Hubli; ರಾಜ್ಯ ಸರ್ಕಾರದಿಂದ ಬ್ಲ್ಯಾಕ್ ಮೇಲ್ ತಂತ್ರ: ಪ್ರಲ್ಹಾದ ಜೋಶಿ
Team Udayavani, Aug 23, 2024, 1:17 PM IST
ಹುಬ್ಬಳ್ಳಿ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಹಳೆಯ ಪ್ರಕರಣವನ್ನು ಮುನ್ನೆಲೆಗೆ ತರುವ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಬ್ಲ್ಯಾಕ್ ಮೇಲ್ ತಂತ್ರ ಅನುಸರಿಸುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆರೋಪಿಸಿದರು.
ಶುಕ್ರವಾರ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಕೇಸ್ ಬಗ್ಗೆ ಮಾತನಾಡಿದರೆ, ನಿಮ್ಮ ಕೇಸ್ ಹೊರಗೆ ತರುತ್ತೇವೆ ಎಂಬ ಮನೋಭಾವ ಕಾಂಗ್ರೆಸ್‌ನದ್ದಾಗಿದೆ ಎಂದು ಹರಿಹಾಯ್ದರು.
ಕುಮಾರಸ್ವಾಮಿ ವಿರುದ್ಧ ಗಣಿ ಪರವಾನಿಗೆ ಪ್ರಕರಣ 2008ರದ್ದು. 2013ರಿಂದ 18ರ ವರೆಗೆ ಹಾಗೂ ಈಗ ಕಳೆದ ಒಂದೂವರೆ ವರ್ಷದಿಂದ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದೆ. ಆಗ ಕುಮಾರಸ್ವಾಮಿ ವಿರುದ್ಧ ಏಕೆ ತನಿಖೆ ಮಾಡಲಿಲ್ಲ. 2018-19 ರಲ್ಲಿ ಕುಮಾರಸ್ವಾಮಿ ಜೊತೆ ಕೈಜೋಡಿಸಿ ಮೈತ್ರಿ ಸರ್ಕಾರ ಮಾಡಿದ್ದರು. ಆಗ ಸುಮ್ಮನೆ ಇದ್ದಿದ್ದು ಯಾಕೆ? ತಮಗೆ ಬೇಕಾದಾಗ ಏನೇ ಆದರೂ ಸರಿ, ಬೇಡವಾದಾಗ ತಪ್ಪು ಎಂಬುದು ಯಾವ ನೀತಿ ಎಂದು ಪ್ರಶ್ನಿಸಿದರು.
ಸಾವಿರಾರು ಸೈಟ್ ಮತ್ತು ಸಾವಿರಾರು ಕೋಟಿ ಅವ್ಯವಹಾರ ಮುಡಾ ಪ್ರಕರಣದಲ್ಲಿ ನಡೆದಿದೆ. ಅದನ್ನು ಮುಚ್ಚಿಹಾಕಲು ಕಾಂಗ್ರೆಸ್ ಪ್ರಯತ್ನ ಮಾಡುತ್ತಿದೆ. ರಾಜ್ಯಪಾಲರ ಆದೇಶ ಪಾಲನೆ ಮಾಡುತ್ತಿಲ್ಲ. ನ್ಯಾಯಾಂಗ ತನಿಖೆ ಹಲ್ಲು ಕಿತ್ತ ಹಾವು. ಅದರ ವರದಿ ಸರ್ಕಾರ ಒಪ್ಪಬಹುದು ಬಿಡಬಹುದು. ಅವರದ್ದೆ ಕೆಂಪಣ್ಣ ಆಯೋಗ ನೀಡಿರುವ ವರದಿ ಈಗ ಎಲ್ಲಿದೆ. ಸಿದ್ದರಾಮಯ್ಯನವರೇ ನಿಮ್ಮ ಶ್ರೀಮತಿ ಅವರ ಕೈಯಿಂದ ನೀವು ಬರೆಸಿದ್ದ ಪತ್ರಕ್ಕೆ ವೈಟನರ್ ಹಚ್ಚಿದರವರು ಯಾರು? ಅದನ್ನು ಮೊದಲು ಹೇಳಿ ಎಂದು ಆಗ್ರಹಿಸಿದರು.
