Hubli; ದರ್ಶನ್ ಅವರನ್ನು ರಾಯಭಾರಿಯಾಗಿ ನೇಮಿಸಿದ್ದು ಸರ್ಕಾರದ ತಪ್ಪು: ಪ್ರಹ್ಲಾದ ಜೋಶಿ
Team Udayavani, Jun 15, 2024, 5:17 PM IST
ಹುಬ್ಬಳ್ಳಿ: ಸರ್ಕಾರ ರಾಯಭಾರಿಗಳನ್ನಾಗಿ ನೇಮಿಸುವ ಮೊದಲು ಅವರ ಪೂರ್ವಾಪರಗಳನ್ನು ಸರಿಯಾಗಿ ವಿಚಾರ ಮಾಡಬೇಕು. ಹಿಂದಿನ ಸರ್ಕಾರ ದರ್ಶನ ಅವರನ್ನು ರಾಯಭಾರಿ ಮಾಡಿದ್ದು ತಪ್ಪು. ದರ್ಶನ್ ಈ ಹಿಂದೆಯೂ ಹಲ್ಲೆ ಮತ್ತಿತರ ಪ್ರಕರಣಗಳನ್ನು ಎದುರಿಸಿದವರು. ಇಷ್ಟೆಲ್ಲಾ ಆದಮೇಲೂ ಅವರನ್ನು ರಾಯಭಾರಿ ಮಾಡಿದ್ದು ತಪ್ಪು ಎಂದು ಕೇಂದ್ರ ಆಹಾರ ಮತ್ತು ನಾಗರಿಕ ವ್ಯಾಜ್ಯಗಳ ಸಚಿವ ಪ್ರಹ್ಲಾದ ಜೋಶಿ ತಿಳಿಸಿದರು.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಭಿಮಾನಿಗಳು ಅತಿರೇಕದಿಂದ ವರ್ತಿಸುವುದನ್ನು ಚಿತ್ರರಂಗದ ನಾಯಕರು ನಿಯಂತ್ರಿಸಬೇಕು. ಚಿತ್ರನಟರನ್ನು, ಕ್ರೀಡಾಲೋಕದವರನ್ನು ಬಳಸಿಕೊಂಡು ಜಾಗೃತಿ ಮೂಡಿಸುವುದು ಒಳ್ಳೆಯದು. ಆದರೆ ಮಾಡುವ ಮೊದಲು ಅವರ ಬಗ್ಗೆ ಪೂರ್ಣ ಮಾಹಿತಿ, ಹಿನ್ನೆಲೆ ಗಮನಿಸಿ ಮಾಡಬೇಕು. ಎಲ್ಲವೂ ಗೊತ್ತಿದ್ದರೂ ದರ್ಶನ ಅವರನ್ನು ರಾಯಭಾರಿಯನ್ನಾಗಿ ಮಾಡಿದವರು ಈ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಹಿಂದೂ ಕಾರ್ಯಕರ್ತರ ಮೇಲೆ ದೌರ್ಜನ್ಯ ನಡೆಯುತ್ತಿವೆ. ರಾಜ್ಯದಲ್ಲಿ ಮುಸ್ಲಿಂ ಮತಾಂಧರುಗಳಿಗೆ ಯಾವುದೇ ಭಯವಿಲ್ಲ. ರಾಜ್ಯ ಸ್ಲೀಪರ್ ಸೆಲ್ ಗಳಿಗೆ ಸುರಕ್ಷಿತ ಸ್ವರ್ಗವಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಇರುವುದರಿಂದ ಮತಾಂಧರು ಸರ್ಕಾರದ ರಕ್ಷಣೆ ಸಿಗುತ್ತೆ ಅನ್ನುವ ಭ್ರಮೆಯಲ್ಲಿದ್ದಾರೆ. ಆದರೆ ಈ ಮನಸ್ಥಿತಿಯಲ್ಲಿ ಇರುವುದು ಸರಿಯಲ್ಲ. ರಾಜ್ಯ ಸರಕಾರ ಕೂಡ ಈ ರೀತಿ ನಡೆದುಕೊಳ್ಳುವುದು ಸರಿಯಲ್ಲ ಎಂದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ
Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್
Hubli: ಕ್ರಿಮಿನಲ್ ಜತೆಯೇ ಪೊಲೀಸ್ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್ ಕಾರ್ಯಾಚರಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.