಿದೆ.

ಅವರವರ ಪ್ರದೇಶದಲ್ಲೇ ಖರೀದಿ ಮಾಡಬೇಕೆನ್ನುವ ನಿರ್ಬಂಧ ಹಾಕಿ ಸೋಂಕು ಹರಡದಂತೆ ತಡೆಗಟ್ಟಬೇಕಿದೆ. ಜಿಲ್ಲೆಯಲ್ಲಿ ಕೈಗೊಳ್ಳುವ ನಿರ್ಧಾರ ಪಕ್ಕದ ಜಿಲ್ಲೆ ಮೇಲೆ ಪರಿಣಾಮ ಬೀರುತ್ತದೆ. ಎಲ್ಲಾ ಆಯಾಮಗಳಿಂದ ಚಿಂತನೆ, ಚರ್ಚಿಸಿ ನಿರ್ಧಾರ ಕೈಗೊಳ್ಳಬೇಕು ಎಂದರು. ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ, ಶಾಸಕರಾದ ಶಂಕರ ಪಾಟೀಲ ಮುನೇನಕೊಪ್ಪ , ಅರವಿಂದ ಬೆಲ್ಲದ, ಪ್ರದೀಪ ಶೆಟ್ಟರ, ಮಹಾನಗರ ಪೊಲೀಸ್‌ ಆಯುಕ್ತ ಲಾಭೂ ರಾಮ, ಜಿಪಂ ಸಿಇಒ ಡಾ|ಬಿ.ಸುಶೀಲಾ, ಪಾಲಿಕೆ ಆಯುಕ್ತ ಡಾ|ಸುರೇಶ್‌ ಇಟ್ನಾಳ, ಉಪವಿಭಾಗಾಧಿಕಾರಿ ಡಾ| ಗೋಪಾಲಕೃಷ್ಣ, ತಹಶೀಲ್ದಾರ್‌ ಶಶಿಧರ ಮಾಡ್ಯಾಳ ಇನ್ನಿತರರಿದ್ದರು.

ಟಾಪ್ ನ್ಯೂಸ್

Team India; A spinner from the Karnataka coast who joined Team India as a replacement for Ashwin

Team India; ಅಶ್ವಿನ್‌ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್‌

1-cris

Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ

Kambli-health

Kambli Health: ಮಾಜಿ ಕ್ರಿಕೆಟಿಗ ವಿನೋದ್‌ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!

am

Recipe: ಆರೋಗ್ಯಕ್ಕೆ ಅಮೃತ, ರುಚಿಗೆ ಅದ್ಭುತ ಈ ಚಟ್ನಿ!ಒಂದ್ಸಲ ಈ ವಿಧಾನದಲ್ಲಿ ಟ್ರೈ ಮಾಡಿ…

1-maha-kumbha

Mahakumbh 2025: 45 ಕೋಟಿ ಯಾತ್ರಾರ್ಥಿಗಳ ನಿರೀಕ್ಷೆ

Travis Head made a controversial statement about BCCI

INDvAUS: ಬಿಸಿಸಿಐ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರಾ ಟ್ರಾವಿಸ್‌ ಹೆಡ್? Video

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Alnavar: ಟಿಟಿ- ಕ್ಯಾಂಟರ್‌ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು

Alnavar: ಟಿಟಿ- ಕ್ಯಾಂಟರ್‌ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು

ಪ್ರಹ್ಲಾದ ಜೋಶಿ

Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

Joshi

ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

Battery theft at Dharwad District Collector’s Office

Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Team India; A spinner from the Karnataka coast who joined Team India as a replacement for Ashwin

Team India; ಅಶ್ವಿನ್‌ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್‌

1-cris

Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ

Kambli-health

Kambli Health: ಮಾಜಿ ಕ್ರಿಕೆಟಿಗ ವಿನೋದ್‌ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!

Rachel David hope on Unlock Raghava Movie

Unlock Raghava Movie: ರಾಘವನ ಮೇಲೆ ಕಣ್ಣಿಟ್ಟ ರಚೆಲ್‌

am

Recipe: ಆರೋಗ್ಯಕ್ಕೆ ಅಮೃತ, ರುಚಿಗೆ ಅದ್ಭುತ ಈ ಚಟ್ನಿ!ಒಂದ್ಸಲ ಈ ವಿಧಾನದಲ್ಲಿ ಟ್ರೈ ಮಾಡಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.