Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
Team Udayavani, Nov 16, 2024, 2:28 PM IST
ಹುಬ್ಬಳ್ಳಿ: ಹಳೇಹುಬ್ಬಳ್ಳಿ ಶರಾವತಿನಗರ ಬಳಿ ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು ಹಾಗೂ ಸಹಕರಿಸಿದ ಮೂವರನ್ನು ಹಳೇಹುಬ್ಬಳ್ಳಿ ಪೊಲೀಸರು ಶನಿವಾರ (ನ.16) ಬಂಧಿಸಿ, ಸ್ಕೂಟಿ ಮತ್ತು ಐದು ಮೊಬೈಲ್‌ಗಳನ್ನು ವಶಪಡಿಸಿಕೊಂಡಿದ್ದಾರೆ.
ಹಳೇಹುಬ್ಬಳ್ಳಿಯ ಅಯೋಧ್ಯಾನಗರ ನಿವಾಸಿಗಳಾದ ಶುಭಂ ತಡಸ, ಮೆಹಬೂಬ ಹಿತ್ತಲಮನಿ ಹಾಗೂ ಇವರಿಗೆ ಸಹಕರಿಸಿದ ಸಾಗರ ಸಾತಪುತೆ, ಶ್ರೀವತ್ಸವ ಬೆಂಡಿಗೇರಿ, ಸಚಿನ ನರೇಂದ್ರ ಬಂಧಿತರಾಧವರು.
ಎರಡು ದಿನಗಳ ಹಿಂದೆ ಬಾಲಕಿಯು ಶಾಲೆಯಿಂದ ಮನೆಗೆ ತೆರಳುವಾಗ ಸ್ಕೂಟಿಯಲ್ಲಿ ಹಿಂಬಾಲಿಸುತ್ತಾ ಬಂದ ಯುವಕರಿಬ್ಬರು ಚುಡಾಯಿಸಿದ್ದರು. ಈ ದೃಶ್ಯಾವಳಿಯು ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿತ್ತು. ಅದು ಸಾಮಾಜಿಕ ಜಾಲತಾಣಗಳಲ್ಲಿ ಹರದಾಡಿತ್ತು. ಬಾಲಕಿಯ ಪೋಷಕರು ಯುವಕರ ವಿರುದ್ಧ ಶುಕ್ರವಾರ (ನ.15) ಹಳೇಹುಬ್ಬಳ್ಳಿ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಿಸಿದ್ದರು.
ಠಾಣೆಯ ಇನ್ಸ್‌ಪೆಕ್ಟರ್ ಸುರೇಶ ಹಳ್ಳೂರ ನೇತೃತ್ವದಲ್ಲಿ ವಿಶೇಷ ತಂಡ ರಚಿಸಿ ಕಾರ್ಯಾಚರಣೆ ನಡೆಸಲಾಗಿತ್ತು. ಪ್ರಕರಣ ದಾಖಲಾದ ಎರಡು ಗಂಟೆಯೊಳಗೆ ಯುವಕರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ಪಿಎಸ್‌ಐ ರುದ್ರಪ್ಪ ಗುಡದರಿ, ಎಎಸ್ಐ ಪಿ.ಬಿ. ಕಾಳೆ ಮತ್ತು ಸಿಬ್ಬಂದಿ ಫಕ್ಕಿರೇಶ ಗೊಬ್ಬರಗುಂಪಿ, ಅಭಯ ಕಟ್ನಳ್ಳಿ, ನಾಗರಾಜ ಕೆಂಚಣ್ಣನವರ, ಕೃಷ್ಣ ಮೋಟೆಬೆನ್ನೂರ, ಸಂತೋಷ ವಲ್ಯಾಪುರ, ರಮೇಶ ಹಲ್ಲೆ, ಕಲ್ಲನಗೌಡ ಗುರನಗೌಡ, ವಿಠಲ ಹೊಸಳ್ಳಿ, ಜಗದೀಶ ಗೌಂಡಿ ಪಾಲ್ಗೊಂಡಿದ್ದರು.
ಪ್ರಮುಖ ಆರೋಪಿ ಶುಭಂ ತಡಸ ವಿರುದ್ಧ ಕಸಬಾಪೇಟೆ ಮತ್ತು ಹಳೇಹುಬ್ಬಳ್ಳಿ ಠಾಣೆಯಲ್ಲಿ ಎರಡು ಹಾಗೂ ಸಾಗರ ಸಾತಪುತೆ ವಿರುದ್ಧ ಹಳೇಹುಬ್ಬಳ್ಳಿ ಠಾಣೆಯಲ್ಲಿ ಎರಡು, ಸಚಿನ ನರೇಂದ್ರ ವಿರುದ್ಧ ಒಂದು ಪ್ರಕರಣ ದಾಖಲಾಗಿದ್ದು, ವಿಚಾರಣೆ ವೇಳೆ ತಿಳಿದು ಬಂದಿದೆ ಎಂದು ಹು-ಧಾ. ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಶನಿವಾರ ಸುದ್ದಿಗಾರರಿಗೆ ಮಾಹಿತಿ ಕೊಟ್ಟರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
MUST WATCH
ಹೊಸ ಸೇರ್ಪಡೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Kollywood: ಬಹಿರಂಗ ಪತ್ರ ಬರೆದು ಧನುಷ್ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?
Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ
Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.