ಮಾಡಿದರೆ ಯೋಗ ಓಡುವುದು ರೋಗ
Team Udayavani, Jun 22, 2018, 5:32 PM IST
ಕನಕಗಿರಿ: ಚೈತನ್ಯ ಲವಲವಿಕೆಯಿಂದ ಪ್ರತಿಯೊಬ್ಬ ಮನುಷ್ಯ ಬದುಕಲು ಜೀವನದಲ್ಲಿ ಯೋಗ ಅತ್ಯವಶ್ಯಕತೆ ಇದೆ.
ಯೋಗ ಮಾಡಿದರೆ ರೋಗವು ಓಡಿ ಹೋಗುವುದು ಎಂದು ಶಾಸಕ ಬಸವರಾಜ ದಢೇಸೂಗೂರು ಹೇಳಿದರು.
ಪಟ್ಟಣದ ಎಪಿಎಂಸಿ ಆವರಣದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ದಿ ಆರ್ಟ್ ಆಫ್ ಲಿವಿಂಗ್
ಹಾಗೂ ಸುವರ್ಣಗಿರಿ ಯೋಗ ಟ್ರಸ್ಟ್ ವತಿಯಿಂದ ಹಮ್ಮಿಕೊಂಡಿದ್ದ ಯೋಗ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಅನಾದಿ ಕಾಲದಿಂದಲೂ ಋಷಿ ಮುನಿಗಳು ಯೋಗ ಅಭ್ಯಾಸವನ್ನು ಮಾಡುತ್ತಿದ್ದರು. ಕಳೆದ ನಾಲ್ಕು ವರ್ಷದಿಂದ
ಪ್ರಧಾನಿ ನರೇಂದ್ರ ಮೊದಿಯವರು ಇಡೀ ವಿಶ್ವವೇ ಯೋಗ ದಿನಾಚರಣೆಯನ್ನು ಮಾಡುವ ಮೂಲಕ ವಿಶ್ವಕ್ಕೆ ಭಾರತದ ಕೊಡೆಗೆಯನ್ನು ನೀಡಿದ್ದಾರೆ. ಪಟ್ಟಣದಲ್ಲಿ ಯೋಗ ಶಿಬಿರ ಕಟ್ಟಡಕ್ಕೆ ಶಾಸಕರ ಅನುದಾನದಲ್ಲಿ ಹಣ ನೀಡಲಾಗುವುದು, ಪ್ರತಿ ನಿತ್ಯ ಒಂದು ಗಂಟೆ ಕಾಲ ಯೋಗಕ್ಕೆ ಸಮಯವನ್ನು ಮೀಸಲಿಡುವುದರಿಂದ ಆರೋಗ್ಯದ ಕಡೆ ಗಮನ ಹರಿಸಿದಂತಾಗುತ್ತದೆ. ನಾನು ಪ್ರತಿ ನಿತ್ಯ ಯೋಗ ಮಾಡುವುದನ್ನು ರೂಢಿ ಮಾಡಿಕೊಳ್ಳುತ್ತೇನೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಸುವರ್ಣಗಿರಿ ಯೋಗ ಟ್ರಸ್ಟ ಅಧ್ಯಕ್ಷ ವಾಗೇಶ ಹಿರೇಮಠ, ಪ.ಪಂ ಅಧ್ಯಕ್ಷ ರವಿ ಭಜಂತ್ರಿ, ಎಪಿಎಂಸಿ ಸದಸ್ಯ ದೇವಪ್ಪ ತೋಳದ್, ಪಪಂ ಮುಖ್ಯಾಧಿಕಾರಿ ಶ್ರೀಶೈಲಗೌಡ, ವ್ಯಾಪಾರ ಸಮೀತಿ ಅಧ್ಯಕ್ಷ ಮಹಾಂತೇಶ ಸಜ್ಜನ್, ಯೋಗ ಗುರು ಶೇಖರಯ್ಯ ಸ್ವಾಮಿ, ಪ್ರಮುಖರಾದ ಪ್ರಕಾಶ ಹಾದಿಮನಿ, ಅನಂತಪ್ಪ ದಾಯಿಪುಲ್ಲೆ, ಶಿವಾನಂದ ಬೆಲ್ಲದ್, ಪರಸಪ್ಪ ಹೊರಪೆಟೆ, ಕೃಷ್ಣವೇಣಿ ಬೊಂದಾಡೆ ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜ. 15ರಿಂದ 26ರವರೆಗೆ ಮಹಾಮಸ್ತಕಾಭಿಷೇಕ
Hubli; ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
Negotiation: ಹೆಬ್ಬಾಳ್ಕರ್-ಸಿ.ಟಿ.ರವಿ ಪ್ರಕರಣ ಸಂಧಾನಕ್ಕೆ ಸಿದ್ಧ: ಬಸವರಾಜ ಹೊರಟ್ಟಿ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.