ಅಕ್ರಮ ಪ್ಲಾಟ್ ದಂಧೆ; ಬಡವರ ರಕ್ಷಣೆ ಅಗತ್ಯ
ಕಡಿಮೆ ದರಕ್ಕೆ ಭೂಮಿ ಮಾರಾಟ ಮಾಡುವ ವಂಚಕರಿಂದ ಜಾಗೃತರಾಗಿರಲು ಸೂಚನೆ
Team Udayavani, Jun 24, 2019, 8:49 AM IST
ಹುಬ್ಬಳ್ಳಿ: ಗೋಕುಲ ರಸ್ತೆಯ ಲಿಡ್ಕರ್ ಕಾಲೋನಿಯಲ್ಲಿ ಸಾಂಸ್ಕೃತಿಕ ಭವನ ಕಾಮಗಾರಿಗೆ ಶಾಸಕ ಜಗದೀಶ ಶೆಟ್ಟರ ಭೂಮಿಪೂಜೆ ನೆರವೇರಿಸಿದರು.
ಹುಬ್ಬಳ್ಳಿ: ನಗರದಲ್ಲಿ ಕೆಲವರು ಅಕ್ರಮವಾಗಿ ಪ್ಲಾಟ್‌ಗಳನ್ನು ಮಾರಾಟ ಮಾಡುತ್ತಿರುವುದರಿಂದ ಬಡವರು ತೊಂದರೆಗೀಡಾಗುವಂತಾಗಿದೆ. ಜನಪ್ರತಿನಿಧಿಗಳಿಂದ ಬಡವರಿಗೆ ರಕ್ಷಣೆ ನೀಡುವ ಕಾರ್ಯ ಆಗಬೇಕಿದೆ ಎಂದು ಶಾಸಕ ಜಗದೀಶ ಶೆಟ್ಟರ ಹೇಳಿದರು.
ಗೋಕುಲ ರಸ್ತೆ ಕೈಗಾರಿಕಾ ವಸಾಹತು ಪ್ರದೇಶದ ಲಿಡ್ಕರ್ ಕಾಲೋನಿಯಲ್ಲಿ ಸಮಾಜ ಕಲ್ಯಾಣ ಇಲಾಖೆ ಹಾಗೂ ಡಾ| ಬಾಬು ಜಗಜೀವನರಾಮ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದಿಂದ ಅಂದಾಜು 1.56 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ನೂತನ ಸಾಂಸ್ಕೃತಿಕ ಭವನ ಕಾಮಗಾರಿಗೆ ರವಿವಾರ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.
ನಗರದಲ್ಲಿ ಕೆಲವರು ಯಾರದೋ ಜಮೀನನ್ನು ತಮ್ಮದೆಂದು ಮೊಕ್ತಿಯಾರ ಪಡೆದು, ಬಡವರು ಹಾಗೂ ಮಧ್ಯಮ ವರ್ಗದರಿಗೆ ಕಡಿಮೆ ದರಕ್ಕೆ ಕೊಡುವುದಾಗಿ ನಂಬಿಸಿ 10ರೂ. ಬಾಂಡ್ ಪೇಪರ್‌ನಲ್ಲಿ ಮಾರಾಟ ಮಾಡಿ ವಂಚಿಸುವ ದಂಧೆ ನಡೆಯುತ್ತಿದೆ. ಇವರನ್ನು ನಂಬಿ ಲಕ್ಷಾಂತರ ರೂ. ಸಾಲ-ಸೋಲ ಮಾಡಿ ಮನೆ ಕಟ್ಟಿಸಿ 20-30 ವರ್ಷ ಅಲ್ಲಿ ವಾಸಿಸುತ್ತಿರುತ್ತಾರೆ. ಕೊನೆಗೆ ಜಾಗದ ಮಾಲೀಕರು ಕೋರ್ಟ್ ಮೊರೆ ಹೋಗಿ ತಮ್ಮ ಜಮೀನು ಪಡೆಯುತ್ತಿದ್ದಾರೆ. ಇದರಿಂದ ಬಡವರು ಬೀದಿಗೆ ಬೀಳುವಂತಾಗಿದೆ. ಸರಕಾರದಿಂದ ಬಡವರು, ಮಧ್ಯಮ ವರ್ಗದವರಿಗೆ ವಸತಿ ನಿರ್ಮಾಣ ಮಾಡಿಕೊಟ್ಟರೆ ಸಹಕಾರಿಯಾಗುತ್ತದೆ. ಬಡವರು ಕಡಿಮೆ ದರಕ್ಕೆ ಭೂಮಿ ಮಾರಾಟ ಮಾಡುವ ವಂಚಕರಿಂದ ಜಾಗೃತರಾಗಿರಬೇಕು ಎಂದರು.
