Hubli; ಪಡಿತರ ಅಕ್ಕಿ ಅಕ್ರಮ ಸಂಗ್ರಹಣೆ ಗೋದಾಮಿಗೆ ಸಿಸಿಬಿ ದಾಳಿ; ಓರ್ವನ ಬಂಧನ
Team Udayavani, Dec 9, 2023, 5:04 PM IST
ಹುಬ್ಬಳ್ಳಿ: ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸುತ್ತಿದ್ದ ಗೋದಾಮಿನ ಮೇಲೆ ದಾಳಿ ಮಾಡಿದ, ಹುಬ್ಬಳ್ಳಿ -ಧಾರವಾಡ ಮಹಾನಗರ ಪೊಲೀಸ್ ಕಮಿಷನರೇಟ್ ನ ಸಿಸಿಬಿ ವಿಭಾಗದ ಪೊಲೀಸರು, ಅಂದಾಜು 4.42 ಲಕ್ಷ ರೂ ಮೌಲ್ಯದ ಪಡಿತರ ಅಕ್ಕಿ ವಶಪಡಿಸಿಕೊಂಡು, ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ.
ಇಲ್ಲಿನ ಅಮರಗೋಳದ ಎಪಿಎಂಸಿ ಗೋದಾಮಿನಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟು, ಕಾಳಸಂತೆಯಲ್ಲಿ ಮಾರಾಟಕ್ಕೆ ಯತ್ನಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ, ಸಿಸಿಬಿ ಪೊಲೀಸರು ದಾಳಿ ಮಾಡಿದ್ದು, ಗೋದಾನದಲ್ಲಿ ಸಂಗ್ರಹಿಸಿಟ್ಟಿದ್ದ ಅಂದಾಜು 4.42 ಲಕ್ಷ ರೂ ಮೌಲ್ಯದ ಸುಮಾರು 130 ಕ್ವಿಂಟಲ್ ಅಕ್ಕಿಯನ್ನು ವಶಪಡಿಸಿಕೊಳ್ಳಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಸಂದೀಪ ಜರತಾರಘರ ಎಂಬಾತನನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ನೀಡಲಾಗಿದೆ.
ನವನಗರ- ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಿಸಿಬಿ ಪೊಲೀಸರ ಕಾರ್ಯವನ್ನು ಹುಬ್ಬಳ್ಳಿ- ಧಾರವಾಡ ಮಹಾನಗರ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ ಶ್ಲಾಘಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ
Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್
Hubli: ಕ್ರಿಮಿನಲ್ ಜತೆಯೇ ಪೊಲೀಸ್ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್ ಕಾರ್ಯಾಚರಣೆ
ಭುಗಿಲೆದ್ದ ಮೀಸಲು ರೊಚ್ಚು; ಸದನದ ಒಳ-ಹೊರಗೆ ಪ್ರತಿಭಟನೆ; ಉತ್ತರ ಕರ್ನಾಟಕದಲ್ಲಿ ಆಕ್ರೋಶ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.