Hubli: ನಕಲಿ ಗಾಂಧಿಗಳ ಪಾದ ನೆಕ್ಕಿದವರು ಬಿ.ಕೆ ಹರಿಪ್ರಸಾದ್: ಪ್ರಲ್ಹಾದ ಜೋಶಿ ತಿರುಗೇಟು
Team Udayavani, Oct 12, 2024, 5:09 PM IST
ಹುಬ್ಬಳ್ಳಿ: ಕಾಂಗ್ರೆಸ್ ಮುಖಂಡ ಬಿ.ಕೆ. ಹರಿಪ್ರಸಾದ್ ನಕಲಿ ಗಾಂಧಿಗಳ ಪಾದ ನೆಕ್ಕಿದವರು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಿಡಿಕಾರಿದ್ದಾರೆ.
“ಪ್ರಲ್ಹಾದ ಜೋಶಿ ಇವತ್ತಿಗೂ ಗೋಡ್ಸೆ ಪೂಜೆ ಮಾಡುತ್ತಾರೆ” ಎಂಬ ಹರಿಪ್ರಸಾದ್ ಹೇಳಿಕೆಗೆ ಜೋಶಿ ತಿರುಗೇಟು ಕೊಟ್ಟರು.
ಹುಬ್ಬಳ್ಳಿಯಲ್ಲಿ ಶನಿವಾರ (ಅ.12) ಮಾದ್ಯಮದವರೊಂದಿಗೆ ಮಾತನಾಡುತ್ತ ಹರಿಪ್ರಸಾದ್ ವಿರುದ್ಧ ತೀವ್ರ ಹರಿಹಾಯ್ದರು.
ಈಗಿನ ಕಾಂಗ್ರೆಸ್ ನಲ್ಲಿ ಇರುವರೆಲ್ಲಾ ನಕಲಿ ಗಾಂಧಿಗಳು. ಇಂಥ ನಕಲಿ ಗಾಂಧಿಗಳ ಪಾದ ನೆಕ್ಕುವ ಹರಿಪ್ರಸಾದ್, ನಮ್ಮ ಬಗ್ಗೆ ಹೇಳುವುದೇನು ಎಂದು ತರಾಟೆ ತೆಗೆದುಕೊಂಡರು.
ಹರಿಪ್ರಸಾದ್ ಮೊದಲು ತಮ್ಮ ಯೋಗ್ಯತೆಯನ್ನು ಅರಿಯಲಿ. ಹಿಂದೆ ಸಿಎಂ ಸಿದ್ದರಾಮಯ್ಯ ಅವರ ಚಡ್ಡಿ-ನಿಕ್ಕರ್ ಬಗ್ಗೆ ಮಾತನಾಡಿದ್ದರು, ಆಗಲೇ ಸಿಎಂ ಇವರನ್ನು ಹೊರ ಹಾಕಲು ತಯಾರಾಗಿದ್ದರು ಎಂಬುದನ್ನು ನೆನಪಿಸುತ್ತಾ ಜಾಡಿಸಿದರು.
ಸಿದ್ದರಾಮಯ್ಯ ನಿಕ್ಕರ್ ಹಾಕಲ್ಲ ಎಂದೆಲ್ಲ ಹೇಳಿದಂಥ ಈ ವ್ಯಕ್ತಿ ಇದೀಗ ಸಿಎಂ ಪರ ಧ್ವನಿ ಎತ್ತುತ್ತಿದ್ದಾರೆ. ಬಹುಶಃ ಸಿಎಂ ನಾಲ್ವರನ್ನು ತೆಗೆದು ಹಾಕಿ ಹರಿಪ್ರಸಾದ್ ಗೆ ಸಚಿವ ಸ್ಥಾನ ಕೊಡುವುದಾಗಿ ಹೇಳಿರಬೇಕು ಎಂದು ಪ್ರಲ್ಹಾದ್ ಜೋಶಿ ಛೇಡಿಸಿದರು.
ಕಾಂಗ್ರೆಸ್ ನಾಯಕರು ಹೀಗೆಲ್ಲ ಮಾತನಾಡುತ್ತಲೇ ದೇಶದಲ್ಲಿ ತಿರಸ್ಕೃತಗೊಳ್ಳುತ್ತಿದ್ದಾರೆ. ಬಿ.ಕೆ.ಹರಿಪ್ರಸಾದ್ ಮೊದಲು ದೇಶದಲ್ಲಿ ತಮ್ಮ ಕಾಂಗ್ರೆಸ್ ಪರಿಸ್ಥಿತಿ ಏನಾಗಿದೆ ನೋಡಿಕೊಳ್ಳಲಿ ಎಂದು ಸಚಿವರು ವಾಗ್ದಾಳಿ ನಡೆಸಿದರು.
