Hubli: ಗೌರವ ಉಳಿಯಬೇಕೆಂದರೆ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು: ಬಸವರಾಜ ಬೊಮ್ಮಾಯಿ


Team Udayavani, Sep 26, 2024, 1:18 PM IST

Hubli: Siddaramaiah must resign if respect remains: Basavaraja Bommai

ಹುಬ್ಬಳ್ಳಿ: ತಮಗಿರುವ ಗೌರವ ಉಳಿಯಬೇಕೆಂದರೆ ಸಿಎಂ ಸಿದ್ದರಾಮಯ್ಯ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಸಂಸದ, ಮಾಜಿ‌ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದರು.

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರಿಗೆ ಕರ್ನಾಟಕ ರಾಜಕಾರಣದಲ್ಲಿ ಅವರದ್ದೇ ಆದ ಗುರುತಿದೆ.‌ ತಮ್ಮದೇ ಜನಾಭಿಪ್ರಾಯ ಇದೆ.‌ ಅದನ್ನು ಉಳಿಸಿಕೊಂಡು ಹೋಗಬೇಕಾದರೆ ನೈತಿಕತೆಯ ಮೇಲ್ಪಂಕ್ತಿ ಮೆರೆಯಬೇಕು. ಎಲ್ಲರಂತೆ ಉದಾಹರಣೆ ಕೊಟ್ಟರೆ ಇವರೂ ಅವರ ಸಾಲಿಗೆ ಸೇರುತ್ತಾರೆ ಎಂದರು.

ಸಿದ್ದರಾಮಯ್ಯರ ವಿರುದ್ಧ ದೂರು ಕೊಟ್ಟಿದ್ದಾರೆ. ರಾಜ್ಯಪಾಲರು ಆದೇಶ ಕೊಟ್ಟ ನಂತರ ಹೈಕೋರ್ಟ್ ಹಾಗೂ ಸೆಷನ್ ಕೋರ್ಟ್ ಆದೇಶ ಕೊಟ್ಟಿದೆ. ಪ್ರತಿ ಹಂತದಲ್ಲೂ ಕೇಸ್ ಇನ್ನಷ್ಟು ಬಿಗಿಗೊಳ್ಳುತ್ತಿದೆ. ಮುಂದೆ ಚಿಂತನೆ ಮಾಡುವ ಅವಶ್ಯಕತೆ ಇದೆ. ಕೋರ್ಟ್‌ನಲ್ಲಿ ಹೋರಾಟ ಮಾಡುವುದಕ್ಕೆ ಯಾರಿಗಾದರೂ ಅವಕಾಶವಿದೆ. ಆದರೆ ಸಾರ್ವಜನಿಕವಾಗಿ ಅವರ ಮೇಲಿರುವ ವಿಶ್ವಾಸ ಉಳಿಸಿಕೊಳ್ಳಬೇಕು. ಅದನ್ನು ಉಳಿಸಿಕೊಂಡು ಹೋಗುತ್ತಾರೆ ಎನ್ನುವ ವಿಶ್ವಾಸವಿದೆ ಎಂದರು.

ವಾಲ್ಮೀಕಿ ಹಗರಣ ಈಗಾಗಲೇ ಒಂದು ಹಂತ ತಲುಪಿದೆ. ಎಸ್‌ಐಟಿಯಲ್ಲಿ ಮಂತ್ರಿಗಳು, ಅಧ್ಯಕ್ಷರ ಹೆಸರಿಲ್ಲದೆ ಚಾರ್ಜ್‌ಶೀಟ್ ಸಲ್ಲಿಸಿದ್ದರು. ಅವಾಗಲೇ ಮುಚ್ಚಿ ಹಾಕುವ ಪ್ರಯತ್ನ ಮಾಡಿದರು. ಆದರೆ ಸಿಬಿಐ, ಇಡಿಯಲ್ಲಿ ತನಿಖೆ ಮಾಡುತ್ತಿರುವುದರಿಂದ ಅವರು ಚಾರ್ಜ್‌ಶೀಟ್ ಹಾಕಿದ್ದಾರೆ. ಕ್ರಮ ಕೈಗೊಳ್ಳುವುದು ಅನಿವಾರ್ಯ. ತಪ್ಪು ಆದಲ್ಲಿ ವಿರೋಧ ಪಕ್ಷವಾಗಿ ಹೋರಾಟ ಮಾಡುವ ಅವಶ್ಯಕತೆ ಇದೆ ಎಂದರು.

