Hubli: ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಗಾಂಜಾ ಗ್ಯಾಂಗ್ ಬಂಧನ
Team Udayavani, Aug 9, 2024, 4:38 PM IST
ಹುಬ್ಬಳ್ಳಿ: ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಗಾಂಜಾ ಮಾರಾಟ ಮಾಡುತ್ತಿದ್ದವರನ್ನು ಬೆಂಡಿಗೇರಿ ಠಾಣೆ ಪೊಲೀಸರು ಬಂಧಿಸಿ, 2.50 ಲಕ್ಷ ರೂ. ಮೌಲ್ಯದ 2.5 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ.
ಓಡಿಸ್ಸಾ ಮೂಲದ ಕೇಶಬಚಂದ್ರ, ನೀಲಾಂಬರ ರಾವುತ್, ಉತ್ತರಾಖಂಡದ ಮಹಮದ್ ಆಲಿ, ಹಾವೇರಿಯ ತೌಸಿಫ್ ಅಹ್ಮದ್, ಹುಬ್ಬಳ್ಳಿಯ ಪವನ, ಸಿದ್ಧಾರ್ಥ, ಮಂಜುನಾಥ, ನದೀಂ, ವಿಠ್ಠಲ, ಶಾನವಾಜ, ಗಣಪತಸಾ, ಕಾರ್ತಿಕ ಸೇರಿ 12 ಜನರನ್ನು ಬಂಧಿಸಲಾಗಿದೆ. ಅವರಿಂದ 5ಲಕ್ಷ ರೂ. ಮೌಲ್ಯದ ಕಾರು, ಎರಡು ತಲ್ವಾರ್, ಡ್ರ್ಯಾಗರ್, 10 ಮೊಬೈಲ್ ಪೋನ್‌ಗಳು ಹಾಗೂ 2 ಸಾವಿರ ರೂ. ನಗದು ವಶಪಡಿಸಿಕೊಂಡು, ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದರು.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಗಬ್ಬೂರ ಕ್ರಾಸ್ ಬಳಿ ಆರೋಪಿಗಳನ್ನು ಕರೆದೊಯ್ದು ಪಂಚನಾಮೆ ನಡೆಸುತ್ತಿದ್ದಾಗ, ಕೇಶವಚಂದ್ರ, ನೀಲಾಂಬರ ಮತ್ತು ತೌಸಿಫ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದರು. ಆ ವೇಳೆ ಸಿಸಿಬಿ ವಿಭಾಗದ ಪಾಟೀಲ ಮತ್ತು ಹೆದ್ದೇರಿ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಕಿಮ್ಸ್‌ಗೆ ದಾಖಲಿಸಲಾಗಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಡಬಲ್ ಗೇಮ್; ವಕ್ಫ್ ಆಸ್ತಿ ರಕ್ಷಣೆ ಬಗ್ಗೆ ಬಿಜೆಪಿ ಪ್ರಣಾಳಿಕೆಯಲ್ಲಿ ಉಲ್ಲೇಖ: ಸಿದ್ದು
Hubli: ಅಪ್ರಾಪ್ತೆಯೊಂದಿಗೆ ಅನುಚಿತ ವರ್ತನೆ: ಮುಖ್ಯ ಪೇದೆ ವಿರುದ್ದ ಪೋಕ್ಸೋ ಕೇಸ್
Hubli: ಹಣಕಾಸು ಆಯೋಗದ ಅನ್ಯಾಯದ ಬಗ್ಗೆ ಬಿಜೆಪಿಯರಿಂದ ಮೌನ: ಸಿದ್ದರಾಮಯ್ಯ ಕಿಡಿ
Hubli: ಜನರ ದಿಕ್ಕು ತಪ್ಪಿಸಲು ಬಿಜೆಪಿಯಿಂದ ವಕ್ಫ್ ಹೋರಾಟ: ಸಿಎಂ ಸಿದ್ದರಾಮಯ್ಯ
By Election: ಶಿಗ್ಗಾವಿ ಸಮರ: ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಮುಖಂಡರ ಸಭೆ
MUST WATCH
ಹೊಸ ಸೇರ್ಪಡೆ
ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ
BBK11: ಕ್ಯಾಪ್ಟನ್ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.