ಹುಬ್ಬಳ್ಳಿ: ‘ಅಮಿತ್ ಶಾ ಗೋ ಬ್ಯಾಕ್’ ಘೋಷಣೆ: ಪ್ರತಿಭಟನಾಕಾರರು ಪೊಲೀಸ್ ವಶಕ್ಕೆ
Team Udayavani, Jan 18, 2020, 4:13 PM IST
ಹುಬ್ಬಳ್ಳಿ: ಪೌರತ್ವ ಕಾಯ್ದೆ ಪರವಾಗಿ ಸಮಾವೇಶದಲ್ಲಿ ಹುಬ್ಬಳ್ಳಿಗೆ ಆಗಮಿಸುತ್ತಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದವರನ್ನು ವಶಕ್ಕೆ ಪಡೆಯಲಾಗಿದೆ.
ಪೌರತ್ವ ಕಾಯ್ದೆ ಮತ್ತು ಶಾ ಆಗಮನದ ವಿರುದ್ಧ ನಗರದ ಕೋರ್ಟ್ ವೃತ್ತದಲ್ಲಿ ಸಂವಿಧಾನ ರಕ್ಷಣಾ ಸಮಿತಿ ವತಿಯಿಂದ ಕಪ್ಪು ಬಟ್ಟೆ ಧರಿಸಿ ಪ್ರತಿಭಟನೆ ನಡೆಯಿತು. ಪ್ರತಿಭಟನಾಕಾರರು ಅಮಿತ್ ಶಾ ಗೋಬ್ಯಾಕ್ ಎಂದು ಘೋಷಣೆ ಕೂಗಿದರು. ಕೆಲಹೊತ್ತು ರಸ್ತೆ ತಡೆ ನಡೆಸಿದ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು. ಪ್ರತಿಭಟನೆ ನಡೆಸಿದ ವಿಜಯ ಗುಂಟ್ರಾಳ, ಅನ್ವರ ಮುಧೋಳ, ಅಶ್ರಫ ಅಲಿ, ದೇವಾನಂದ ಜಗಾಪುರ ಮೊದಲಾದವರಿದ್ದರು.
ಸಿಎಎ ವಿರೋಧಿಸಿ ಗಣೇಶ ಪೇಟೆ ಮುಕ್ಕೇರಿ ಓಣಿಯ ಕಟ್ಟಡದಿಂದ ಯುವಕರು ಕಪ್ಪುಬಣ್ಣದ ಗಾಳಿಪಟ ಮತ್ತು ಬಲೂನ್ ಹಾರಿಸಿದ ಘಟನೆಯೂ ವರದಿಯಾಗಿದೆ. ಪೊಲೀಸರು ಸ್ಥಳಕ್ಕೆ ಬರುತ್ತಿದ್ದಂತೆ ಯುವಕರು ತಲೆಮರೆಸಿಕೊಂಡರು. ಪೊಲೀಸರು ಕಟ್ಟಡದಲ್ಲಿದ್ದ ಗಾಳಿಪಟ, ಬಟ್ಟೆ ಹಾಗೂ ಅಕ್ಸಿನ್ ಬಾಟಲ್ ವಶ ಪಡಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನಪ್ಪನವರ ವಿರುದ್ದ ಬೆಲ್ಲದ್ ಟೀಕೆ
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.