ಲಿಡ್ಕರ್ ಕಾಲೋನಿಯಲ್ಲಿ ನಿರ್ಮಿಸಲಾಗುತ್ತಿರುವ ಸಮುದಾಯ ಭವನವನ್ನು ನಿಗದಿತ 9 ತಿಂಗಳೊಳಗೆ ಗುಣಮಟ್ಟದಲ್ಲಿ ನಿರ್ಮಿಸಿಕೊಡಬೇಕು. ಕಾಲೋನಿಯ ನಿವಾಸಿಗಳಿಗೆ ಆದಷ್ಟು ಬೇಗ ಹಕ್ಕುಪತ್ರ ವಿತರಣೆ ಮಾಡಬೇಕು ಎಂದರು.
ಲಿಡ್ಕರ್ ಅಧ್ಯಕ್ಷರಾದ ಶಾಸಕ ಪ್ರಸಾದ ಅಬ್ಬಯ್ಯ ಮಾತನಾಡಿ, ಲಿಡ್ಕರ್ ಕಾಲೋನಿಯಲ್ಲಿ ಮನೆಗಳನ್ನು ಕಟ್ಟುವ ಉದ್ದೇಶವಿತ್ತು. ಆದರೆ ಜಾಗ ಕಡಿಮೆ ಇದೆ. ಚರ್ಮೋದ್ಯೋಮದಲ್ಲಿರುವ ಜನರಿಗೆ ಅಗತ್ಯ ಮೂಲೌಕರ್ಯ ಒದಗಿಸಲು ಹಾಗೂ ಅವರ ಉತ್ಪನ್ನಗಳಿಗೆ ಮಾರುಕಟ್ಟೆ ಕಲ್ಪಿಸಲು ಚಿಂತನೆ ನಡೆಸಲಾಗಿದೆ ಎಂದು ಹೇಳಿದರು.
ಚರ್ಮ ಉತ್ಪನ್ನಗಳಿಗೆ ಹೊಸ ವಿನ್ಯಾಸ, ಬ್ರ್ಯಾಂಡಿಂಗ್ ಮಾಡಿ ಲಿಡ್ಕರ್ ಮಳಿಗೆಗಳಲ್ಲಿ ಮಾರಾಟ ಮಾಡಲಾಗುವುದು. ಚರ್ಮಕಾರರು ಮಧ್ಯವರ್ತಿಗಳ ಆಮಿಷಗಳಿಗೆ ಒಳಗಾಗಬಾರದು. ಮಧ್ಯವರ್ತಿಗಳಿಗೆ ಕಡಿವಾಣ ಹಾಕಲಾಗುವುದು. ಲಿಡ್ಕರ್ ಕಾಲೋನಿಯಲ್ಲಿ ವಸತಿ ಸಮುಚ್ಛಯ ನಿರ್ಮಿಸಲು ಯೋಜಿಸಲಾಗಿದೆ ಎಂದು ತಿಳಿಸಿದರು.
ಪಾಲಿಕೆ ಮಾಜಿ ಸದಸ್ಯ ಮಹೇಶ ಬುರ್ಲಿ, ಮಾಜಿ ಮಹಾಪೌರ ವೆಂಕಟೇಶ ಮೇಸ್ತ್ರಿ, ಸದಾನಂದ ತೇರದಾಳ, ಗುರುನಾಥ ಉಳ್ಳಿಕಾಶಿ ಮೊದಲಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Alnavar: ಟಿಟಿ- ಕ್ಯಾಂಟರ್ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.