ನ್ಯಾಯಕ್ಕೆ ರಾಹುಲ್ ಕರೆತರುವೆ: ಡಿಕೆಶಿ


Team Udayavani, May 18, 2019, 10:03 AM IST

hubali-tdy-3..

ಹುಬ್ಬಳ್ಳಿ: ಕುಂದಗೋಳದ ಸಂಶಿ ಜಿಪಂ ಕ್ಷೇತ್ರ ವ್ಯಾಪ್ತಿಯ ಬಿಜೆಪಿ ಯುವ ಮುಖಂಡರು ಸಚಿವ ಡಿ.ಕೆ. ಶಿವಕುಮಾರ ಸಮ್ಮುಖದಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಗೊಂಡರು.

ಹುಬ್ಬಳ್ಳಿ: ರಾಹುಲ್ ಗಾಂಧಿಯವರು ಘೋಷಿಸಿರುವ ನ್ಯಾಯ ಯೋಜನೆಯನ್ನು ರಾಜ್ಯದಲ್ಲಿ ಕುಂದಗೋಳ ಕ್ಷೇತ್ರದಿಂದ ಆರಂಭಿಸುತ್ತೇವೆ. ಸ್ವತಃ ರಾಹುಲ್ ಗಾಂಧಿಯವರನ್ನು ಈ ಕ್ಷೇತ್ರಕ್ಕೆ ಕರೆದುಕೊಂಡು ಬಂದು ಅನುಷ್ಠಾನ ಮಾಡುತ್ತೇವೆ ಎಂದು ಸಚಿವ ಡಿ.ಕೆ. ಶಿವಕುಮಾರ ಹೇಳಿದರು.

ಕುಂದಗೋಳದ ಗಾಂಧಿ ವೃತ್ತದಲ್ಲಿ ನಡೆದ ಮೈತ್ರಿ ಅಭ್ಯರ್ಥಿ ಪರ ಪ್ರಚಾರಾರ್ಥ ಸಮಾವೇಶದಲ್ಲಿ ಮಾತನಾಡಿದ ಅವರು, ಕಡುಬಡವರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವ ಈ ಯೋಜನೆಯನ್ನು ನಿಮ್ಮಿಂದ ಆರಂಭಿಸುತ್ತೇವೆ. ಕ್ಷೇತ್ರದ ಅಭಿವೃದ್ಧಿಗೆ ಮೈತ್ರಿ ಸರಕಾರ ಇರುತ್ತದೆ. ಇಲ್ಲಿನ ಪ್ರಮುಖ ಬೇಡಿಕೆಯಾದ ಕುಡಿಯುವ ನೀರು, ಮೂಲ ಸೌಲಭ್ಯ ಸೇರಿದಂತೆ ಜ್ವಲಂತ ಸಮಸ್ಯೆಗಳಿಗೆ ಮೈತ್ರಿ ಸರಕಾರ ಪರಿಹಾರ ಕಲ್ಪಿಸಲಿದೆ. ಜೆಡಿಎಸ್‌ ಹಾಗೂ ಕಾಂಗ್ರೆಸ್‌ ಒಟ್ಟಾಗಿ ನಿಮ್ಮ ಸೇವೆ ಮಾಡುವುದಾಗಿ ಹೇಳಿದರು.

