ಶಾಸಕರ ಮನೆ ನಿರ್ಮಾಣ ವೇಳೆ ಅವಘಡ


Team Udayavani, Mar 25, 2017, 1:16 PM IST

hub6.jpg

ಹುಬ್ಬಳ್ಳಿ: ನವಲಗುಂದ ಶಾಸಕ ಎನ್‌. ಎಚ್‌. ಕೋನರಡ್ಡಿ ಅವರ ಮನೆ ನಿರ್ಮಾಣದ ಕಾಮಗಾರಿಯಲ್ಲಿ ವಿದ್ಯುತ್‌ ಅವಘಡ ಸಂಭವಿಸಿ ಗಾಯಗೊಂಡಿರುವ ಹಸನಸಾಬ್‌ ಮಕಾಂದಾರ ಕುಟುಂಬಕ್ಕೆ ಶಾಸಕರು ಆಸ್ಪತ್ರೆಯ ಬಿಲ್‌ ಪಾವತಿಸದೆ ವಂಚನೆ ಮಾಡಿದ್ದಾರೆ ಎಂದು ಮಕಾಂದಾರ ಕುಟುಂಬ ಆರೋಪಿಸಿದೆ. 

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹಸನಸಾಬ್‌ ಹಾಗೂ ಅವರ ತಾಯಿ ರಬೀಜಾ ಬೇಗಂ ಶಾಸಕರ ವಿರುದ್ಧ ಆರೋಪ ಮಾಡಿದರು. 2016 ಜುಲೈ 24ರಂದು ನವಲಗುಂದದಲ್ಲಿ ಶಾಸಕರ ಮನೆ ನಿರ್ಮಾಣದ ಸಂದರ್ಭದಲ್ಲಿ ಶಾಸಕರ ಮನೆ ಮೇಲ್ಭಾಗದಲ್ಲಿ ವಿದ್ಯುತ್‌ ವೈಯರ್‌ಗಳು ಹಾದು ಹೋಗಿದ್ದು ಅದಕ್ಕೆ ಪ್ಲಾಸ್ಟಿಕ್‌ ಪೈಪ್‌ ಹಾಕಿಸುವಂತೆ ಶಾಸಕ ಕೋನರಡ್ಡಿ ಹಾಗೂ ಅವರ ಅಳಿಯ ರಾಘವೇಂದ್ರ ಅವರಿಗೆ ಪದೇ-ಪದೇ ಹೇಳಲಾಗಿತ್ತು.

ಆದರೆ ಅವರು ನಿರ್ಲಕ್ಷ್ಯ ಮಾಡಿದ್ದರಿಂದ ಕಾರ್ಮಿಕರಿಗೆ ವಿದ್ಯುತ್‌ ಅವಘಡ ಸಂಭವಿಸಿದ್ದು ಅದರಲ್ಲಿ ಹಸನಸಾಬ್‌ ಮತ್ತು ನಾಶಿಪುಡಿ ಎಂಬವರು ಗಾಯಗೊಂಡಿದ್ದರು. ಅದರಲ್ಲಿ ಹಸನಸಾಬ್‌ ಅವರಿಗೆ ತೀವ್ರವಾದ ಗಾಯಗಳಾಗಿದ್ದವು. ಹಸನಸಾಬ್‌ ಮಕಾಂದಾರ(19) ಬಾರ್‌ಬೈಡಿಂಗ್‌ ಕಾಮಗಾರಿ ಮಾಡುವ ಸಂದರ್ಭದಲ್ಲಿ ಅವಘಡ ಸಂಭವಿಸಿದ್ದು ಅವರನ್ನು ಕಿಮ್ಸ್‌ಗೆ ದಾಖಲಿಸಲಾಯಿತು.

ಕಿಮ್ಸ್‌ನಲ್ಲಿ ಸರಿಯಾದ ಚಿಕಿತ್ಸೆ ಸಿಗದೇ ಹಸನಸಾಬ್‌ ಅವರ ಕಾಲನ್ನು ತೆಗೆಯಬೇಕು ಎಂದು ವೈದ್ಯರು ಹೇಳಿದಾಗ ಆತಂಕಗೊಂಡ ಕುಟುಂಬದವರು ಬೇಡ ಎಂದ ಕುಟುಂಬವರು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದರು. ಆಸ್ಪತ್ರೆಗೆ ದಾಖಲಿಸಿದ ನಂತರ  ಶಾಸಕ ಎನ್‌.ಎಚ್‌. ಕೋನರಡ್ಡಿ ಭೇಟಿ ನೀಡಿ ಯಾವುದಕ್ಕೂ ಭಯಪಡ ಬೇಡಿ. ಆಸ್ಪತ್ರೆಯ ಬಿಲ್‌ ಪಾವತಿಸುವ ಭರವಸೆ ನೀಡಿದ್ದರು. ಆದರೆ ಇದುವರೆಗೂ ಆಸ್ಪತ್ರೆಯ ಬಿಲ್‌ ನೀಡಿಲ್ಲ.

ಈ ಕುರಿತು ಶಾಸಕರನ್ನು ವಿಚಾರಿಸಲು ಕಚೇರಿಗೆ ಹೋದರೆ ಶಾಸಕರು ಸಿಗುತ್ತಿಲ್ಲ. ಇತ್ತ ಆಸ್ಪತ್ರೆಯ ಬಿಲ್‌ ಪಾವತಿಸದ ಕಾರಣ ಆಸ್ಪತ್ರೆಯವರು ನೋಟಿಸ್‌ ಜಾರಿ ಮಾಡಿದ್ದು, ಕೂಡಲೇ ಹಣ ಪಾವತಿಸದಿದ್ದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ. ಹಸನಸಾಬ್‌ ಕುಟುಂಬಕ್ಕೆ ಆಧಾರಸ್ತಂಭವಾಗಿದ್ದು, ಅವನ ದುಡಿಮೆಯೇ ಇಲ್ಲವಾಗಿದೆ. ಇನ್ನೊಂದು ಕಡೆ ಶಾಸಕರು ನೀಡಿದ ಭರವಸೆಯನ್ನು ಈಡೇರಿಸುತ್ತಿಲ್ಲ ಎಂದು ಅವರ ತಾಯಿ ಅಳಲು ತೋಡಿಕೊಂಡರು. 

ಟಾಪ್ ನ್ಯೂಸ್

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

vijayapura-Police

Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು

1veer

IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್‌ ಹೂಡಾ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ

Hubli: Bankrupt govt cutting BPL card: Prahlada Joshi

Hubli: ದಿವಾಳಿಯಾದ ಸರ್ಕಾರ ಬಿಪಿಎಲ್‌ ಕಾರ್ಡ್‌ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Prajwal Revanna

Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.