ಹುಬ್ಬಳ್ಳಿ: ಗೋಡೆ ಕುಸಿದು ಮಹಿಳೆ ಸಾ*ವು, 3500 ಕೋಳಿ ಬಲಿ!
ಒಂದು ಗೇಟ್ ತೆರೆದು ಮಾರ್ಕಂಡೇಯ ನದಿಗೆ ನೀರು ಬಿಡಲಾಗುತ್ತಿದೆ.
Team Udayavani, Oct 22, 2024, 4:52 PM IST
ಉದಯವಾಣಿ ಸಮಾಚಾರ
ಹುಬ್ಬಳ್ಳಿ: ಉತ್ತರ ಕರ್ನಾಟಕದ 15 ಜಿಲ್ಲೆ ಸೇರಿ ರಾಜ್ಯಾದ್ಯಂತ ಹಿಂಗಾರು ಮಳೆ ಅಬ್ಬರ ಮುಂದುವರಿದಿದ್ದು ಜನಜೀವನ ಅಸ್ತವ್ಯಸ್ತವಾಗಿದೆ. ಅಪಾರ ಪ್ರಮಾಣದ ಬೆಳೆ ಹಾನಿಯಾಗಿದ್ದರಿಂದ ಅನ್ನದಾತರು ಕಂಗಾಲಾಗಿದ್ದಾರೆ. ಗೋಡೆ ಕುಸಿದು
ವೃದ್ಧೆ ಮೃತಪಟ್ಟಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಒಂದು ವಾರ ಪ್ರವಾಸಕ್ಕೆ ನಿರ್ಬಂಧ ವಿಧಿಸಲಾಗಿದೆ. ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಬ್ಯಾಡರಹಳ್ಳಿ ಗ್ರಾಮದಲ್ಲಿ ಮನೆ ಕುಸಿದು ಮೀನಾಕ್ಷಮ್ಮ ಕೋಂ ಮಹಾಂತೇಶ್ (63) ಮೃತಪಟ್ಟಿದ್ದಾರೆ.
ಹೊಸದುರ್ಗ ತಾಲೂಕಿನ ನಾಕೀಕೆರೆ 12 ವರ್ಷದ ನಂತರ ತುಂಬಿ ಕೋಡಿ ಬಿದ್ದಿದೆ. ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನಲ್ಲಿ 10ಕ್ಕೂ ಹೆಚ್ಚು ಕೆರೆಗಳು ಕೋಡಿ ಬಿದ್ದಿವೆ. ಅಣಜಿ, ಮಂಡೂÉರು, ಹುಣ ಸೆಕಟ್ಟೆ ಗ್ರಾಮದ ಅಡಕೆ ತೋಟಗಳು ಸಂಪೂರ್ಣ ಜಲಾವೃತಗೊಂಡಿವೆ. ಕುರ್ಕಿ ಗ್ರಾಮದ ರೈಲ್ವೆ ಕೆಳಸೇತುವೆಯಲ್ಲಿ ಸಿಲುಕಿದ್ದ 30ಕ್ಕೂ ಹೆಚ್ಚು ಮಕ್ಕಳಿದ್ದ ಶಾಲಾ ವಾಹನ ರಕ್ಷಿಸಲಾಗಿದೆ.ಚಿಕ್ಕಮಗಳೂರು ಜಿಲ್ಲೆಯಲ್ಲಿ ನಿರಂತರ ಮಳೆ ಸುರಿಯುತ್ತಿರುವುದರಿಂದ ಒಂದು ವಾರ ಪ್ರವಾಸ ಸ್ಥಗಿತಗೊಳಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಟ್ರೆಕ್ಕಿಂಗ್‌ಗೆ ಅನುಮತಿ ನೀಡದಂತೆ ಅರಣ್ಯ ಇಲಾಖೆಗೆ ಆದೇಶಿಸಿದೆ. ಅಜ್ಜಂಪುರ ತಾಲೂಕಿನ ಶಿವನಿ ದೊಡ್ಡಕೆರೆ ಕೋಡಿ ಬಿದ್ದಿದ್ದೆ. ಆಲ್ದೂರು- ಮೂಡಿಗೆರೆ ರಸ್ತೆ ಕೆಲ ಕಾಲ ಸ್ಥಗಿತವಾಗಿತ್ತು. ಶಿವ ಮೊಗ್ಗ ಜಿಲ್ಲೆ ಹೊಳೆಹೊನ್ನೂರು ಸಮೀಪದ ಅರಹತೊಳಲು ಗ್ರಾಮದಲ್ಲಿ ಮಹೇಶ ಎಂಬುವರ ಕೋಳಿ ಫಾರಂಗೆ ನೀರು ನುಗ್ಗಿ 3500 ಕೋಳಿ ಮರಿಗಳು ಮೃತಪಟ್ಟಿವೆ.