ಕ್ಷೇತ್ರದ ಎಲ್ಲ ಸಮಾಜದ ಮುಖಂಡರ ಸಭೆ ಮಾಡಿದ್ದು, ಕುಸುಮಾವತಿ ಶಿವಳ್ಳಿ ಅವರಿಗೆ ಬೆಂಬಲ ನೀಡುವುದಾಗಿ ಭರವಸೆ ನೀಡಿದ್ದಾರೆ. ಈ ಕ್ಷೇತ್ರದಲ್ಲಿ ಮಣ್ಣಿನ ಮನೆಗಳ ಬದಲಿಗೆ ರಾಜೀವ ಗಾಂಧಿ ಆವಾಸ್‌ ಯೋಜನೆಯಲ್ಲಿ ಮನೆ ನಿರ್ಮಿಸಿಕೊಡಲಾಗುವುದು. ಈ ಕ್ಷೇತ್ರದ ಜನರ ಅಭಿವೃದ್ಧಿಗೆ ಮೈತ್ರಿ ಸರಕಾರ ಶ್ರಮಿಸಲಿದೆ. ಸುಮಾರು 30 ಸಾವಿರ ಮತಗಳಿಂದ ಕುಸುಮಾವತಿ ಅವರನ್ನು ಆಯ್ಕೆ ಮಾಡುವ ಮೂಲಕ ಸಿ.ಎಸ್‌. ಶಿವಳ್ಳಿ ಅವರ ಋಣ ತೀರಿಸಬೇಕು ಎಂದು ಮನವಿ ಮಾಡಿದರು.

ಹುಬ್ಬಳ್ಳಿಯತ್ತ ಮೈತ್ರಿ ನಾಯಕರ ದಂಡು: ಕ್ಷೇತ್ರದ ಮತದಾರರಲ್ಲದವರು ಶುಕ್ರವಾರ ಸಂಜೆ 6 ಗಂಟೆ ನಂತರ ಕುಂದಗೋಳ ಕ್ಷೇತ್ರದಲ್ಲಿ ಇರುವಂತಿಲ್ಲ ಎನ್ನುವ ಚುನಾವಣಾ ಆಯೋಗದ ಸೂಚನೆಯಂತೆ ಮೈತ್ರಿ ಅಭ್ಯರ್ಥಿ ಪರ ಪ್ರಚಾರ ಸಭೆ ಮುಗಿಯುತ್ತಿದ್ದಂತೆ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ನಾಯಕರು ಹುಬ್ಬಳ್ಳಿಯತ್ತ ಪ್ರಯಾಣ ಬೆಳೆಸಿದರು. ಬಹಿರಂಗ ಪ್ರಚಾರ ಮುಗಿಸಲು ಇನ್ನು 10 ನಿಮಿಷ ಇರುವಾಗಲೇ ಸಚಿವ ಡಿ.ಕೆ. ಶಿವಕುಮಾರ ತಮ್ಮ ಭಾಷಣ ಮೊಟಕುಗೊಳಿಸಿದರು. ಅವರ ಕಾರು ಜನರ ಮಧ್ಯೆ ಸಿಲುಕಿದ ಪರಿಣಾಮ ಸಮಯ ಮೀರುತ್ತಿದ್ದರಿಂದ ಹುಬ್ಬಳ್ಳಿಯತ್ತ ಹೊರಟಿದ್ದ ಸಿದ್ದರಾಮಯ್ಯ ಅವರ ಕಾರಿನಲ್ಲಿ ಹೊರಟರು.

ಮನೆ ಮನೆ ಪ್ರಚಾರ ಆರಂಭ: ಕಳೆದ 15 ದಿನಗಳಿಂದ ಅಬ್ಬರದ ಪ್ರಚಾರಕ್ಕೆ ಸಾಕ್ಷಿಯಾಗಿದ್ದ ಕುಂದಗೋಳ ಕ್ಷೇತ್ರ ಸಂಜೆ 6 ಗಂಟೆ ನಂತರ ಶಾಂತವಾಗಿದೆ. ನಾಯಕರ ವಾಹನಗಳ ಭರಾಟೆ, ಕಾರ್ಯಕರ್ತರ ಕೂಗು, ಧ್ವನಿವರ್ಧಕ ಯಾವುದೂ ಇರಲಿಲ್ಲ. ಸಂಜೆ 6 ಗಂಟೆಯ ನಂತರ ಕಾಂಗ್ರೆಸ್‌ ಕಾರ್ಯಕರ್ತರು, ಸ್ಥಳೀಯ ನಾಯಕರು ಮನೆ ಮನೆ ಪ್ರಚಾರ ನಡೆಸುತ್ತಿರುವುದು ಕಂಡುಬಂತು.

