Hubli: ವಕ್ಫ್ ಬೋರ್ಡ್ ಆಸ್ತಿ ಸಿದ್ದು ಸರ್ಕಾರದ ಕಬಳಿಕೆಗೆ ಕುಮ್ಮಕ್ಕು: ಪ್ರತಾಪ್ ಸಿಂಹ
Team Udayavani, Nov 7, 2024, 10:52 AM IST
ಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ವಕ್ಫ್ ಬೋರ್ಡ್ ಆಸ್ತಿ ಕಬಳಿಕೆಗೆ ಕುಮ್ಮಕ್ಕು ನೀಡುತ್ತಿದೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ (Pratap Simha) ಆರೋಪಿಸಿದರು.
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರಿಗೆ ಹಾಗೂ ಸಾಮಾನ್ಯ ಜನರಿಗೆ ಅನ್ಯಾಯವಾಗುತ್ತಿರುವುದನ್ನು ಖಂಡಿಸಿ ಬಿಜೆಪಿ ಹಿರಿಯ ನಾಯಕ ಬಸವನಗೌಡ ಪಾಟೀಲ ಯತ್ನಾಳ ಅವರ ಹೋರಾಟದ ಫಲವಾಗಿ ಕೇಂದ್ರದ ವಕ್ಫ್ ಬೋರ್ಡ್ ತಿದ್ದುಪಡಿ ಮಸೂದೆಯ ಸಂಸದೀಯ ಜಂಟಿ ಸಮಿತಿ ಅಧ್ಯಕ್ಷ ಆಗಮಿಸುತ್ತಿದ್ದು, ಜನರ ಅಹವಾಲು ಸ್ವೀಕರಿಸುತ್ತಿದ್ದಾರೆ. ಯತ್ನಾಳ ಅವರ ಹೋರಾಟದಿಂದ ಭೂಮಿ ಕಳೆದುಕೊಂಡ ರೈತರಿಗೆ ನ್ಯಾಯ ಸಿಗಲಿದೆ ಎಂದು ಹೇಳಿದರು.
ವಕ್ಫ್ ತಿದ್ದುಪಡಿ ಮಸೂದೆ ಜಾರಿಗೆ ತರುವುದು ಕೇಂದ್ರ ಸರ್ಕಾರದ ಮುಂದಿದೆ. ಸಮಿತಿ ಈ ಕಾರ್ಯ ಮಾಡಲಿದೆ. ವಕ್ಫ್ ಮುಖಾಂತರ ರಾಜ್ಯ ಸರ್ಕಾರ ಜನರಿಗೆ ಯಾವ ರೀತಿ ಮೋಸ ಮಾಡುತ್ತಿದ್ದಾರೆ. ಅದನ್ನು ಸರಿಪಡಿಸುವ ಒಂದು ಅವಕಾಶವಿದೆ. ಮುಂದೆ ವಕ್ಫ್ ತಿದ್ದುಪಡಿ ಕಾಯ್ದೆ ಬಂದಾಗ ಅನ್ಯಾಯಕ್ಕೊಳಗಾದ ಜನರಿಗೆ ನ್ಯಾಯ ದೊರೆಕಿಸಿಕೊಡಲು ಅವಕಾಶವಿದೆ ಎಂದು ಹೇಳಿದರು.
ಮುಡಾ ಪ್ರಕರಣಕ್ಕೆ ಸಂಬಂಧಿಸಿ ಲೋಕಾಯುಕ್ತ ವಿಚಾರಣೆ ಎದುರಿಸುತ್ತಿರುವ ಸಿಎಂ ಅವರ ಬಗ್ಗೆ ನಾನು ಮಾತನಾಡಲ್ಲ. ಕಳೆದ 4-5 ತಿಂಗಳಿನಿಂದ ರಾಜ್ಯದಲ್ಲಿ ಈ ವಿಷಯ ಚರ್ಚೆ ನಡೆಯುತ್ತಿದೆ. ಕಾನೂನಿನ ಎದುರು ಎಲ್ಲರೂ ತಲೆಬಾಗಬೇಕು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sugarcane: ನ.8ರಿಂದ ಕಬ್ಬು ಕಟಾವು ಆರಂಭಿಸಿ: ರೈತರಿಗೆ ಸಚಿವ ಶಿವಾನಂದ ಪಾಟೀಲ ಮನವಿ
Hubli: ಜನರ ಸಮಸ್ಯೆ ಆಲಿಸಿ ಸಭಾಪತಿಗೆ ವರದಿ: ಜೆಪಿಸಿ ಅಧ್ಯಕ್ಷ ಜಗದಂಬಿಕಾ ಪಾಲ್
ತಹಶೀಲ್ದಾರ್ ಕಚೇರಿಯಲ್ಲಿ ಅನ್ನದಾತರ ಅಹೋರಾತ್ರಿ ಧರಣಿ… ಇಂದು ಜಿಲ್ಲಾಧಿಕಾರಿ ಜೊತೆ ಸಭೆ
Belagavi: ಎಸ್‌ಡಿಎ ರುದ್ರಣ್ಣ ಮೊಬೈಲ್ ಪತ್ತೆ: ಪೊಲೀಸರಿಂದ ತನಿಖೆ ಚುರುಕು
FIR Petition: ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಬಲವಂತದ ಕ್ರಮ ಬೇಡ: ಹೈಕೋರ್ಟ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.