ಅಹಿಂದ ಬೆಂಗಳೂರು ಚಲೋ ಹೇಳಿಕೆಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಅವರು, ಅದರ ಬಗ್ಗೆ ನಾನು ಏನು ಹೇಳಿಕೆ ನೀಡಲ್ಲ. ಆದರೆ ಸಿದ್ದರಾಮಯ್ಯ ವಿರುದ್ಧ ಬಿಜೆಪಿಯಿಂದ ಹೋರಾಟ ಮುಂದುವರಿಯಲಿದೆ ಎಂದರು.

ಬಿಜೆಪಿಗೆ ಯಾವ ನೈತಿಕತೆ ಇದೆ ಅನ್ನುವ ವಿಚಾರವಾಗಿ ಪ್ರತಿಕ್ರಿಯಿಸುತ್ತ, ಯಾರ ಮೇಲೆ ಆರೋಪವಿದೆ, ಇಲ್ಲಾ ಅನ್ನುವ ಪ್ರಶ್ನೆಯಲ್ಲ. ಈಗ ಸಿಎಂ ಸಿದ್ದರಾಮಯ್ಯ ಅವರ ಪ್ರಶ್ನೆ ಬಂದಿದೆ. ಹಿಂದೆ ಅವರು ವಿಪಕ್ಷದಲ್ಲಿದ್ದಾಗ ಎಲ್ಲರ ನೈತಿಕತೆ ಪ್ರಶ್ನೆ ಮಾಡುತ್ತಿದ್ದರು. ಈಗ ಅವರು ಮುಖ್ಯಮಂತ್ರಿ ಆಗಿದ್ದಾರೆ. ಅವರೇ ನೈತಿಕತೆ ಪ್ರಶ್ನೆ ಮಾಡಿಕೊಳ್ಳಬೇಕು.  ಅದಕ್ಕೆ ಉತ್ತರ ಕೊಡಬೇಕು ಎಂದು ಆಗ್ರಹಿಸಿದರು.

ಶೀಘ್ರವೇ ಶಿಗ್ಗಾವಿ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಮಾಡುತ್ತೇವೆ: ಅಭ್ಯರ್ಥಿ ಆಯ್ಕೆ ಬಗ್ಗೆ ಈಗಾಗಲೇ ಎರಡು ಸಭೆಗಳನ್ನು ಮಾಡಲಾಗಿದೆ. ಹಲವು ಆಕಾಂಕ್ಷಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ. ಪರಿಶೀಲನೆ ಮಾಡಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.

ಶಿಗ್ಗಾವಿ ಕ್ಷೇತ್ರಕ್ಕೆ ಅಚ್ಚರಿ ಅಭ್ಯರ್ಥಿ ಹಾಗೂ ಮುರುಗೇಶ ನಿರಾಣಿ ಸೇರಿ ಹಲವರಿಂದ ಟಿಕೆಟ್ ಲಾಬಿ ಕುರಿತು ಪ್ರತಿಕ್ರಿಯಿಸಿದ ಅವರು, ಕಳೆದ ಹತ್ತು ದಿನಗಳಿಂದ ನಾನು ಊರಲ್ಲಿ ಇರಲಿಲ್ಲ. ಹೀಗಾಗಿ ಏನು ಬೆಳವಣಿಗೆ ಆಗಿದೆಯೋ ಗೊತ್ತಿಲ್ಲ. ಆದಷ್ಟು ಬೇಗ ಅಭ್ಯರ್ಥಿ ಅಂತಿಮಗೊಳಿಸಲಾಗುವುದು ಎಂದರು.

