ಮುಂದುವರಿದ ಒತ್ತುವರಿ ತೆರವು ಕಾರ್ಯಾಚರಣೆ
Team Udayavani, Mar 17, 2021, 3:16 PM IST
ಹುಬ್ಬಳ್ಳಿ: ಮಾರುಕಟ್ಟೆ ಪ್ರದೇಶದ ಒತ್ತುವರಿ ತೆರವಿಗೆ ಜಿಲ್ಲಾಡಳಿತ ಹಾಗೂ ಮಹಾನಗರ ಪಾಲಿಕೆ ಮುಂದಾಗಿದ್ದು, ಮಂಗಳವಾರವೂ ಪಾಲಿಕೆ ಜೆಸಿಬಿಗಳುಮಾರುಕಟ್ಟೆ ಪ್ರದೇಶಗಳಲ್ಲಿ ಸದ್ದು ಮಾಡಿವೆ.
ಕಳೆದ ಎರಡು ದಿನಗಳ ಹಿಂದೆ ತೆರವು ಕಾರ್ಯಾಚರಣೆ ಮೂಲಕ ಬಿಸಿ ಮುಟ್ಟಿಸಿದ್ದ ಜಿಲ್ಲಾಧಿಕಾರಿ ನಿತೇಶ ಪಾಟೀಲ ಮಂಗಳವಾರವೂ ತೆರವು ಕಾರ್ಯಾಚರಣೆ ಮೂಲಕ ರಸ್ತೆ ಹಾಗೂ ಪಾದಚಾರಿ ಮಾರ್ಗಗಳನ್ನು ಒತ್ತುವರಿಮಾಡಿಕೊಂಡಿದ್ದ ವ್ಯಾಪಾರಿಗಳಿಗೆ ಬಿಸಿ ಮುಟ್ಟಿಸಿದರು.ಸಂಜೆ 5 ಗಂಟೆಗೆ ಆರಂಭವಾದ ಕಾರ್ಯಾಚರಣೆ ರಾತ್ರಿ 8ಗಂಟೆವರೆಗೂ ನಡೆಯಿತು. ಸುಮಾರು ಮೂರು ಕಿಮೀದೂರದವರೆಗೂ ತೆರವು ಕಾರ್ಯಾಚರಣೆ ನಡೆಯಿತು.
ಅಂಗಡಿಗಳ ಮುಂದೆ ಕಟ್ಟಿದ್ದ ಕಟ್ಟಡ, ಮೆಟ್ಟಿಲುಗಳನ್ನು ಜೆಸಿಬಿ ಮೂಲಕ ಒಡೆದು ತೆಗೆಯಲಾಯಿತು. ಇನ್ನೂ ಪಾದಚಾರಿ ಮಾರ್ಗಗಳ ಮೇಲೆ ಇಟ್ಟಿದ್ದ ಡಬ್ಬಾ ಅಂಗಡಿಗಳನ್ನು ಜಪ್ತು ಮಾಡಲಾಯಿತು. ಜನರ ಓಡಾಟಕ್ಕೆ ತೊಂದರೆಯಾಗುವಂತೆ ಮಾರಾಟ ಮಾಡುತ್ತಿದ್ದ ವಸ್ತುಗಳನ್ನು ಮುಲಾಜಿಲ್ಲದೆ ಪಾಲಿಕೆ ಟ್ರ್ಯಾಕ್ಟರ್‌ಗಳಲ್ಲಿ ತುಂಬಲಾಯಿತು.
ಮುನ್ನೆಚ್ಚರಿಕಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ನಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲಾಯಿತು. ಪಾಲಿಕೆ ಆಯುಕ್ತ ಡಾ| ಸುರೇಶ ಇಟ್ನಾಳ, ಡಿಸಿಪಿ ಆರ್.ಬಿ. ಬಸರಗಿ, ತಹಶೀಲ್ದಾರ್ ಶಶೀಧರ ಮಾಡ್ಯಾಳ, ನಗರ ಭೂ ಮಾಪನ ಅಧಿಕಾರಿಗಳು, ಕಂದಾಯ, ಪಾಲಿಕೆ ಅಧಿಕಾರಿಗಳು, ಸಿಬ್ಬಂದಿ ಇದ್ದರು.
