Hubballi; ಚಾಕು ದಾಳಿಗೆ ಮುಂದಾದ ರೌಡಿ ಕಾಲಿಗೆ ಗುಂಡು ಹಾರಿಸಿದ ಪೊಲೀಸರು
ತಲೆಮರೆಸಿಕೊಂಡು ತಿರುಗಾಡುತ್ತಿದ್ದ....ಇಬ್ಬರು ಪೊಲೀಸರಿಗೆ ಗಾಯ
Team Udayavani, Nov 25, 2023, 11:14 PM IST
ಹುಬ್ಬಳ್ಳಿ: ಕೊಲೆ ಯತ್ನ, ಅಪಹರಣ ಪ್ರಕರಣದಲ್ಲಿ ತಲೆಮರೆಸಿಕೊಂಡ ರೌಡಿಯೊಬ್ಬ ಹಿಡಿಯಲು ಬಂದ ಪೊಲೀಸರ ಮೇಲೆ ಚಾಕುವಿನಿಂದ ಹಲ್ಲೆಗೆ ಮುಂದಾಗಿದ್ದು, ಪೊಲೀಸರು ಪ್ರತಿಯಾಗಿ ಆತನ ಕಾಲಿಗೆ ಗುಂಡು ಹಾರಿಸಿದ ಘಟನೆ ಶನಿವಾರ ರಾತ್ರಿ ನಡೆದಿದೆ.
ಕೊಲೆಗೆ ಯತ್ನ, ಅಪಹರಣ ಸೇರಿದಂತೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಸತೀಶ ಗೋನಾ ಎಂಬಾತನ ಕಾಲಿಗೆ ಗುಂಡೇಟು ಬಿದ್ದಿದೆ.ಹೆಂಡತಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಸತೀಶ ಗೋನಾ ತಲೆಮರೆಸಿಕೊಂಡು ತಿರುಗಾಡುತ್ತಿದ್ದ. ಶನಿವಾರ ಗದಗ ರಸ್ತೆಯಲ್ಲಿ ಈತ ಇದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ಸ್ಥಳಕ್ಕೆ ತೆರಳಿ ಹಿಡಿಯಲು ಹೋದಾಗ, ಅವರ ಮೇಲೆ ಕಲ್ಲು ತೂರಿದ್ದಲ್ಲದೆ, ಚಾಕುವಿನಿಂದ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ ಶಹರ ಠಾಣೆ ಇನ್ಸ್‌ಪೆಕ್ಟರ್ ರಫಿಕ್ ತಹಶೀಲ್ದಾರ್ ಹಲ್ಲೆಗೆ ಮುಂದಾದ ರೌಡಿಯನ್ನು ತಡೆಯಲು ಆತನ ಕಾಲಿಗೆ ಫೈರ್ ಮಾಡಿ ಬಂಧಿಸಿದ್ದಾರೆ. ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ರೌಡಿಶೀಟರ್ ನ ದಾಳಿಯಿಂದಾಗಿ ಶಹರ ಠಾಣೆ ಪಿಎಸ್ ಐ ವಿನೋದ ಮತ್ತು ಪೇದೆ ಜಗದೀಶ ಎಂಬುವರಿಗೆ ಗಾಯವಾಗಿದ್ದು, ಅವರು ಸಹ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಘಟನಾ ಸ್ಥಳ ಹಾಗೂ ಕಿಮ್ಸ್ ಆಸ್ಪತ್ರೆಗೆ ಮಹಾನಗರ ಪೊಲೀಸ್ ಆಯುಕ್ತರಾದ ರೇಣುಕಾ ಸುಕುಮಾರ ಹಾಗೂ ಹಿರಿಯ ಅಧಿಕಾರಿಗಳು ಭೇಟಿ ಕೊಟ್ಟು ಪರಿಶೀಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CID Inquiry: ಪರಿಷತ್‌ನಲ್ಲಿ ನಡೆದ ಘಟನೆ ಎಂದು ಉಲ್ಲೇಖಿಸಿದ್ದು ತಪ್ಪು: ಬಸವರಾಜ ಹೊರಟ್ಟಿ
ಜೋಶಿ ಅವರಿಗೆ ನನ್ನ ಸಾಮರ್ಥ್ಯ ಗೊತ್ತಿಲ್ಲ… ಅಸಮರ್ಥ ಹೇಳಿಕೆಗೆ ತಿರುಗೇಟು ನೀಡಿದ ಪರಮೇಶ್ವರ್
Alnavar: ಟಿಟಿ- ಕ್ಯಾಂಟರ್ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.