ಪಾಲಿಕೆ ಆವರಣದಲ್ಲಿ ಹೈಡ್ರಾಮಾ

Team Udayavani, Sep 8, 2017, 11:55 AM IST

hub2.jpg

ಹುಬ್ಬಳ್ಳಿ: ಇಡೀ ಪಾಲಿಕೆ ಆವರಣ ಗುರುವಾರ ಹಲವು ಗೊಂದಲ, ಹೈಡ್ರಾಮಾಕ್ಕೆ ವೇದಿಕೆಯಾಯಿತು. ಅತಿಕ್ರಮಣ ತೆರವು ಕಾರ್ಯಾಚರಣೆಯನ್ನು ಶುಕ್ರವಾರ ಬೆಳಗ್ಗೆ ಕೈಗೊಳ್ಳುವುದಾಗಿ ಪಾಲಿಕೆ ಆಯುಕ್ತರು ಭರವಸೆ ನೀಡಿದ್ದರಿಂದ ಬಿಜೆಪಿಯವರು ಹಾಗೂ ಪಾಲಿಕೆ ಬಿಜೆಪಿ ಸದಸ್ಯ ಕ್ಷಮೆಯಾಚಿಸಿದ್ದರಿಂದ ಪಾಲಿಕೆ ಸಿಬ್ಬಂದಿ ಪ್ರತಿಭಟನೆ ಹಿಂಪಡೆದುಕೊಂಡರು.

ಸರಕಾರಿ ಕರ್ತವ್ಯಕ್ಕೆ ಅಡ್ಡಿ  ಆರೋಪದ ಮೇರೆಗೆ ಪಾಲಿಕೆ ಆಯುಕ್ತರು ನೀಡಿದ್ದ ದೂರು ಕುರಿತಾಗಿ ಪೊಲೀಸರು ಪಾಲಿಕೆ ಬಿಜೆಪಿಸದಸ್ಯನನ್ನು ವಶಕ್ಕೆ ಪಡೆದಿದ್ದರಾದರೂ, ಕೆಲ ಗಂಟೆ ಪೊಲೀಸ್‌ ಠಾಣೆಯಲ್ಲಿ ಇರಿಸಿಕೊಂಡ ನಂತರ ವಿಚಾರಣೆಗೆ ಸಹಕಾರ ನೀಡುವುದಾಗಿ ಮುಚ್ಚಳಿಕೆ ಪತ್ರ ಬರೆದು ಕೊಟ್ಟಿದ್ದರಿಂದ ಸದಸ್ಯರನ್ನು ಬಿಡುಗಡೆ ಮಾಡಿದರು. 

ಆಗಿದ್ದೇನು..?: ಇಲ್ಲಿನ 57ನೇ ವಾರ್ಡ್‌ನ ವೀರಾಪುರ ಓಣಿಯ ಸರಕಾರಿ ಶಾಲೆ ಹಾಗೂ ರಸ್ತೆ ಒತ್ತುವರಿ ತೆರವುಗೊಳಿಸಿವಂತೆ ಒತ್ತಾಯಿಸಿ ಪಾಲಿಕೆ  ಸದಸ್ಯ ಶಿವಾನಂದ ಮುತ್ತಣ್ಣವರ ಬುಧವಾರ ಸಂಜೆ ಪಾಲಿಕೆ ಆಯುಕ್ತರ ಕಚೇರಿಗೆ ಬೀಗ ಹಾಕಿದ್ದರು. 

ಸರಕಾರಿ ಕೆಲಸಕ್ಕೆ ಅಡ್ಡಿ ಆರೋಪದಡಿ ಪಾಲಿಕೆ ಆಯುಕ್ತ ಸಿದ್ಧಲಿಂಗಯ್ಯ ಹಿರೇಮಠ ಉಪನಗರ ಠಾಣೆಯಲ್ಲಿ ಮುತ್ತಣ್ಣನವರ ಹಾಗೂ ಇತರೆ ಐವರ ಮೇಲೆ ದೂರು ದಾಖಲಿಸಿದ್ದರು. ಮುತ್ತಣ್ಣನವರನ್ನು ಪೊಲೀಸರು ವಿಚಾರಣೆಗೆಂದು ವಶಕ್ಕೆ ಪಡೆದರು. ಇದನ್ನು ಖಂಡಿಸಿ ಪಾಲಿಕೆ ಬಿಜೆಪಿ ಸದಸ್ಯರು ಹಾಗೂ ಮುಖಂಡರು ಪ್ರತಿಭಟನೆ ಆರಂಭಿಸಿದರು. 

ಬಿಜೆಪಿ ಸದಸ್ಯರ ಸಭೆ: ಸದಸ್ಯ ಶಿವಾನಂದ ಮುತ್ತಣ್ಣವರ ಅವರನ್ನು ಪೊಲೀಸರು ವಶಕ್ಕೆ ಪಡೆಯುತ್ತಿದ್ದಂತೆ ಮೇಯರ್‌ ಕಚೇರಿಯಲ್ಲಿ ವಿಪ ಸದಸ್ಯ ಪ್ರದೀಪ ಶೆಟ್ಟರ ನೇತೃತ್ವದಲ್ಲಿ ಸಭೆ ನಡೆಯಿತು. ನಂತರ ಪಾಲಿಕೆ ಆಯುಕ್ತರನ್ನು ಭೇಟಿ ಮಾಡಿದ ಬಿಜೆಪಿ ಮುಖಂಡರು ಶಿವಾನಂದ ಮುತ್ತಣ್ಣವರ ವಿರುದ್ಧ ನೀಡಿರುವ ದೂರು ವಾಪಸ್‌ ಪಡೆಯುವಂತೆ ಒತ್ತಾಯಿಸಿದರಾದರೂ ಆಯುಕ್ತರು ನಿರಾಕರಿಸಿದರು. 

