ಹುಬ್ಬಳ್ಳಿ: ಆನೆ ದಂತದ ಕಲಾಕೃತಿ ಮಾರಾಟ ಮಾಡುತ್ತಿದ್ದ ಐವರ ಬಂಧನ


Team Udayavani, Feb 16, 2023, 2:24 PM IST

ಹುಬ್ಬಳ್ಳಿ: ಆನೆ ದಂತದ ಕಲಾಕೃತಿ ಮಾರಾಟ ಮಾಡುತ್ತಿದ್ದ ಐವರ ಬಂಧನ

ಹುಬ್ಬಳ್ಳಿ: ಆನೆ ದಂತದಿಂದ ಮಾಡಿರುವ ಕಲಾಕೃತಿಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಐವರು ದಂತಚೋರರನ್ನು ಬಂಧಿಸುವಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.

ಎಡಿಜಿಪಿ ಸಿಐಡಿ ಬೆಂಗಳೂರು ಮತ್ತು ಪ್ರಭಾರ ಡಿಐಜಿಪಿ ಸಿಐಡಿ ಅರಣ್ಯ ಘಟಕ ಬೆಂಗಳೂರು ಹಾಗೂ ಪೊಲೀಸ್ ಉಪಾಧೀಕ್ಷಕರು ಸಿಐಡಿ ಅರಣ್ಯ ಘಟಕ ಹುಬ್ಬಳ್ಳಿ ವಿಭಾಗದವರ ಮಾರ್ಗದರ್ಶನದಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿದ ಸಂಚಾರ ಅರಣ್ಯ ಇಲಾಖೆಯ ಸಿಬ್ಬಂದಿಯು ಐವರನ್ನು ಬಂಧಿಸಿದ್ದು, ಲಕ್ಷಾಂತರ ಮೌಲ್ಯದ ಆನೆ ದಂತದ ಕಲಾಕೃತಿಗಳನ್ನು ವಶಕ್ಕೆ ಪಡೆದಿದ್ದಾರೆ.

ಕೊಲ್ಲಾಪುರ ಮೂಲದ ಸಾತ್ ಶಹಾಜನ್ ಜಮಾದಾರ, ವಿಜಯ ರಾಜಾರಾಂ ಕುಂಬಾರ, ಸಾಗರ ಸುಭಾಷ ಪುರಾಣಿಕ, ನಿಪ್ಪಾಣಿ ಮೂಲದ ವಿನಾಯಕ ನಾಮದೇವ ಕಾಂಬ್ಳೆ, ದಾನಜೀ ಪಾಂಡುರಂಗ ಪಾಟೀಲ ಎಂಬುವವರೇ ಬಂಧಿತರಾದವರು.

ಅಕ್ರಮವಾಗಿ ಆನೆ ದಂತದಿಂದ ಮಾಡಿರುವ ಕಲಾಕೃತಿಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದಾಗ ಬಂಧಿತರಿಂದ 384 ಗ್ರಾಂ ತೂಕದ ಆನೆಯ ದಂತದಿಂದ ತಯಾರಿಸಿದ ಅಲಂಕಾರಿಕ ಪೆಟ್ಟಿಗೆ, 112 ಗ್ರಾಂ ತೂಕದ ಕೆಂಪು ಹರಳು ಇರುವ ಒಂದು ಖಡ್ಗ, 350 ಗ್ರಾಂ ತೂಕದ ಆಯತಾಕಾರದ ಪೆಟ್ಟಿಗೆ, 279 ಗ್ರಾಂ ತೂಕದ ಒಂದು ಮೊಟ್ಟೆಯಾಕಾರದ ಪೆಟ್ಟಿಗೆ ವಶಕ್ಕೆ ಪಡೆದಿದ್ದಾರೆ.

