ಗದುಗಿನ ಆಶ್ರಮಕ್ಕೆ ಹುಬ್ಬಳ್ಳಿ ಗಣೇಶ!

Team Udayavani, Sep 2, 2017, 12:55 PM IST

hub2.jpg

ಹುಬ್ಬಳ್ಳಿ: ನಗರದ ವೀರಾಪುರ ಓಣಿಯ (ಗೌಡರ ಓಣಿ) ಶ್ರೀ ವಿಘ್ನೇಶ್ವರ ಗೆಳೆಯರ ಬಳಗದವರು ಪ್ರತಿಷ್ಠಾಪಿಸಿದ ಪಂ| ಪುಟ್ಟರಾಜ ಗವಾಯಿಗಳು ತಬಲಾ ನುಡಿಸುತ್ತಿರುವ ಭಂಗಿಯ ಗಣೇಶ ಮೂರ್ತಿಯನ್ನು ವಿಸರ್ಜನೆ ಬದಲು ಗದುಗಿನ ಪುಟ್ಟರಾಜ ಗವಾಯಿಗಳ ಆಶ್ರಮಕ್ಕೆ ಸೆ. 2ರಂದು ಕೊಡುಗೆಯಾಗಿ ನೀಡುತ್ತಿದ್ದಾರೆ. ಅಲ್ಲಿ ಗಾಜಿನ ಪೆಟ್ಟಿಗೆಯಲ್ಲಿ ಮೂರ್ತಿಯನ್ನು ಪ್ರದರ್ಶನಕ್ಕಿಡಲಾಗುತ್ತದೆ. 

21 ವರ್ಷದ ಇತಿಹಾಸ: ವೀರಾಪುರ ಓಣಿಯ ಶ್ರೀ ವಿಘ್ನೇಶ್ವರ ಗೆಳೆಯರ ಬಳಗ ಸುಭಾಷ ಮಡ್ಡಿ, ನಾಗಪ್ಪ ಕೊಳಲ, ಚಂದ್ರಶೇಖರ ಪಾಟೀಲ, ನಾಗರಾಜ ಅಂಬಿಗೇರ ಸೇರಿದಂತೆ 11 ಪದಾಧಿಕಾರಿಗಳೊಂದಿಗೆ 1996ರಲ್ಲಿ ಸ್ಥಾಪನೆಗೊಂಡಿದ್ದು, ಈಗ 21 ಮಂದಿ ಇದ್ದಾರೆ.

ಕಳೆದ 21 ವರ್ಷದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿ ಪ್ರತಿಷ್ಠಾಪಿಸುತ್ತ ಬಂದಿದ್ದಾರೆ. ಮೊದಲೆರಡು ವರ್ಷ ಏಳು ದಿನ ಗಣಪನನ್ನು ಪ್ರತಿಷ್ಠಾಪಿಸಿದ್ದರೆ, ನಂತರದ ವರ್ಷಗಳಲ್ಲಿ 9 ದಿನ ಪ್ರತಿಷ್ಠಾಪನೆ ಮಾಡಿ ವಿಶೇಷ ಪೂಜೆ, ಕಾರ್ಯಕ್ರಮ ನಡೆಸುತ್ತ ಬಂದಿದ್ದಾರೆ. ಪ್ರತಿಷ್ಠಾಪನೆ-ವಿಸರ್ಜನಾ ಮೆರವಣಿಗೆ ವೇಳೆ ಆಡಂಬರ, ಡಿಜೆ ಸಿಸ್ಟಮ್‌ ಬದಲು ಸಾಂಪ್ರದಾಯಿಕ ಪದ್ಧತಿ ಅನುಸರಿಸುತ್ತ ಬಂದಿದ್ದಾರೆ. 

ಕಳೆದ ವರ್ಷವೇ ತೀರ್ಮಾನ: ಗಣೇಶ ಮೂರ್ತಿ ವಿಸರ್ಜನೆ ಬದಲು ಸಂರಕ್ಷಿಸಿಟ್ಟರೆ ಹೇಗೆ ಎಂಬ ಆಲೋಚನೆಯನ್ನು ಬಳಗದವರು ಮಾಡಿದ್ದರು. ಅದರಂತೆ ಪಂ| ಪುಟ್ಟರಾಜ ಕವಿ ಗವಾಯಿಗಳ ಭಂಗಿಯ ಗಣೇಶ ಮೂರ್ತಿ ಪ್ರತಿಷ್ಠಾಪಿಸಲು ಕಳೆದ ವರ್ಷವೇ ತೀರ್ಮಾನಿಸಿದ್ದರು.

ಪುಟ್ಟರಾಜ ಗವಾಯಿಗಳ ಆಶ್ರಮಕ್ಕೆ ತೆರಳಿ ಅಲ್ಲಿನ ಪೀಠಾಧಿಕಾರಿ ಹಾಗೂ ಆಡಳಿತ ಮಂಡಳಿಯವರನ್ನು ಸಂಪರ್ಕಿಸಿ ಪರವಾನಗಿ ಕೂಡ ಪಡೆದು ಬಂದಿದ್ದರು. ನಂತರ ತಾಲೂಕಿನ ಅಂಚಟಗೇರಿಯ ಯಲ್ಲಪ್ಪ ಬೆಳಗಲಿ ಅವರಿಂದ ಪಂ| ಪುಟ್ಟರಾಜ ಗವಾಯಿಗಳ ಭಂಗಿಯ ಗಣೇಶ ಮೂರ್ತಿ ಸಿದ್ಧಪಡಿಸಿ ಪ್ರತಿಷ್ಠಾಪಿಸಿದ್ದಾರೆ.  

