ಮಹಾನಗರ ಪಾಲಿಕೆ ಚುನಾವಣೆ: 60ಕ್ಕೂ ಹೆಚ್ಚು ಸ್ಥಾನ ಗೆದ್ದು ಮತ್ತೆ ಅಧಿಕಾರಕ್ಕೆ| ಕಟೀಲ್
Team Udayavani, Sep 1, 2021, 5:30 PM IST
ಧಾರವಾಡ: ಹು-ಧಾ ಅವಳಿನಗರದಲ್ಲಿ ಮಾಡಿರುವ ಅಭಿವೃದ್ಧಿ ಕಾರ್ಯಗಳಿಂದಲೇ ಈ ಚುನಾವಣೆಯಲ್ಲಿ ಬಿಜೆಪಿ 60 ರಿಂದ 62 ಸ್ಥಾನ ಗೆದ್ದು ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ ಕಟೀಲ್ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿ, ಕಲಬುರ್ಗಿ ಹಾಗೂ ಹು-ಧಾ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಅಧಿಕಾರಕ್ಕೇರಲಿದೆ. ಮೂರೂ ಜಿಲ್ಲೆಗಳಲ್ಲಿ ಪ್ರವಾಸ ಮಾಡಿದ್ದೇನೆ. ಮನೆ ಮನೆಗೆ ಮಹಾನಗರ ಪಾಲಿಕೆ ಎಂಬ ಧ್ಯೇಯೋದ್ದೇಶ ಇಟ್ಟುಕೊಂಡು ಚುನಾವಣೆಗೆ ಇಳಿದಿದ್ದೇವೆ ಎಂದರು.
ಹು-ಧಾ ಪಾಲಿಕೆಯಲ್ಲಿ ಹತ್ತು ವರ್ಷ ಬಿಜೆಪಿ ಅಧಿಕಾರ ನಡೆಸಿದೆ. ಇಲ್ಲಿ ಸಾಕಷ್ಟು ಅಭಿವೃದ್ಧಿ ಕಾಮಗಾರಿಗಳಿಗೆ ಮುನ್ನುಡಿ ಬರೆದಿದ್ದೇ ಬಿಜೆಪಿ. ಸ್ಮಾರ್ಟ್‌ಸಿಟಿ ಯೋಜನೆ, ಅಮೃತ ಯೋಜನೆ, ಮನೆ ಮನೆಗೆ ಗಂಗೆ, ಮನೆ ಮನೆಗೆ ಗ್ಯಾಸ್ ಯೋಜನೆ ಸೇರಿದಂತೆ ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿ ಅವರ ನೇತೃತ್ವದಲ್ಲಿ ಅವಳಿನಗರಕ್ಕೆ ಸಾಕಷ್ಟು ಅನುದಾನ ತಂದು ಕೆಲಸ ಮಾಡಲಾಗಿದೆ ಎಂದರು.
ಮಾಜಿ ಸಿಎಂ ಜಗದೀಶ ಶೆಟ್ಟರ, ಶಾಸಕರಾದ ಅಮೃತ ದೇಸಾಯಿ, ಅರವಿಂದ ಬೆಲ್ಲದ ಸಾಕಷ್ಟು ಅನುದಾನ ತಂದು ವಾರ್ಡ್ ಗಳ ಅಭಿವೃದ್ಧಿ, ನಗರ ಸೌಂದರ್ಯಿಕರಣ ಮಾಡಿದ್ದಾರೆ. ಹೀಗಾಗಿ ಪ್ರಸಕ್ತ ವರ್ಷ ಕೂಡ ಪಾಲಿಕೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ. ಮುಂದಿನ ಐದು ವರ್ಷಗಳ ಕಾಲ ಅವಳಿನಗರ ಸ್ಮಾರ್ಟ್ ನಗರಗಳಾಗಿ ಬೆಳೆಯುವುದರಲ್ಲಿ ಯಾವುದೇ ಸಂದೇಹವಿಲ್ಲ. ನನೆಗುದಿಗೆ ಬಿದ್ದ ಎಲ್ಲಾ ಕಾಮಗಾರಿಗಳು ಮುಂದಿನ ದಿನಗಳಲ್ಲಿ ಪೂರ್ಣಗೊಳ Ûಲಿವೆ ಎಂದರು.
ಪ್ರತ್ಯೇಕ ಮಹಾನಗರ ಪಾಲಿಕೆ ಬೇಕು ಎಂಬುದು ಜನರ ಕೂಗು ನಮ್ಮ ಕೂಗಲ್ಲ. ಅವಳಿ ಮಕ್ಕಳನ್ನು ನಾವು ಬೇರೆ ಮಾಡಿದಂತಾಗುತ್ತದೆ. ಜನರ ಅಭಿಪ್ರಾಯದ ಮೇರೆಗೆ ಪ್ರತ್ಯೇಕ ಮಹಾನಗರ ಪಾಲಿಕೆ ಬಗ್ಗೆ ನಾವು ಮುಂದುವರಿಯುತ್ತೇವೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಶಾಸಕ ಅಮೃತ ದೇಸಾಯಿ, ಮಹೇಶ ಟೆಂಗಿನಕಾಯಿ, ಮಾಜಿ ಶಾಸಕಿ ಸೀಮಾ ಮಸೂತಿ, ತವನಪ್ಪ ಅಷ್ಟಗಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ
Mangaluru: ಆನ್‌ಲೈನ್ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ
Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್ ಅಧ್ಯಕ್ಷನ ಬಂಧನ
Whale: ಅಂಬರ್ ಗ್ರೀಸ್ ಮಾರಾಟ ಜಾಲ ಶಂಕೆ: ಕಾರ್ಯಾಚರಣೆಗೆ ಬಂದಿದ್ದ ಅಧಿಕಾರಿಗಳಿಗೆ ಹಲ್ಲೆ!
MUST WATCH
ಹೊಸ ಸೇರ್ಪಡೆ
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.