Hubli: ರಾಜ್ಯದ ಕಾಂಗ್ರೆಸ್ ಸರ್ಕಾರ ಪತನಗೊಳ್ಳುವುದು ಖಚಿತ: ಜಗದೀಶ ಶೆಟ್ಟರ್
Team Udayavani, Jan 11, 2025, 1:27 PM IST
ಹುಬ್ಬಳ್ಳಿ: ಮುಖ್ಯಮಂತ್ರಿ ಕುರ್ಚಿ ಕಿತ್ತಾಟ ಇನ್ನಷ್ಟು ಜೋರಾಗಲಿದ್ದು, ಇದರಿಂದ ರಾಜ್ಯದ ಕಾಂಗ್ರೆಸ್ ಸರ್ಕಾರ ಪತನಗೊಳ್ಳುವುದು ಖಚಿತ ಎಂದು ಸಂಸದ ಜಗದೀಶ ಶೆಟ್ಟರ (Jagadish Shettar) ಭವಿಷ್ಯ ನುಡಿದರು.
ಶನಿವಾರ (ಜ.11) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಕುರ್ಚಿ ವಿಷಯವಾಗಿಯೇ ಔತಣಕೂಟ ಆರಂಭವಾಗಿದೆ. ಪರಿಶಿಷ್ಟ ಜಾತಿ, ಪಂಗಡ ಶಾಸಕರು, ಸಚಿವರ ಔತಣಕೂಟಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ ಅಡ್ಡಗಾಲು ಹಾಕಿದ್ದಾರೆ. ತಮ್ಮ ವಿರುದ್ದ ಪಕ್ಷದೊಳಗೆ ಷಡ್ಯಂತ್ರ ನಡೆಯುತ್ತಿದೆ ಎಂದೆನಿಸಿಯೇ ಡಿ.ಕೆ.ಶಿವಕುಮಾರ ಶತ್ರು ಸಂಹಾರ ಯಾಗ ಮಾಡಿಸಿದ್ದಾರೆ. ತೆರೆಮರೆಯಲ್ಲಿ ಇರುವ ಕಾಂಗ್ರೆಸ್ ಗುದ್ದಾಟ ಶೀಘ್ರದಲ್ಲೇ ಬೀದಿರಂಪವಾಗಲಿದೆ ಎಂದರು.
ನಕ್ಸಲರ ಶರಣಾಗತಿ ಬಗ್ಗೆ ಸರ್ಕಾರ ಇಷ್ಟೊಂದು ವೈಭವೀಕರಿಸುವ ಅವಶ್ಯಕತೆ ಇರಲಿಲ್ಲ. ನಕ್ಸಲರು ಚಿಕ್ಕಮಗಳೂರು ಜಿಲ್ಲಾಧಿಕಾರಿಗಳ ಮುಂದೆ ಶರಣಾಗಬೇಕಾಗಿತ್ತು. ಕೊನೆ ಕ್ಷಣದಲ್ಲಿ ನಿಲುವು ಬದಲಿಸಿ ಸಿಎಂ ಎದುರು ಶರಣಾಗಿದ್ದು ಸರಿಯಲ್ಲ ಎಂದರು.
ವಿಧಾನಪರಿಷತ್ತು ಸದಸ್ಯ ಸಿ.ಟಿ.ರವಿ ಅವರಿಗೆ ಏನಾದರು ಆದರೆ ಅದಕ್ಕೆ ಕಾಂಗ್ರೆಸ್ ಸರ್ಕಾರವೇ ಹೊಣೆ ಎಂದು ಶೆಟ್ಟರ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Leopard: ಹಾಡಹಗಲೇ ಕುದುರೆಮುಖ ರಾಷ್ಟ್ರೀಯ ಹೆದ್ದಾರಿಯಲ್ಲಿ ಓಡಾಡಿದ ಚಿರತೆ…
Dandeli: ನಿಯಮ ಉಲ್ಲಂಘಿಸಿದ ದ್ವಿಚಕ್ರ ವಾಹನಗಳಿಗೆ ಬಿಸಿ ಮುಟ್ಟಿಸಿದ ಅಧಿಕಾರಿ
Mangaluru Lit Fest: ಯಾವುದೇ ಉತ್ಸವ ಯಾಂತ್ರಿಕವಾದರೆ ಹೊಸತನ ಮೂಡಲ್ಲ: ಎಸ್.ಎಲ್ ಭೈರಪ್ಪ
Belagavi: ಗಾಂಜಾ ವಿಚಾರಕ್ಕೆ ಒಡಹುಟ್ಟಿದವರ ಗಲಾಟೆ; ಓರ್ವ ಸಾವು, ಮತ್ತೋರ್ವ ಗಂಭೀರ
Mudhol: ಪ್ರಯಾಣಿಕರ ಉಪಯೋಗಕ್ಕೆ ಬಾರದ ತಂಗುದಾಣ… ಅಂಗಡಿ ಮುಂಗಟ್ಟಿನಿಂದ ಕಣ್ಮರೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.