Hubli; ಬಿಜೆಪಿ ನಾಯಕರ ವಿರುದ್ದ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರ ಬಳಿ ನಿಯೋಗ: ಸಿದ್ದರಾಮಯ್ಯ
Team Udayavani, Aug 30, 2024, 2:06 PM IST
ಹುಬ್ಬಳ್ಳಿ: ಕಾಂಗ್ರೆಸ್ ಸಚಿವರು, ಶಾಸಕರು ಹಾಗೂ ಸಂಸದರು ಸೇರಿಕೊಂಡು ಶನಿವಾರ ರಾಜ್ಯಪಾಲರನ್ನು ಭೇಟಿಯಾಗಲಿದ್ದೇವೆ. ಎಚ್.ಡಿ.ಕುಮಾರಸ್ವಾಮಿ, ಮುರುಗೇಶ ನಿರಾಣಿ, ಶಶಿಕಲಾ ಜೊಲ್ಲೆ ಹಾಗೂ ಜನಾರ್ದನ ರೆಡ್ಡಿ ಅವರ ಮೇಲಿರುವ ಪ್ರಾಸಿಕ್ಯೂಷನ್ ತನಿಖೆಗೆ ಆಗ್ರಹಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇವರ ಈ ಪ್ರಕರಣದಲ್ಲಿ ಈಗಾಗಲೇ ದೋಷಾರೋಪಣೆ ಪಟ್ಟಿ ಸಲ್ಲಿಕೆಯಾಗಿ ತನಿಖೆಯೂ ಪೂರ್ಣಗೊಂಡಿದೆ. ನಮ್ಮ ಪ್ರಕರಣದಲ್ಲಿ ಯಾವುದೇ ವಿಚಾರಣೆ ಆಗಿಲ್ಲ. ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸಿದರೆ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಸರ್ಕಾರವನ್ನು ಅಸ್ಥಿರ ಗೊಳಿಸುವ ಪ್ರಯತ್ನದಲ್ಲಿದ್ದಾರೆ ಎಂಬುದು ಸ್ಪಷ್ಟ ಎಂದರು.
ಬಿಜೆಪಿ ನಾಯಕರು ರಾಜೀನಾಮೆಗೆ ಆಗ್ರಹಿಸಿದ ಕೂಡಲೇ ಕೊಡಲು ಆಗುವುದಿಲ್ಲ. ವಿಜಯೇಂದ್ರ ರಾಜೀನಾಮೆ ನೀಡುವಂತೆ ನಾನೂ ಆಗ್ರಹಿಸುತ್ತೇನೆ. ರಾಜ್ಯಾಧ್ಯಕ್ಷರ ಸ್ಥಾನಕ್ಕೆ ಅವರು ರಾಜೀನಾಮೆ ಕೊಡುತ್ತಾರಾ ಎಂದು ಪ್ರಶ್ನಿಸಿದರು. ಅಲ್ಲದೆ, ಪ್ರಾಸಿಕ್ಯೂಷನ್ ವಿಚಾರವಾಗಿ ನಾಳೆ ವಿಚಾರಣೆ ನಡೆಯಲಿದೆ. ಹೈಕೋರ್ಟ್ ತೀರ್ಮಾನ ಏನೆಂಬುದು ಸ್ಪಷ್ಟವಾಗಲಿದೆ ಎಂದು ತಿರುಗೇಟು ನೀಡಿದರು.
ರಾಜ್ಯದಲ್ಲಿ ನಾವು ಜನಾಶೀರ್ವಾದದಿಂದ ಅಧಿಕಾರಕ್ಕೆ ಬಂದಿದ್ದೇವೆ. ಆದರೆ ಬಿಜೆಪಿಗರು ಆಪರೇಷನ್ ಕಮಲ ಮಾಡಿಯೇ ಅಧಿಕಾರ ಹಿಡಿದವರು. 136 ಶಾಸಕರಿರುವ ಸರಕಾರವನ್ನು ಅಸ್ಥಿರಗೊಳಿಸಲು ಕೇಂದ್ರ ಮತ್ತು ರಾಜ್ಯ ಬಿಜೆಪಿ ನಾಯಕರು ನಿರಂತರ ಪ್ರಯತ್ನಿಸುತ್ತಿದ್ದಾರೆ. ನಮ್ಮ ಯಾವೊಬ್ಬ ಶಾಸಕರೂ ಬಿಜೆಪಿಗೆ ಹೋಗುವುದಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ
Karnataka by-election: 3 ಕ್ಷೇತ್ರದಲ್ಲಿ 33.33 ಕೋ.ರೂ. ಮೌಲ್ಯದ ಅಕ್ರಮ ವಶ
JDS protest: ಎಚ್‌ಡಿಕೆ ಕರಿಯ: ಜಮೀರ್ ವಿರುದ್ಧ ಆಕ್ರೋಶ; ಸಂಪುಟದಿಂದ ಕೈಬಿಡಲು ಆಗ್ರಹ
Congress: “40 ಪರ್ಸೆಂಟ್ ಸಿಎಂ’ಗೆ ಸಾಕ್ಷಿ ಕೊಟ್ಟಿದ್ರ್ಯಾ?: ಸಿಎಂಗೆ ಸಿ.ಟಿ. ರವಿ
Congress Govt.,: ಅಬಕಾರಿ ಡೀಲರ್‌ಗಳಿಂದ ಸರ್ಕಾರಕ್ಕೆ 900 ಕೋಟಿ ರೂ. ಸಲ್ಲಿಕೆ: ಅಶೋಕ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.