ಪ್ರದೀಪ ಶೆಟ್ಟರ ಮಾತನಾಡಿ, ಪಾಲಿಕೆ ಆಯುಕ್ತರು ಸರಿಯಾಗಿ ಕೆಲಸ ಮಾಡುತ್ತಿಲ್ಲ. ಸರಕಾರಿ ಜಾಗ ಒತ್ತುವರಿ ತೆರವುಗೊಳಿಸುವಲ್ಲಿ ವಿಫ‌ಲರಾಗಿದ್ದಾರೆ. ಸರಕಾರಿ ಜಾಗ ಅತಿಕ್ರಮಣ ತೆರವು ಬಗ್ಗೆ ಹಲವು ಬಾರಿ ಸಾಮಾನ್ಯ ಸಭೆಯಲ್ಲಿ ಪ್ರಸ್ತಾಪವಾಗಿದೆ. ಕೋರ್ಟ್‌ ಆದೇಶವಿದ್ದರೂ ತೆರವು ಕಾರ್ಯ ಆಗುತ್ತಿಲ್ಲ ಎಂದು ಆರೋಪಿಸಿದರು.

ಈ ಸಂದರ್ಭದಲ್ಲಿ ಕೆಲ ಬಿಜೆಪಿಯವರು ಪಾಲಿಕೆ ಆಯುಕ್ತರನ್ನು ತರಾಟೆಗೆ ತೆಗೆದುಕೊಂಡರು. ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಕಾಂಗ್ರೆಸ್‌ ನಾಯಕರ ಒತ್ತಡಕ್ಕೆ ಮಣಿದು ತೆರವು ಕೈಗೊಳ್ಳದೆ, ಪ್ರಕರಣ ಹೈಕೋರ್ಟ್‌ನಲ್ಲಿದೆ ಎಂಬ ನೆಪ ಹೇಳುತ್ತಿದ್ದಾರೆಂದು ಕಿಡಿಕಾರಿದರು.

 ಇದಕ್ಕೆ ಪ್ರತಿಕ್ರಿಯಿಸಿದ ಪಾಲಿಕೆ ಆಯುಕ್ತ ಸಿದ್ಧಲಿಂಗಯ್ಯ ಹಿರೇಮಠ, ಯಾರ ಒತ್ತಡವೂ ಇಲ್ಲ. ಪ್ರಕರಣ ಹೈಕೋರ್ಟ್‌ನಲ್ಲಿರುವುದು ನಿಜ. ಕಾನೂನಿನ ಸಾಧಕ-ಬಾಧಕ ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು. ಈಗಾಗಲೇ ಕಟ್ಟಡ ತೆರವಿಗೆ ಆದೇಶಿಸಲಾಗಿದ್ದು, ಗಣೇಶ ಹಬ್ಬ ಹಾಗೂ ಬಕ್ರೀದ್‌ ಇದ್ದ ಕಾರಣ ಪೊಲೀಸ್‌ ಭದ್ರತೆ ಸಾಧ್ಯವಾಗದ್ದರಿಂದ ಕೆಲ ದಿನ ಮುಂದೂಡಲಾಗಿತ್ತಷ್ಟೆ ಎಂದು ಸ್ಪಷ್ಟಪಡಿಸಿದರು.  

ಮತ್ತೂಮ್ಮೆ ಪ್ರತಿಭಟನೆ ಸಜ್ಜು: ಅತಿಕ್ರಮಣ ತೆರವುಗೊಳಿಸದ ಹೊರತು ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ಸಂಜೆ ವೇಳೆಗೆ ಶಾಸಕ ಅರವಿಂದ ಬೆಲ್ಲದ ನೇತೃತ್ವದಲ್ಲಿ ಬಿಜೆಪಿಯವರು ಹೋರಾಟ ಮುಂದುವರಿಕೆಗೆ ಮುಂದಾದರು. ಪಾಲಿಕೆ ಕಚೇರಿಗೆ ಆಗಮಿಸಿದ ಶಾಸಕ ಬೆಲ್ಲದ, ಆಯುಕ್ತರೊಂದಿಗೆ ಚರ್ಚಿಸಿ ಪ್ರಕರಣದ ಮಾಹಿತಿ ಪಡೆದರು.

ಈ ಸಂದರ್ಭದಲ್ಲಿ ಆಯುಕ್ತರು ಕಾನೂನು ಚೌಕಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕಾದ ಹಿನ್ನೆಲೆಯಲ್ಲಿ ವಿಳಂಬವಾಗಿದೆ. ಸೆ. 8ರಂದು ಬೆಳಗ್ಗೆ ತೆರವು ಕಾರ್ಯಾಚರಣೆ ನಡೆಯಲಿದೆ ಎಂದು ಖಚಿತ ಭರವಸೆ ನೀಡಿದ ಹಿನ್ನೆಲೆಯಲ್ಲಿ ಬಿಜೆಪಿಯವರು ಹೋರಾಟ ಹಿಂಪಡೆದರು. ಇದಕ್ಕೂ ಮೊದಲು ಪಾಲಿಕೆ ಆಯುಕ್ತರ ಕಚೇರಿಗೆ ಹಾಕಿದ್ದ ಕೀಲಿಯನ್ನು ಉಪನಗರ ಠಾಣೆ ಪೊಲೀಸರ ಸಮ್ಮುಖದಲ್ಲಿ ಒಡೆದು ತೆಗೆಯಲಾಯಿತು.  

ಟಾಪ್ ನ್ಯೂಸ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Joshi

ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

Battery theft at Dharwad District Collector’s Office

Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ

ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ

ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ

13-

Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ

AV-Bellad

Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.