ಕಳಸಾ-ಬಂಡೂರಿ ವಿಚಾರದಲ್ಲಿ ಅಧಿಸೂಚನೆ ಹೊರಡಿಸದೆ ಕೇಂದ್ರ ಸರಕಾರ ಅನ್ಯಾಯ ಮಾಡಿದ್ದು, ಈ ಭಾಗದಲ್ಲಿ ಮತಯಾಚನೆಗೆ ಬಿಜೆಪಿಯವರಿಗೆ ನಾಚಿಕೆಯಾಗಬೇಕು. ಅಧಿಸೂಚನೆ ಹೊರಡಿಸಿದರೆ, ತಕ್ಷಣಕ್ಕೆ ಟೆಂಡರ್‌ ಕರೆಯಲು ತಾವು ಬದ್ಧ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಮಹದಾಯಿ ನ್ಯಾಯಾಧೀಕರಣ ತೀರ್ಪು ನೀರು ಹಂಚಿಕೆ ಮಾಡಿದೆ. ಹಂಚಿಕೆಯಾದ ನೀರಿನ ಬಳಕೆಗೆ ಅಧಿಸೂಚನೆ ಹೊರಡಿಸಲು ಯಾವುದೇ ಅಡ್ಡಿ ಇಲ್ಲ. ಆದರೆ, ಕೇಂದ್ರ ಸರಕಾರ ಅಧಿಸೂಚನೆ ಹೊರಡಿಸದೆ ಈ ಭಾಗಕ್ಕೆ ಅನ್ಯಾಯ ಮಾಡಿದೆ ಎಂದರು.

ನ್ಯಾಯಾಧೀಕರಣದ ತೀರ್ಪು ಕುರಿತಾಗಿ ನಮ್ಮ ಆಕ್ಷೇಪ ಸಲ್ಲಿಕೆಗೂ ಅಧಿಸೂಚನೆ ಹೊರಡಿಸುವುದಕ್ಕೂ ಸಂಬಂಧವಿಲ್ಲ. ಆಕ್ಷೇಪ ಸಲ್ಲಿಸಿದರೂ ಅಧಿಸೂಚನೆ ಹೊರಡಿಸಬಹುದಾಗಿದೆ. ರಾಜ್ಯ ಸರಕಾರ ಆಕ್ಷೇಪ ಸಲ್ಲಿಸಿದ್ದು, ಅಧಿಸೂಚನೆ ಹೊರಡಿಸಲು ಬರುವುದಿಲ್ಲ ಎಂದು ಬಿಜೆಪಿ ನಾಯಕರು ದಾರಿತಪ್ಪಿಸುವ ಯತ್ನ ಮಾಡುತ್ತಿದ್ದಾರೆ. ಅಧಿಸೂಚನೆ ಹೊರಡಿಸಲು ಏನು ಅಡ್ಡಿ ಇದೆ ಅವರು ಸ್ಪಷ್ಟಪಡಿಸಲಿ. ಜಲಸಂಪನ್ಮೂಲ ಸಚಿವನಾಗಿ ಅಗತ್ಯ ಮಾಹಿತಿಯೊಂದಿಗೆ ನಾನು ಮಾತನಾಡುತ್ತಿದ್ದೇನೆ ಎಂದು ಹೇಳಿದರು.

