ಹುಬ್ಬಳ್ಳಿ: ತಾಪಮಾನ ಹೆಚ್ಚಳ ತಡೆಗೆ ಗಿಡ ನೆಡುವುದೇ ಪರಿಹಾರ
ಜಾಗತಿಕ ತಾಪಮಾನದಿಂದ ಪ್ರಕೃತಿಯು ನಮ್ಮ ಮೇಲೆ ಮುನಿಸಿಕೊಳ್ಳುತ್ತಿದೆ
Team Udayavani, Jun 13, 2024, 6:09 PM IST
ಉದಯವಾಣಿ ಸಮಾಚಾರ
ಹುಬ್ಬಳ್ಳಿ: ಅಭಿವೃದ್ಧಿ ಹೆಸರಲ್ಲಿ ಗಿಡ-ಮರ ನಾಶಪಡಿಸುತ್ತಿರುವುದರಿಂದ ತಾಪಮಾನ ಹೆಚ್ಚಾಗುತ್ತಿದೆ. ಇದನ್ನು ತಡೆಗಟ್ಟಬೇಕೆಂದರೆ ಸಾಲುಮರದ ತಿಮ್ಮಕ್ಕನಂತೆ ಗಿಡ ನೆಡುವ ಕಾರ್ಯ ನಮ್ಮಿಂದಾಗಬೇಕು ಎಂದು ಶ್ರೀ ಬಸವೇಶ್ವರ ರೂರಲ್ ಎಜ್ಯುಕೇಶನ್ ಟ್ರಸ್ಟ್ ನ ಅಧ್ಯಕ್ಷ ಶರಣಪ್ಪ ಕೊಟಗಿ ಹೇಳಿದರು.
ವಿಜಯನಗರ ಪಿಯು ಕಾಲೇಜಿನಲ್ಲಿ ಜಿಲ್ಲಾ ಅಭಿಯಾನ ಪರಿಸರ ಸಮಿತಿ, ವಿದ್ಯಾನಗರದ ಕೆಎಸ್‌ಎಸ್ ಪಿಯು ಕಾಲೇಜ್ ಮತ್ತು ಶ್ರೇಯಾ ಸೇವಾ ಫೌಂಡೇಶನ್ ವತಿಯಿಂದ ಹಮ್ಮಿಕೊಂಡಿದ್ದ ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಜಾಗತಿಕ ತಾಪಮಾನದಿಂದ ಪ್ರಕೃತಿಯು ನಮ್ಮ ಮೇಲೆ ಮುನಿಸಿಕೊಳ್ಳುತ್ತಿದೆ. ನಾವು ಪರಿಸರ ಕಾಯ್ದುಕೊಳ್ಳಬೇಕು ಮತ್ತು ಗಿಡ-ಮರಗಳನ್ನು ಹೆಚ್ಚೆಚ್ಚು ಬೆಳೆಸಿ ಅವುಗಳ ಪಾಲನೆ ಮಾಡಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ಕೆಎಸ್‌ಎಸ್ ಉಪಾಧ್ಯಕ್ಷ ಡಾ| ಶಾಂತಣ್ಣ ಕಡಿವಾಲ ಮಾತನಾಡಿ, ಗಿಡ-ಮರಗಳಿಲ್ಲದಿದ್ದರೆ ಭೂಮಿಯ ಫಲವತ್ತತೆ ಹಾಳಾಗುತ್ತದೆ. ಮುಂದಿನ ಯುವ ಪೀಳಿಗೆ ಆಕ್ಸಿಜನ್ ಬ್ಯಾಗ್‌ಗಳನ್ನು ಹಾಕಿಕೊಂಡು ಬದುಕುವ ಪರಿಸ್ಥಿತಿ ಬರುತ್ತದೆ ಎಂದು ಎಚ್ಚರಿಸಿದರು.
ಸಮಾಜ ಸೇವಕರಾದ ಸಂತೋಷ ಶೆಟ್ಟಿ, ಡಾ| ರಮೇಶ ಮಹಾದೇವಪ್ಪನವರ, ಸಂತೋಷ ವೆರ್ಣೆಕರ ಮಾತನಾಡಿದರು. ಪರಿಸರ
ಗೀತಗಾಯನ ಸ್ಪರ್ಧೆ ಹಮ್ಮಿಕೊಳ್ಳಲಾಗಿತ್ತು. ಪಾಲ್ಗೊಂಡ ಮಹಿಳಾ ಸಂಘಗಳಿಗೆ ಬಹುಮಾನ ಮತ್ತು ಸಸಿ ವಿತರಿಸಲಾಯಿತು. ವಿ.ಜಿ. ಪಾಟೀಲ, ಸಂದೀಪ ಬೂದಿಹಾಳ, ತೀರ್ಪುಗಾರರಾದ ಲತಾ ಶಿಂಧೆ, ವೈ.ಎನ್. ಮಾಳಗಿ, ಗದಗಯ್ಯ ಹಿರೇಮಠ, ಬಸವರಾಜ ಸುಳ್ಳದ, ಜಯಶ್ರೀ ಗೌಳಿ ಇನ್ನಿತರರಿದ್ದರು. ಡಾ| ರಾಮು ಮೂಲಗಿ ಸ್ವಾಗತ ಗೀತೆ ಹೇಳಿದರು. ಆರ್.ಎಂ. ಗೋಗೇರಿ
ಸ್ವಾಗತಿಸಿದರು. ಬೀರೇಶ ತಿರಕಪ್ಪನವರ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.