ಹಾವೇರಿ ಜಿಲ್ಲೆಯ ಕಂಚಿನೆಗಳೂರು, ತಿಮ್ಮಾಪುರ ಜಲಾವೃತ ಗೊಂಡಿದ್ದು ನೂರಾರು ಕುಟುಂಬಗಳು ಅತಂತ್ರವಾಗಿದೆ. ಸವಣೂರು ತಾಲೂಕು ಬರದೂರಿನಲ್ಲಿ ದೇಗುಲಕ್ಕೆ ಜಲದಿಗ್ಬಂಧನವಾಗಿದ್ದರಿಂದ ದೇವಸ್ಥಾನದಲ್ಲಿ ತಂಗಿದ್ದ 50ಕ್ಕೂ ಹೆಚ್ಚು ಫಂಡರಾಪುರ ಭಕ್ತರನ್ನು ರಕ್ಷಿಸಲಾಗಿದೆ.
ಧಾರವಾಡ ಜಿಲ್ಲೆಯ ತುಪ್ಪರಿಹಳ್ಳ, ಬೆಣ್ಣೆ ಹಳ್ಳ ಅಪಾಯದ ಮಟ್ಟ ತಲುಪಿವೆ. ಬೈಪಾಸ್ ರಸ್ತೆಯಲ್ಲಿ ಟ್ರಾಫಿಕ್ ಜಾಮ್‌ನಿಂದ
ಚಾಲಕರು ಪರದಾಡಿದರು. ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಭೂಕುಸಿತ ಉಂಟಾಗಿದೆ. ಗುಳೇದಗುಡ್ಡದಿಂದ ನಂದಿಕೇಶ್ವರಕ್ಕೆ
ತೆರಳುವ ರಸ್ತೆ ಮೇಲೆ ಎರಡು ಬೃಹತ್ ಬಂಡೆಗಳು ಕುಸಿದು ಬಿದ್ದಿವೆ.ರಬಕವಿ-ಬನಹಟ್ಟಿ ತಾಲೂಕಿನಲ್ಲಿ ಸುಮಾರು 2 ಸಾವಿರ
ಎಕರೆ ದ್ರಾಕ್ಷಿ ಬೆಳೆ ಹಾನಿಯಾಗಿದೆ.
ಮಹಾರಾಷ್ಟ್ರದ ಚಂದಗಢದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ ರಕ್ಕಸಕೊಪ್ಪ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದ್ದು, ಒಂದು ಗೇಟ್ ತೆರೆದು ಮಾರ್ಕಂಡೇಯ ನದಿಗೆ ನೀರು ಬಿಡಲಾಗುತ್ತಿದೆ. ಮೈಸೂರಿನಲ್ಲಿ ಸಂಜೆ ವಸ್ತು ಪ್ರದರ್ಶನ ಬಳಿ ಮರವೊಂದು ಬಿದ್ದು ಸಂಚಾರಕ್ಕೆ ಅಡಚಣೆಯಾಯಿತು. ಹಾಸನ ಜಿಲ್ಲೆಯಲ್ಲಿ ಸೋಮವಾರ ಸಂಜೆ ಧಾರಾಕಾರ ಮಳೆಯೊಂದಿಗೆ ಸಿಡಿಲಿನ ಅಬ್ಬರಕ್ಕೆ ಹಾಸನ ನಗರ ತತ್ತರಿಸಿತು. ತುಮಕೂರು ನಗರ ಸೇರಿ ಜಿಲ್ಲಾದ್ಯಂತ ಸೋಮವಾರ ಬಿಟ್ಟು ಬಿಟ್ಟು ವರುಣ
ಅಬ್ಬರಿಸಿದ್ದರಿಂದ ಜನ ಜೀವನವೂ ಅಸ್ತವ್ಯಸ್ತವಾಗಿತು.
ಮತ್ತೆ ಕೆಆರ್‌ಎಸ್ ಗರಿಷ್ಠ
ಮಂಡ್ಯ: ಕಾವೇರಿ ನದಿ ಜಲಾನಯನ ಪ್ರದೇಶದಲ್ಲಿ ಹಿಂಗಾರು ಮಳೆ ಉತ್ತಮವಾಗಿರುವುದರಿಂದ ಕೃಷ್ಣರಾಜಸಾಗರ ಜಲಾಶಯಕ್ಕೆ ಒಳಹರಿವು ಬರುತ್ತಿದ್ದು ಜಲಾಶಯದ ಗರಿಷ್ಠ ಮಟ್ಟ ಮುಂದುವರಿದಿದೆ. ಪ್ರಸ್ತುತ ಜಲಾಶಯಕ್ಕೆ 7087 ಕ್ಯುಸೆಕ್ ಒಳಹರಿವು ಇದೆ. ನದಿಗೆ ಹಾಗೂ ಜಿಲ್ಲೆಯ ನಾಲೆಗಳಿಗೆ ಸೇರಿ ಒಟ್ಟು ಹೊರಹರಿವು 8287 ಕ್ಯುಸೆಕ್ ಹರಿಸಲಾಗುತ್ತಿದೆ. ಪ್ರಸ್ತುತ ಜಲಾಶಯದ ಗರಿಷ್ಠ ನೀರಿನ ಮಟ್ಟ 124.80 ಅಡಿ ಮುಂದುವರಿದಿದೆ. ಕಳೆದ ಅ.14ರಿಂದಲೂ ಮೂರನೇ ಬಾರಿಗೆ ಗರಿಷ್ಠ ಮಟ್ಟ ತಲುಪಿತ್ತು. ಅದು ಮುಂದುವರಿದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.