ಬಂಧಿತ ಸಾತ್ ಶಹಜಾನ ಜಮಾದಾರನನ್ನು ವಿಚಾರಣೆಗೊಳಪಡಿಸಿದಾಗ, ಆನೆ ದಂತದ ಅಲಂಕಾರಿಕ ವಸ್ತುಗಳನ್ನು ತನ್ನ ತಂದೆ ಶಹಜಾನ ಜಮಾದಾರ ರಾಜಸ್ಥಾನದಲ್ಲಿ ನಡೆಯುವ ಜಾತ್ರೆ, ಸಂತೆಗಳು, ಸಾಧುಸಂತರ ಬಳಿಯಿಂದ ಅನೇಕ ವರ್ಷಗಳ ಹಿಂದೆ ಸಂಗ್ರಹಿಸಿ ಮನೆಯಲ್ಲಿಟ್ಟಿದ್ದರು. ಅವುಗಳನ್ನು ಮಾರಾಟ ಮಾಡಿದರೆ ಸಾಕಷ್ಟು ಹಣ ಬರಬಹುದೆಂದು ತಿಳಿದು ಮಾರಾಟ ಮಾಡಲು ಬಂದಿರುವುದಾಗಿ ಬಾಯಿ ಬಿಟ್ಟಿದ್ದಾನೆ ಎಂದು ಮೂಲಗಳು ತಿಳಿಸಿವೆ.

ಬಂಧಿತರ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆ 1972 ರಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್ ಪ್ರಸಾದ ಪಣೇಕರ್ ಹಾಗೂ ಸಿಬ್ಬಂದಿಗಳಾದ ಎಲ್.ಎ ಪಾಠಕ, ಅಶೋಕ ನಾಗರಹಳ್ಳಿ, ರವೀಂದ್ರ ಗೋಣೆನವರ, ಎಸ್.ಎಚ್‌. ಹುಲಗೇರ ಹಾಗೂ ದಿವ್ಯ ಎಸ್ ನಾಯ್ಕ ಅವರ ಕಾರ್ಯಕ್ಕೆ ಅಧಿಕಾರಿಗಳು ಅಭಿನಂದನೆ ಸಲ್ಲಿಸಿದ್ದಾರೆ.

ಟಾಪ್ ನ್ಯೂಸ್

Yadiyurappa (2)

B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

K L RAhul

K.L. Rahul; ಕುಡ್ಲದ ಜನರ ಬೆಂಬಲವೇ ಸಾಧನೆಗೆ ಕಾರಣ

1-siddu

BJP ಸರಕಾರ ಕಾಲದ ಕೋವಿಡ್‌, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

doctor 2

Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್‌ ಕೇರ್‌ ವಿಭಾಗ ಆರಂಭ

Beer

Bandh; ನ. 20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-

NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ

4-

ಸಿಎಂ ಆಗಿದ್ದವರು ಈ‌ ರೀತಿ ಹೇಳಿಕೆ ನೀಡುವ ಬದಲು, ಸ್ಪಷ್ಟ ಹೇಳಿಕೆ ನೀಡಲಿ: ಸಚಿವ ಶಿವಾನಂದ

ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್‌ ನಿಂದ ಹಲ್ಲೆ

dharwad: ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್‌ ನಿಂದ ಹಲ್ಲೆ

CM-siddu

Covid Scam: ಸಚಿವ ಸಂಪುಟದಲ್ಲಿ ಚರ್ಚಿಸಿ ಮುಂದಿನ ಕ್ರಮ: ಸಿಎಂ ಸಿದ್ದರಾಮಯ್ಯ

b s yediyurappa

By Election: ಹಣ ಕೊಟ್ಟರೂ ಸಿಎಂ ಕಾರ್ಯಕ್ರಮಕ್ಕೆ ಜನ ಬರುತ್ತಿಲ್ಲ: ಬಿಎಸ್‌ ವೈ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Yadiyurappa (2)

B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

K L RAhul

K.L. Rahul; ಕುಡ್ಲದ ಜನರ ಬೆಂಬಲವೇ ಸಾಧನೆಗೆ ಕಾರಣ

1-siddu

BJP ಸರಕಾರ ಕಾಲದ ಕೋವಿಡ್‌, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.