ಬಿಜೆಪಿ ಯಾವತ್ತೂ ಮಹಾತ್ಮ ಗಾಂಧಿ, ಸರ್ದಾರ್ ವಲ್ಲಭ ಬಾಯ್ ಪಟೇಲ್ ಅವರಂಥ ಮಹಾನ್ ನಾಯಕರನ್ನು ಅತ್ಯಂತ ಗೌರವದಿಂದಲೇ ಕಾಣುತ್ತಿದೆ. ಎಲ್ಲರಿಗೂ ಸಮಾನ ಗೌರವವನ್ನೇ ಕೊಡುತ್ತಿದೆ. ಬಿಜೆಪಿ ಅಸಲಿ ಗಾಂಧಿಗಳಿಗೆ, ಗಾಂಧಿವಾದಿಗಳಿಗೆ ಯಾವತ್ತೂ ಗೌರವ ನೀಡುತ್ತದೆ. ನಕಲಿ ಗಾಂಧಿಗಳಿಗಲ್ಲ ಎಂದು ಹೇಳಿದರು.
ಮಹಾತ್ಮ ಗಾಂಧಿ ಅವರನ್ನು ಪ್ರಧಾನಿ ಮೋದಿ ಆದಿಯಾಗಿ ಬಿಜಿಪಿಯ ಪ್ರತಿಯೊಬ್ಬರೂ ಅತ್ಯಂತ ಗೌರವದಿಂದಲೇ ನೋಡುತ್ತಾರೆ. ಈ ಅಸಲಿ ಗಾಂಧಿಯವರ ಜೀವನಧಾರೆಗಳನ್ನು ಸ್ವತಃ ಮೋದಿ ಅವರೂ ಅನುಸರಿಸುತ್ತಿದ್ದಾರೆ ಎಂದು ಪ್ರಲ್ಹಾದ ಜೋಶಿ ಹೇಳಿದರು.
ಅಂಬೇಡ್ಕರ್ ಗೆ ಕಾಂಗ್ರೆಸ್ ಏನು ಗೌರವ ಕೊಟ್ಟಿದೆ? ದಲಿತರ ನಾಯಕ, ಸಂವಿಧಾನ ಶಿಲ್ಪಿ, ಮಹಾನ್ ಗಾಂಧಿವಾದಿಯೂ ಆಗಿದ್ದ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಕಾಂಗ್ರೆಸ್ ಏನು ಗೌರವ ಕೊಟ್ಟಿದೆ? ಭಾರತ ರತ್ನ ಸಹ ಕೊಡಲಿಲ್ಲ ಎಂದು ಟೀಕಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ
ಸಿಎಂ ಆಗಿದ್ದವರು ಈ ರೀತಿ ಹೇಳಿಕೆ ನೀಡುವ ಬದಲು, ಸ್ಪಷ್ಟ ಹೇಳಿಕೆ ನೀಡಲಿ: ಸಚಿವ ಶಿವಾನಂದ
dharwad: ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್ ನಿಂದ ಹಲ್ಲೆ
Covid Scam: ಸಚಿವ ಸಂಪುಟದಲ್ಲಿ ಚರ್ಚಿಸಿ ಮುಂದಿನ ಕ್ರಮ: ಸಿಎಂ ಸಿದ್ದರಾಮಯ್ಯ
By Election: ಹಣ ಕೊಟ್ಟರೂ ಸಿಎಂ ಕಾರ್ಯಕ್ರಮಕ್ಕೆ ಜನ ಬರುತ್ತಿಲ್ಲ: ಬಿಎಸ್ ವೈ
MUST WATCH
ಹೊಸ ಸೇರ್ಪಡೆ
Priyanka Upendra: ಬ್ಯೂಟಿಫುಲ್ ಲೈಫ್ ನಲ್ಲಿ ಪ್ರಿಯಾಂಕಾ
Shimoga; ಕಾಂಗ್ರೆಸ್-ಮುಸ್ಲಿಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ
Bantwala: ಶಾಲಾ ವಾಹನ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು
Manipal: ನಿತ್ಯ ಅಪಘಾತ ತಾಣವಾದ ಈಶ್ವರ ನಗರ-ಪರ್ಕಳ ರಸ್ತೆ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.