![1-sidda](https://www.udayavani.com/wp-content/uploads/2025/02/1-sidda-415x281.jpg)
![1-sidda](https://www.udayavani.com/wp-content/uploads/2025/02/1-sidda-415x281.jpg)
Team Udayavani, Jan 6, 2024, 5:34 PM IST
ಹುಬ್ಬಳ್ಳಿ: ಮೂವತ್ತು ವರ್ಷದ ಹಿಂದಿನ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಕರಸೇವಕ,ಆಟೋ ಚಾಲಕ ಶ್ರೀಕಾಂತ ಪೂಜಾರಿ ಜೈಲಿನಿಂದ ಬಿಡುಗಡೆಯಾಗಿದ್ದಾರೆ.
ಶುಕ್ರವಾರ ನ್ಯಾಯಾಲಯವು ಷರತ್ತುಬದ್ದ ಜಾಮೀನು ಮಂಜೂರು ಮಾಡಿದ ಹಿನ್ನೆಲೆಯಲ್ಲಿ ಇಂದು ಬಿಡುಗಡೆಗೊಂಡಿದ್ದಾರೆ. ಇಲ್ಲಿನ ಉಪಕಾರಾಗೃಹದಿಂದ ಬಿಡುಗಡೆಗೊಳ್ಳುತ್ತಿದ್ದಂತೆ ಹಿಂದೂ ಕಾರ್ಯಕರ್ತರು ಶ್ರೀರಾಮ ಕೀ ಜೈ ಎಂದು ಘೋಷಣೆ ಕೂಗಿದರು. ಹಾರ ಹಾಕಿ ಸಹಿ ತಿನ್ನಿಸಿ ಬರಮಾಡಿಕೊಂಡರು.
ಬಿಡುಗಡೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೂರು ದಶಕಗಳ ಹಿಂದಿನ ಪ್ರಕರವಣನ್ನು ಈ ಸಂದರ್ಭದಲ್ಲಿ ನನ್ನ ಬಂಧಿಸಿದ್ದಾರೆ. ನನಗೆ ವಾರಂಟ್, ಸಮನ್ಸ್ ನೀಡದೆ ನನ್ನನ್ನು ಬಂಧಿಸಿದ್ದಾರೆ. ನಾನು ಅಯೋಧ್ಯೆಯ ಶ್ರೀರಾಮನ ದರ್ಶನಕ್ಕೆ ಹೋಗುತ್ತೇನೆ. ನನ್ನ ಎಲ್ಲಾ ಪ್ರಕರಣಗಳು ಖುಲಾಸೆಯಾಗಿವೆ. ಆದರೂ ನನ್ನನ್ನು ಬಂಧಿಸಿದ್ದಾರೆ. ನನ್ನ ಬಿಡುಗಡೆಗೆ ಸಹಕರಿಸಿದ ಎಲ್ಲಾ ಹಿಂದೂ ಸಂಘಟನೆಗಳಿಗೆ ಧನ್ಯವಾದ ತಿಳಿಸಿದ ಅವರು, ಬಂಧನ ಮಾಡುವ ದಿನ ಮನೆಗೆ ಬಂದ ಪೊಲೀಸರು ಮಾರುಕಟ್ಟೆಗೆ ಕರೆದುಕೊಂಡು ಹೋಗುವುದಾಗಿ ಕರೆದುಕೊಂಡು ಹೋಗಿ ಜೈಲಿಗೆ ಕಳುಹಿಸಿದರು. ಸರಕಾರ ನನ್ನನ್ನು ಉದ್ದೇಶಪೂರ್ವಕವಾಗಿ ಬಂಧಿಸಿದೆಯೋ ಎಂಬುವುದು ನನಗೆ ಗೊತ್ತಿಲ್ಲ ಎಂದರು.
ಪುತ್ರ ಮಂಜುನಾಥ ಪೂಜಾರಿ ಮಾತನಾಡಿ, ತಂದೆಯವರ ಬಿಡುಗಡೆ ಯಾಗಿದ್ದಕ್ಕೆ ಸಾಕಷ್ಟು ಖುಷಿಯಾಗಿದೆ. ತಂದೆಯ ಬಿಡುಗಡೆಗೆ ಬಿಜೆಪಿ ಹಾಗೂ ಹಿಂದೂ ಸಂಘಟನೆಗಳು ಶ್ರಮವಹಿಸಿದ್ದಾರೆ. ಅವರೆಲ್ಲರಿಗೂ ಧನ್ಯವಾದ ಎಂದು ಹೇಳಿದರು.
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
You seem to have an Ad Blocker on.
To continue reading, please turn it off or whitelist Udayavani.