ಹುಬ್ಬಳ್ಳಿ: ತುರ್ತು ಸ್ಪಂದನೆ ವ್ಯವಸ್ಥೆ ಸಂಖ್ಯೆ112 ಕ್ಕೆ ಚಾಲನೆ
Team Udayavani, Dec 15, 2020, 12:10 PM IST
ಹುಬ್ಬಳ್ಳಿ: ತುರ್ತು ಸಂದರ್ಭದಲ್ಲಿ ಪೊಲೀಸ್, ಅಗ್ನಿಶಾಮಕ, ಅಂಬ್ಯುಲೆನ್ಸ್ ಗಾಗಿ ಕರೆ ಮಾಡಲು ತುರ್ತು ಸ್ಪಂದನೆ ವ್ಯವಸ್ಥೆ ಸಂಖ್ಯೆ112 ಕ್ಕೆ ಚಾಲನೆ ನೀಡಲಾಗಿದೆ. ಕರೆ ಮಾಡಿದ 15 ಸೆಕೆಂಡುಗಳಲ್ಲಿ ಕರೆ ಸ್ವೀಕರಿಸಿ, ಹತ್ತು ನಿಮಿಷದ ಒಳಗಾಗಿ ಅಗತ್ಯ ಪೊಲೀಸ್ ನೆರವು ದೊರೆಯಲಿದೆ ಎಂದು ಹು.ಧಾ. ಮಹಾನಗರ ಪೊಲೀಸ್ ಆಯುಕ್ತ ಲಾಬುರಾಮ್ ಹೇಳಿದರು.
ಇಲ್ಲಿನ ಚನ್ನಮ್ಮ ವೃತ್ತದ ಬಳಿ ತುರ್ತು ಸ್ಪಂದನ ವ್ಯವಸ್ಥೆ ಸಂಖ್ಯೆ112 ಕ್ಕೆ ನಿಯೋಜಿಸಲಾಗಿರುವ ಹೊಯ್ಸಳ ಗಸ್ತು ವಾಹನಗಳಿಗೆ ಚಾಲನೆ ನೀಡಿ, ನಂತರ ಉಪನಗರ ಪೊಲೀಸ್ ಠಾಣೆಯಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.
ಸರ್ಕಾರದ ನಿರ್ದೇಶನದಂತೆ ಹುಬ್ಬಳ್ಳಿ ಧಾರವಾಡ ಅವಳಿ ನಗರದಲ್ಲಿ 15 ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 15 ತುರ್ತು ಸ್ಪಂದನ ವ್ಯವಸ್ಥೆ ವಾಹನಗಳನ್ನು ನಿಯೋಜಿಸಲಾಗಿದೆ. ಈ ವಾಹನಗಳು 24 ಗಂಟೆಯೂ ಕಾರ್ಯನಿರ್ವಹಿಸಲಿವೆ. ಕರೆ ಬಂದ ತಕ್ಷಣ ಸ್ಥಳಕ್ಕೆ ಧಾವಿಸುವ ಪೊಲೀಸ್ ತಂಡ ಅಗತ್ಯ ಸಹಾಯ ಒದಗಿಸುವುದು. ಸಾರ್ವಜನಿಕರು ಪೊಲೀಸ್ ದೂರುಗಳಿಗೆ ಸಂಬಂಧಿಸಿದಂತೆ ನೇರವಾಗಿ 112 ಗೆ ಕರೆ ಮಾಡಬಹುದು. ತುರ್ತು ಸ್ಪಂದನ ವ್ಯವಸ್ಥೆಗೆ ಸಂಬಂಧಪಟ್ಟಂತೆ ಅ್ಯಪ್ ಲಭ್ಯವಿದೆ. ಗೂಗಲ್ ಪ್ಲೇ ಸ್ಟೋರ್ ಮೂಲಕ 112 India mobile app ಡೌನ್ ಲೋಡ್ ಮಾಡಿಕೊಳ್ಳಬಹುದು. [email protected] ಗೆ ಮೇಲ್ ಮಾಡಿ ಸಹ ದೂರು ಸಲ್ಲಿಸಬಹುದಾಗಿದೆ ಎಂದರು.
ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ಆರ್. ಡಿ. ಬಸರಗಿ ಸೇರಿದಂತೆ ಇತರೆ ಪೊಲೀಸ್ ಅಧಿಕಾರಿಗಳು ಇದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.