Karnataka Polls: ರಾಜ್ಯದ ಭವಿಷ್ಯದ ನಗರವಾಗಲಿದೆ ಹುಬ್ಬಳ್ಳಿ: ಜಗದೀಶ್ ಶೆಟ್ಟರ್
Team Udayavani, May 5, 2023, 9:26 AM IST
ಹುಬ್ಬಳ್ಳಿ: ನಗರದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳು ಕೈಗೊಳ್ಳಲಾಗಿದ್ದು, ರಾಜ್ಯದ ಭವಿಷ್ಯದ ನಗರವಾಗಿ ರೂಪುಗೊಳ್ಳಲಿದೆ ಎಂದು ಹು-ಧಾ ಕೇಂದ್ರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಮಾಜಿ ಸಿಎಂ ಜಗದೀಶ ಶೆಟ್ಟರ ಹೇಳಿದರು.
ವಾರ್ಡ್ 39, 41 ಮತ್ತು 47 ಸೇರಿದಂತೆ ವಿವಿಧ ಕಡೆ ಮತಯಾಚನೆ ಮಾಡಿ ಮಾತನಾಡಿದ ಅವರು, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ, ಜನರ ಹಿತದೃಷ್ಟಿಯಿಂದ ನಿರಂತರವಾಗಿ ಸೇವೆ ಸಲ್ಲಿಸುತ್ತ ಬಂದಿದ್ದೇನೆ. ಕ್ಷೇತ್ರದಲ್ಲಿ ಹಲವು ಮೂಲಸೌಲಭ್ಯಗಳ ನೀಡಿಕೆ ನಿಟ್ಟಿನಲ್ಲಿ ಪ್ರಾಮಾಣಿಕ ಯತ್ನ ತೋರಿದ್ದೇನೆ.ಕ್ಷೇತ್ರವನ್ನು ಉತ್ತಮಗೊಳಿಸಿದ ತೃಪ್ತಿ ಇದೆ ಎಂದರು.
ನೃಪತುಂಗ ಬೆಟ್ಟವನ್ನು ಅಭಿವೃದ್ಧಿಪಡಿಸಲಾಗಿದೆ. 1994ರಲ್ಲಿ ನೃಪತುಂಗ ಬೆಟ್ಟ ಅಭಿವೃದ್ಧಿಗೆ ಮುಂದಾದಾಗ ಹಲವರು ಕುಹಕವಾಡಿದ್ದರು. ಇದನ್ನು ಸವಾಲಾಗಿ ಸ್ವೀಕರಿಸಿ ಬೆಟ್ಟದ ಅಭಿವೃದ್ಧಿ ಕಾರ್ಯ ಕೈಗೊಂಡಿದ್ದೆ. ಇದೀಗ ಅದು ಪ್ರೇಕ್ಷಣೀಯ ಸ್ಥಳವಾಗಿದ್ದು, ನಗರಕ್ಕೆ ವರದಾನವಾಗಿದೆ.
ನೃಪತುಂಗ ಬೆಟ್ಟವನ್ನು ವೈಜ್ಞಾನಿಕವಾಗಿ ನಿರ್ಮಿಸಿ ಸಮಪಾತಳಿಯ ಪಾದಚಾರಿ ಮಾರ್ಗ, ವೈವಿಧ್ಯಮಯ ಉಪಕರಣಗಳು, ಕ್ರೀಡಾ ಚಟುವಟಿಕೆಗಳಿಗೆ ಪೂರಕ ವಾತಾವರಣ, ಮಕ್ಕಳು, ಮಹಿಳೆಯರು, ಪುರುಷರಿಗೆ ಅನುಕೂಲವಾಗುವಂತಹ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಬೆಟ್ಟದ ಮೇಲೆ ನಿಂತು ಬಹುತೇಕ ಹುಬ್ಬಳ್ಳಿಯನ್ನು
ವೀಕ್ಷಿಸಬಹುದಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
Negotiation: ಹೆಬ್ಬಾಳ್ಕರ್-ಸಿ.ಟಿ.ರವಿ ಪ್ರಕರಣ ಸಂಧಾನಕ್ಕೆ ಸಿದ್ಧ: ಬಸವರಾಜ ಹೊರಟ್ಟಿ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
CID Inquiry: ಪರಿಷತ್‌ನಲ್ಲಿ ನಡೆದ ಘಟನೆ ಎಂದು ಉಲ್ಲೇಖಿಸಿದ್ದು ತಪ್ಪು: ಬಸವರಾಜ ಹೊರಟ್ಟಿ
ಜೋಶಿ ಅವರಿಗೆ ನನ್ನ ಸಾಮರ್ಥ್ಯ ಗೊತ್ತಿಲ್ಲ… ಅಸಮರ್ಥ ಹೇಳಿಕೆಗೆ ತಿರುಗೇಟು ನೀಡಿದ ಪರಮೇಶ್ವರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Dangerous Stunt: 5 ವರ್ಷದ ಬಾಲಕನನ್ನು ಕಾರಿನ ಬಾನೆಟ್ ಮೇಲೆ ಕೂರಿಸಿ ಸ್ಟಂಟ್
BBK11: ಕ್ಯಾಪ್ಟನ್ ಆಗುವ ಆತುರದಲ್ಲಿ ಗೇಮ್‌ನಲ್ಲಿ ಮೋಸ? – ಭವ್ಯ ವಿರುದ್ದ ಗಂಭೀರ ಆರೋಪ
INDWvWIW: ದೀಪ್ತಿ ಶರ್ಮಾ ಆಲ್ ರೌಂಡ್ ಶೋ; ಸರಣಿ ಕ್ಲೀನ್‌ಸ್ವೀಪ್ ಮಾಡಿದ ವನಿತೆಯರು
Tollywood: ಎರಡು ಭಾಗಗಳಲ್ಲಿ ತೆರೆ ಕಾಣಲಿದೆ ವಿಜಯ್ ದೇವರಕೊಂಡರ ಬಹುನಿರೀಕ್ಷಿತ ʼVD12’
Naveen D. Padil: ನಟ ನವೀನ್ ಡಿ. ಪಡೀಲ್‌ರವರಿಗೆ ವಿಶ್ವಪ್ರಭಾ ಪುರಸ್ಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.