ಇಂದು ಹಸ್ತಾಂತರ: ಗಣೇಶ ಮೂರ್ತಿಯನ್ನು ಪುಟ್ಟರಾಜ ಗವಾಯಿಗಳ ಆಶ್ರಮಕ್ಕೆ ಸೆ. 2ರಂದು ಹಸ್ತಾಂತರ ಮಾಡಲಾಗುತ್ತಿದೆ. ಅಂದು ಬೆಳಗ್ಗೆ 11 ಗಂಟೆಗೆ ಇಲ್ಲಿನ ವೀರಾಪುರ ಓಣಿಯಿಂದ ಹಿರಿಯರು, ಯುವಕರ ತಂಡ 21 ಮುತ್ತೆçದೆಯರೊಂದಿಗೆ ವಾಹನಗಳಲ್ಲಿ ಗದುಗಿಗೆ ತೆರಳಲಿದೆ.

ಅಲ್ಲಿ ಪುಟ್ಟರಾಜ ಗವಾಯಿಗಳ ಆಶ್ರಮದ ಪ್ರವೇಶದ್ವಾರದಿಂದ ಆಶ್ರಮದ ವರೆಗೆ ಮೆರವಣಿಗೆ ಮೂಲಕ ಗಣೇಶ ಮೂರ್ತಿ ಒಯ್ದು ಹಸ್ತಾಂತರ ಮಾಡಲಿದ್ದಾರೆ. ಅಂದಹಾಗೆ ಈ ಬಳಗದವರು ಕಳೆದ ವರ್ಷ ಶ್ರೀ ಸಿದ್ಧಾರೂಢಸ್ವಾಮಿ ಹೋಲಿಕೆಯ ಗಣೇಶ ಮೂರ್ತಿ ಪ್ರತಿಷ್ಠಾಪಿಸಿದ್ದರು.

* ಶಿವಶಂಕರ ಕಂಠಿ

ಟಾಪ್ ನ್ಯೂಸ್

Youth assaulted near Belagavi airport compound

Belagavi ವಿಮಾನ ನಿಲ್ದಾಣ ಕಂಪೌಂಡ್ ಬಳಿ ಯುವಕನ ಹತ್ಯೆ; ಕಾರಣ ನಿಗೂಢ

Theft Case: ರಾಮಭಜನೆ ಮಾಡುತ್ತಿದ್ದಾಗ ಮನೆಗೆ ನುಗ್ಗಿ ಕಳ್ಳತನ

Theft Case: ರಾಮಭಜನೆ ಮಾಡುತ್ತಿದ್ದಾಗ ಮನೆಗೆ ನುಗ್ಗಿ ಕಳ್ಳತನ

4

BBK11: ಮುಖವಾಡ ಬಯಲು ಮಾಡುತ್ತೇವೆ..ಆರಂಭದಲ್ಲೇ ರೊಚ್ಚಿಗೆದ್ದ ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Employaement

Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ

Hubli: Bankrupt govt cutting BPL card: Prahlada Joshi

Hubli: ದಿವಾಳಿಯಾದ ಸರ್ಕಾರ ಬಿಪಿಎಲ್‌ ಕಾರ್ಡ್‌ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ

Yathanaa

Waqf Issue: ಮೂರು ತಂಡ ರಚನೆಗೆ ಅವ್ವ-ಅಪ್ಪ ಏನೂ ಇಲ್ಲ: ಬಸನಗೌಡ ಪಾಟೀಲ್‌ ಯತ್ನಾಳ್‌ ಆಕ್ಷೇಪ

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ

Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Youth assaulted near Belagavi airport compound

Belagavi ವಿಮಾನ ನಿಲ್ದಾಣ ಕಂಪೌಂಡ್ ಬಳಿ ಯುವಕನ ಹತ್ಯೆ; ಕಾರಣ ನಿಗೂಢ

Pustaka Santhe: 3 ದಿನಗಳ ಪುಸ್ತಕ ಸಂತೆಗೆ ಹರಿದು ಬಂದ ಜನಸಾಗರ

Pustaka Santhe: 3 ದಿನಗಳ ಪುಸ್ತಕ ಸಂತೆಗೆ ಹರಿದು ಬಂದ ಜನಸಾಗರ

Fraud: ಉದ್ಯಮಿಗೆ 1 ಕೋಟಿ ರೂಪಾಯಿ ವಂಚನೆ

Fraud: ಉದ್ಯಮಿಗೆ 1 ಕೋಟಿ ರೂಪಾಯಿ ವಂಚನೆ

Bengaluru: ವಿವಾಹವಾಗುವುದಾಗಿ ನಂಬಿಸಿ ಅತ್ಯಾಚಾರ; ದೂರು ದಾಖಲು

Bengaluru: ವಿವಾಹವಾಗುವುದಾಗಿ ನಂಬಿಸಿ ಅತ್ಯಾಚಾರ; ದೂರು ದಾಖಲು

Theft Case: ರಾಮಭಜನೆ ಮಾಡುತ್ತಿದ್ದಾಗ ಮನೆಗೆ ನುಗ್ಗಿ ಕಳ್ಳತನ

Theft Case: ರಾಮಭಜನೆ ಮಾಡುತ್ತಿದ್ದಾಗ ಮನೆಗೆ ನುಗ್ಗಿ ಕಳ್ಳತನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.