ಸಿಎಂ ಬಿಜೆಪಿಯ ಯಾವುದೇ ಭ್ರಷ್ಟಾಚಾರವನ್ನಾದರು ತನಿಖೆ ಮಾಡಲಿ. ಅವರು ಜಾತಿ ನೆರಳಿನಲ್ಲಿದ್ದಾರೆ. ಆದರೆ ರಾಜ್ಯಪಾಲರ ಜಾತಿ ಬಗ್ಗೆ ಮಾತನಾಡಿದರೆ ಮರುಪ್ರಶ್ನೆ ಮಾಡುತ್ತಾರೆ. ಅಂಬೇಡ್ಕರರಿಗೆ ಅಪಮಾನ ಮಾಡಿರುವ, ಅವರನ್ನು ಚುನಾವಣೆಯಲ್ಲಿ ಸೋಲಿಸಿದ ಪಾರ್ಟಿಯಲ್ಲಿ ಸಿದ್ದರಾಮಯ್ಯ ಇದ್ದಾರೆ. ಅಂಬೇಡ್ಕರ್ ಅವರ ಸಮಾಧಿಗೆ ಜಾಗ ಕೊಡಲಿಲ್ಲ, ಅವರನ್ನು ಚುನಾವಣೆಯಲ್ಲಿ ಸೋಲಿಸದವರಿಗೆ ಪ್ರಶಸ್ತಿ ನೀಡಿದ್ದು ಕಾಂಗ್ರೆಸ್. ದೇವರಾಜ್ ಅರಸ್‌ಗೆ ಅಪಮಾನ ಮಾಡಿದವರು ಕಾಂಗ್ರೆಸ್‌ನವರು. ಸಿದ್ದರಾಮಯ್ಯ ನಿಮ್ಮ ಬೆನ್ನು ಮೊದಲು ನೋಡಿಕೊಳ್ಳಿ. ನೀವು ಇರುವ ಪಕ್ಷ ದಲಿತರಿಗೆ ಎಷ್ಟು ಅಪಮಾನ ಮಾಡಿದೆ ಅಂತ ಎಂದರು.
ಕುಮಾರಸ್ವಾಮಿ ಅವರನ್ನು ಮುಗಿಸಿರುವ ಅನುಭವ ಕಾಂಗ್ರೆಸ್‌ಗಿದೆ. ಹೀಗಾಗಿ ಅವರನ್ನು ಮುಗಿಸುವ ಮಾತುಗಳನ್ನಾಡುತ್ತಿದ್ದಾರೆ ಎಂದು ಸಚಿವ ದಿನೇಶ ಗುಂಡೂರಾವ್ ಅವರು ಕುಮಾರಸ್ವಾಮಿ ಮುಗಿಸಲು ಬಿಜೆಪಿ ಹೊರಟಿದೆ ಎಂಬ ಹೇಳಿಕೆಗೆ ಟಾಂಗ್ ಕೊಟ್ಟರು.
ನಾವ್ಯಾಕೆ ಕುಮಾರಸ್ವಾಮಿ ಅವರನ್ನು ಮುಗಿಸೋಣ. ಈ ಹಿಂದೆ ಕುಮಾರಸ್ವಾಮಿ ಸಿಎಂ ಆಗಿದ್ದಾಗ ಅಧಿಕಾರದಿಂದ ಕೆಳಗಿಳಿಸಿದ್ದು ಕಾಂಗ್ರೆಸ್. ಹೀಗಾಗಿ ಅವರನ್ನು ಮತ್ತು ಜೆಡಿಎಸ್ ಮುಗಿಸುವ ಮಾತುಗಳನ್ನಾಡುತ್ತಿದ್ದಾರೆ. ನಿಮಗೆ ಬೇಕಾದಾಗ ಒಂದು ರೀತಿ ಮಾತಾಡುತ್ತೀರಿ. ಬೇಡವಾದಾಗ ಮತ್ತೊಂದು ರೀತಿ ಮಾತಾಡುತ್ತೀರಿ. ಇದು ನಿಮ್ಮ ವರ್ತನೆ ಎಂದರು.
ಬಿಸಿಎಎಸ್‌ಗೆ ಅನುಮತಿ: ನಗರದ ವಿಮಾನ ನಿಲ್ದಾಣಕ್ಕೆ ಬ್ಯುರೋ ಆಫ್ ಸಿವಿಲ್ ಏವಿಯೇಶನ್ ಸೆಕ್ಯುರಿಟಿ ಪ್ರಾದೇಶಿಕ ಕಾರ್ಯಾಲಯ ಆರಂಭಕ್ಕೆ ನಾಗರಿಕ ವಿಮಾನಯಾನ ಸಚಿವಾಲಯವು ಅನುಮತಿ ನೀಡಿದೆ. ಇದರಿಂದ ರಾಜ್ಯದ ವಿವಿಧ ವಿಮಾನ ನಿಲ್ದಾಣ ಭದ್ರತೆ ದೃಷ್ಟಿಯಿಂದ ಕಾರ್ಯ ನಿರ್ವಹಣೆ ಮಾಡಲಿದೆ. ಬೆಂಗಳೂರು, ಮಂಗಳೂರು ಹೊರತುಪಡಿಸಿ ಉಳಿದ ಎಲ್ಲಾ ವಿಮಾನ ನಿಲ್ದಾಣಗಳ ಭದ್ರತಾ ಕ್ರಮಗಳ ತೀರ್ಮಾನ ಹುಬ್ಬಳ್ಳಿ ಕಚೇರಿಯಲ್ಲಿ ಆಗಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್ ವೈದ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chikkamagaluru: ರಾಜ್ಯ ಹೆದ್ದಾರಿ ರಸ್ತೆಯಲ್ಲಿ ರೌಂಡ್ಸ್ ಹಾಕಿದ ಒಂಟಿಸಲಗ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.