ಮಹದಾಯಿ ವಿಚಾರದಲ್ಲಿ ಮಧ್ಯಪ್ರವೇಶ ಹಾಗೂ ಸೌಹಾರ್ದ ಇತ್ಯರ್ಥಕ್ಕೆ ಪ್ರಧಾನಿ ಬಳಿ ನಿಯೋಗ ಹೋದರು ಪ್ರಯೋಜನವಾಗಲಿಲ್ಲ. ಇದೇ ಯಡಿಯೂರಪ್ಪ, ಜಗದೀಶ ಶೆಟ್ಟರ, ಪ್ರಹ್ಲಾದ ಜೋಶಿ ಯಾರೊಬ್ಬರು ಪ್ರಧಾನಿ ಮುಂದೆ ಬಾಯಿ ತರೆಯಲಿಲ್ಲ. ಇಲ್ಲಿ ಬಂದು ರಾಜ್ಯ ಸರಕಾರದ ಮೇಲೆ ಆರೋಪ ಹೊರಿಸುವ ಕೆಲಸ ಮಾಡುತ್ತಿದ್ದಾರೆ ಎಂದರು.

ಕೇಂದ್ರ ಸರಕಾರ ಅಧಿಸೂಚನೆ ಹೊರಡಿಸಿದರೆ ತಕ್ಷಣವೇ ಟೆಂಡರ್‌ ಕರೆದು ಕಾಮಗಾರಿ ಆರಂಭಿಸಲು ರಾಜ್ಯ ಸರಕಾರ ಸಿದ್ಧವಿದೆ ಎಂದರು.

ಪ್ರಧಾನಿ ಸ್ಪಷ್ಟಪಡಿಸಬೇಕು: ಗೋಡ್ಸೆಯನ್ನು ದೇಶಭಕ್ತ ಎಂದು ಕೆಲ ಬಿಜೆಪಿಯವರು ಕರೆದಿರುವುದು ಅತ್ಯಂತ ಅಪಾಯಕಾರಿಯಾಗಿದೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರು ಮೊದಲು ಸ್ಪಷ್ಟನೆ ನೀಡಬೇಕಾಗಿದೆ. ರಾಜೀವ್‌ಗಾಂಧಿ ಅವರ ಬಗ್ಗೆ ಪ್ರಧಾನಿ ಸೇರಿದಂತೆ ಬಿಜೆಪಿ ನಾಯಕರು ಭ್ರಷ್ಟಾಚಾರಿ, ಕೊಲೆಗಡುಕ ಎಂಬಂಥ ಹೇಳಿಕೆ ನೀಡುವುದು ನಾಚಿಕೆಗೇಡಿನ ಸಂಗತಿ. ಮೋದಿಯವರಿಗೆ ಸೋಲಿನ ಅರಿವಾಗಿ ಇಂತಹ ಹೇಳಿಕೆ ನೀಡಲು ಮುಂದಾಗಿದ್ದು, ಬಿಜೆಪಿಯವರ ಮನೋಸ್ಥಿತಿ, ಸಂಸ್ಕೃತಿ ಎಂತಹದ್ದೆಂಬುದು ವ್ಯಕ್ತವಾಗುತ್ತಿದೆ ಎಂದರು.

ಟಾಪ್ ನ್ಯೂಸ್

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Battery theft at Dharwad District Collector’s Office

Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ

ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ

ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ

13-

Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ

AV-Bellad

Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್‌

Hubli: ಕ್ರಿಮಿನಲ್‌ ಜತೆಯೇ ಪೊಲೀಸ್‌ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್‌ ಕಾರ್ಯಾಚರಣೆ

Hubli: ಕ್ರಿಮಿನಲ್‌ ಜತೆಯೇ ಪೊಲೀಸ್‌ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್‌ ಕಾರ್ಯಾಚರಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

kejriwal-2

Delhi; ಸ್ತ್ರೀಯರಿಗೆ ಸಹಾಯಧನ: ಮನೆಯಲ್ಲೇ ನೋಂದಣಿ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

1-kuu

ಕಾರ್ಗಿಲ್‌ ದಾಳಿ ಮಾಹಿತಿ ಕೊಟ್ಟ ಕುರಿಗಾಹಿ ಸಾವು: ಸೇನೆ ನಮನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.