ಟಾಪ್ ನ್ಯೂಸ್

Santhekatte Road ; ಸ್ವಾಮಿ, ನಮ್ಮ ಗೋಳನ್ನೂ ಕೇಳಿ ಸ್ವಲ್ಪ

Santhekatte Road ; ಸ್ವಾಮಿ, ನಮ್ಮ ಗೋಳನ್ನೂ ಕೇಳಿ ಸ್ವಲ್ಪ

1-ttt

Karnataka; ರಾಜ್ಯ ಟೆನಿಸ್‌ ಅಂಕಣಗಳಿಗೆ ಅತ್ಯಾಧುನಿಕ ಸ್ಪರ್ಶ

Udupi: ಜಿಲ್ಲಾಸ್ಪತ್ರೆಯಲ್ಲಿ ಸ್ಕ್ಯಾನಿಂಗ್‌, ಎಂಆರ್‌ಐ ಸೇವೆ ವ್ಯತ್ಯಯ

Udupi: ಜಿಲ್ಲಾಸ್ಪತ್ರೆಯಲ್ಲಿ ಸ್ಕ್ಯಾನಿಂಗ್‌, ಎಂಆರ್‌ಐ ಸೇವೆ ವ್ಯತ್ಯಯ

1-team

Clean sweep ನಿರೀಕ್ಷೆಯಲ್ಲಿ ಭಾರತ: ಬಾಂಗ್ಲಾ ವಿರುದ್ಧದ ದ್ವಿತೀಯ ಟೆಸ್ಟ್‌  ಇಂದಿನಿಂದ

MONEY (2)

Minimum wages; ಅಸಂಘಟಿತ ಕಾರ್ಮಿಕರ ಕನಿಷ್ಠ ವೇತನ ಹೆಚ್ಚಿಸಿದ ಕೇಂದ್ರ

online

400 crores ಆನ್‌ಲೈನ್‌ ಗೇಮಿಂಗ್‌ ಆ್ಯಪ್‌ ವಂಚನೆ ಪತ್ತೆ

robbers

Leopard cage; ಚಿರತೆ ಬೋನಿನಲ್ಲಿಟ್ಟಿದ್ದ ಮೇಕೆ ಕದ್ದೊಯ್ದ ಖದೀಮರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BY-Vijayendra

CM: ಸಿದ್ದುಗೆ ಮಾದರಿ ಕೇಜ್ರಿವಾಲೋ, ರಾಮಕೃಷ್ಣ ಹೆಗಡೆಯೋ?: ಬಿ.ವೈ.ವಿಜಯೇಂದ್ರ

Mysuru-Dasara

Mysuru Dasara: ಎದೆ ಝಲ್‌ ಎನ್ನಿಸಿದ ಶಬ್ದಕ್ಕೂ ಜಗ್ಗದ ಗಜಪಡೆ

CID

Corruption Allegation: ಭೋವಿ ನಿಗಮ ಅಕ್ರಮ: ಲಂಚ ಪಡೆದ ತನಿಖಾಧಿಕಾರಿ ಅಮಾನತು

R.Ashok

MUDA Scam: ಸಿದ್ದರಾಮಯ್ಯಗೆ ಈಗ ಕಳ್ಳನ ಮನಸ್ಸು: ವಿಪಕ್ಷ ನಾಯಕ ಆರ್‌.ಅಶೋಕ್‌

Rain

Rain Alert: ಉಡುಪಿ, ಉತ್ತರ ಕನ್ನಡ ಸೇರಿ 6 ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ?

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Santhekatte Road ; ಸ್ವಾಮಿ, ನಮ್ಮ ಗೋಳನ್ನೂ ಕೇಳಿ ಸ್ವಲ್ಪ

Santhekatte Road ; ಸ್ವಾಮಿ, ನಮ್ಮ ಗೋಳನ್ನೂ ಕೇಳಿ ಸ್ವಲ್ಪ

1-ttt

Karnataka; ರಾಜ್ಯ ಟೆನಿಸ್‌ ಅಂಕಣಗಳಿಗೆ ಅತ್ಯಾಧುನಿಕ ಸ್ಪರ್ಶ

Udupi: ಜಿಲ್ಲಾಸ್ಪತ್ರೆಯಲ್ಲಿ ಸ್ಕ್ಯಾನಿಂಗ್‌, ಎಂಆರ್‌ಐ ಸೇವೆ ವ್ಯತ್ಯಯ

Udupi: ಜಿಲ್ಲಾಸ್ಪತ್ರೆಯಲ್ಲಿ ಸ್ಕ್ಯಾನಿಂಗ್‌, ಎಂಆರ್‌ಐ ಸೇವೆ ವ್ಯತ್ಯಯ

1-team

Clean sweep ನಿರೀಕ್ಷೆಯಲ್ಲಿ ಭಾರತ: ಬಾಂಗ್ಲಾ ವಿರುದ್ಧದ ದ್ವಿತೀಯ ಟೆಸ್ಟ್‌  ಇಂದಿನಿಂದ

MONEY (2)

Minimum wages; ಅಸಂಘಟಿತ ಕಾರ್ಮಿಕರ ಕನಿಷ್ಠ ವೇತನ ಹೆಚ್ಚಿಸಿದ ಕೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.