Hubli; ಕರ್ತವ್ಯ ಬಹಿಷ್ಕರಿಸಿ ಪಾಲಿಕೆ ಕಚೇರಿ ಸಿಬ್ಬಂದಿ ಪ್ರತಿಭಟನೆ
Team Udayavani, Jul 25, 2024, 3:06 PM IST
ಹುಬ್ಬಳ್ಳಿ: ಜೂನ್ ತಿಂಗಳ ವೇತನ ಹಾಗೂ 7ನೇ ವೇತನ ಆಯೋಗದ ಮಧ್ಯಂತರ ಪರಿಹಾರ ಶೇ.17 ನ್ನು ಅಳವಡಿಸದೆ ನಿರ್ಲಕ್ಷ್ಯ ತೋರಿದ್ದಾರೆ ಎಂದು ಮಹಾನಗರ ಪಾಲಿಕೆ ಕಚೇರಿ ಸಿಬ್ಬಂದಿ ಕರ್ತವ್ಯ ಬಹಿಷ್ಕರಿಸಿ ಪ್ರತಿಭಟನೆ ಮುಂದಾಗಿದ್ದಾರೆ.
ಇಲ್ಲಿನ ಪಾಲಿಕೆ ಆಯುಕ್ತರ ಕಚೇರಿ ಮುಂಭಾಗದಲ್ಲಿ ಜಮಾಯಿಸಿ ಪ್ರತಿಭಟನೆಗೆ ಮುಂದಾಗಿದ್ದಾರೆ. 7ನೇ ವೇತನ ಆಯೋಗದ ಮಧ್ಯಂತರ ಪರಿಹಾರ ಆದೇಶ ನೀಡಿ ಜನೇವರಿ ತಿಂಗಳಿನಿಂದ ಇಲ್ಲಿಯವರೆಗೆ ಏಳು ತಿಂಗಳು ಕಳೆದರೂ ಪಾಲಿಕೆಯ ಸಿಬ್ಬಂದಿ ಹಾಗೂ ಅಧಿಕಾರಿಗಳ ವೇತನಕ್ಕೆ ಅಳವಡಿಸಿಲ್ಲ. 2022 ರಿಂದ ನಾಲ್ಕು ತುಟ್ಟಿ ಭತ್ಯೆಯ ಅಂತರ ಬಾಕಿ ಉಳಿದಿದೆ. ಅಲ್ಲದೇ ಸಕಾಲಕ್ಕೆ ವೇತನ ಪಾವತಿ ಮಾಡುತ್ತಿಲ್ಲ. ಇದರಿಂದ ಜೀವನ ನಿರ್ವಹಣೆ ಕಷ್ಟ ಎಂಬುವುದು ಸಿಬ್ಬಂದಿಯ ಅಸಮಧಾನವಾಗಿದೆ.
ಪ್ರತಿಭಟನೆಯಲ್ಲಿ ಅಟೆಂಡರ್, ಸಿಪಾಯಿ ಸೇರಿದಂತೆ ಕಚೇರಿ ಸಿಬ್ಬಂದಿ, ಆರೋಗ್ಯ ನಿರೀಕ್ಷರು, ಮೇಲ್ವಿಚಾರಕರು, ಕಚೇರಿ ಅಧೀಕ್ಷಕರು ಸೇರಿದಂತೆ ಹುಬ್ಬಳ್ಳಿ ಹಾಗೂ ಧಾರವಾಡದ ಕಚೇರಿಯ ಸಿಬ್ಬಂದಿ ಪಾಲ್ಗೊಂಡಿದ್ದಾರೆ. ವಿವಿಧ ವಲಯಗಳ ಸಿಬ್ಬಂದಿ ಕರ್ತವ್ಯ ಬಹಿಷ್ಕರಿಸಿದ್ದಾರೆ.
ಹು- ಧಾ ಮಹಾನಗರ ಪಾಲಿಕೆ ನೌಕರರ ಸಂಘದ ಅಧ್ಯಕ್ಷ ಪ್ರಸಾದ ಪೆರೂರ, ಉಪಾಧ್ಯಕ್ಷ ಕಾಶಿನಾಥ ಜಾದವ್, ಶ್ರೀನಾಥ ಪವಾರ, ಮಹಾಂತೇಶ ಹರಕುಣಿ, ಮಂಜುಳಾ ನಾಟಿಕರ, ಶಂಕರ ಗಂಗಾವತಿ, ವಿಶ್ವನಾಥ ಪಾಟೀಲ, ಗುರುನಾಥ ತಾಳಿಕೋಟಿ, ಅರುಣಕುಮಾರ, ಪ್ರಶಾಂತ ಶಿವಮೊಗ್ಗೆ, ವಿದ್ಯಾ ಪಾಟೀಲ, ರಾಧಾ ಸ್ವಾಧಿ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ
Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್
Hubli: ಕ್ರಿಮಿನಲ್ ಜತೆಯೇ ಪೊಲೀಸ್ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್ ಕಾರ್ಯಾಚರಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kundapura ದೊಡ್ಡಾಸ್ಪತ್ರೆಗೆ ವೈದ್ಯರ ಕೊರತೆ
Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು
Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್ ಸಿಇಒ ಸುಂದರ್ ಪಿಚೈ
Arrest Warrant: ರಾಬಿನ್ ಉತ್ತಪ್ಪ ವಿರುದ್ದ ಬಂಧನ ವಾರೆಂಟ್; ಜೈಲು ಪಾಲಾಗ್ತಾರಾ ಕ್ರಿಕೆಟಿಗ
Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.