ಜಿಲ್ಲಾಧಿಕಾರಿ ಖಡಕ್ ವಾರ್ನಿಂಗ್ :
ಬೀದಿ ವ್ಯಾಪಾರಿಗಳಾಗಿದ್ದು, ಮಾನವೀಯತೆ ದೃಷ್ಟಿಯಿಂದ ಬಿಡುವಂತೆ ಮನವಿ ಮಾಡಿದರು. ಪಾದಚಾರಿ ಮಾರ್ಗ, ರಸ್ತೆ ಒತ್ತುವರಿ ಮಾಡಿಕೊಂಡು ವ್ಯಾಪಾರ ಮಾಡಿದರೆ ಜನರು ಓಡಾಡುವುದುಹೇಗೆ. ಮಾರುಕಟ್ಟೆ ಪ್ರದೇಶಗಳಲ್ಲಿ ಜನರು ವಾಹನಗಳು ಸುಗಮವಾಗಿ ಓಡಾಡದಂತಾಗಿದೆ. ಯಾವುದೇಕಾರಣಕ್ಕೂ ವಿನಾಯಿತಿ ನೀಡುವ ಪ್ರಶ್ನೆಯಿಲ್ಲ. ಅಂಗಡಿ ಮಾಲೀಕರು ತಮ್ಮ ಅಂಗಡಿಯೊಳಗೆ ಸಾಮಗ್ರಿಗಳನ್ನಿಟ್ಟುಕೊಂಡು ವ್ಯಾಪಾರ ಮಾಡಬೇಕು ವಿನಃ ಪಾದಚಾರಿ ಮಾರ್ಗದಲ್ಲಿ ಅಲ್ಲ ಎಂದು ನಿತೇಶ ಪಾಟೀಲ ವ್ಯಾಪಾರಿಗಳಿಗೆ ಎಚ್ಚರಿಕೆ ನೀಡಿದರು.
ಅತಿಕ್ರಮಣ ತೆರವು ಎಲ್ಲೆಲ್ಲಿ? :
ಮಾರುಕಟ್ಟೆಯ ಹೃದಯ ಭಾಗವಾಗಿರುವ ದುರ್ಗದ ಬಯಲು, ಶಾ ಬಜಾರ್, ತಬೀಬ್ ಲ್ಯಾಂಡ್ ಮುಖ್ಯ ರಸ್ತೆಗಳಲ್ಲಿ ಒತ್ತುವರಿ ತೆರವು ಕಾರ್ಯಾಚರಣೆಮಾಡಲಾಯಿತು. ಸುಮಾರು 50-60 ಅಂಗಡಿಗಳ ಮುಂದೆ ಅಕ್ರಮವಾಗಿ ಮೆಟ್ಟಿಲು, ವ್ಯಾಪಾರದ ಸ್ಥಳವನ್ನಾಗಿ ಮಾಡಿಕೊಳ್ಳಲಾಗಿತ್ತು. ಇಂತಹ ಸ್ಥಳಗಳನ್ನು ಗುರುತಿಸಿ ಸರ್ವೇ ಅಧಿಕಾರಿಗಳಿಂದ ಅಳತೆ ಮಾಡಿಸಿ ಒತ್ತುವರಿ ಖಚಿತಪಡಿಸಿಕೊಂಡು ತೆರವುಗೊಳಿಸಲಾಯಿತು. ನಾವೇ ತೆರವುಗೊಳಿಸುತ್ತೇವೆ ಎಂಬ ಮಾಲೀಕರ ಮನವಿ ತಿರಸ್ಕರಿಸಿ ಪಾಲಿಕೆ ಜೆಸಿಬಿಯಿಂದ ಒಡೆದುತೆಗೆಯಲಾಯಿತು.
ಸಾರ್ವಜನಿಕರಿಂದ ಶಹಬ್ಬಾಸ್‌ಗಿರಿ :
ನಗರದ ಪ್ರಮುಖ ಮಾರುಕಟ್ಟೆ ದುರ್ಗದ ಬಯಲು ಸೇರಿದಂತೆ ವಿವಿಧ ರಸ್ತೆಗಳ ಒತ್ತುವರಿ ತೆರವು ಕಾರ್ಯಾಚರಣೆಗೆ ಸಾರ್ವಜನಿಕರಿಂದ ಮೆಚ್ಚುಗೆವ್ಯಕ್ತವಾಗಿದೆ. ಒತ್ತುವರಿಯಿಂದ ನಗರದ ವಿವಿಧೆಡೆದೊಡ್ಡ ರಸ್ತೆಗಳು ಕಿರಿದಾಗಿ ದ್ವಿಚಕ್ರ ವಾಹನಗಳೂಓಡಾದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಈಬಗ್ಗೆ ಸೂಕ್ತ ಗಮನ ಹರಿಸಬೇಕಾದ ಮಹಾನಗರಪಾಲಿಕೆ ಮೌನಕ್ಕೆ ಶರಣಾಗಿದ್ದರಿಂದ ಈ ಪರಿಸ್ಥಿತಿಉಂಟಾಗಿದೆ. ಒತ್ತುವರಿ ತೆರವು ಕಾರ್ಯ ಒಂದೆರಡು ದಿನಕ್ಕೆ ಸೀಮಿತವಾಗದೆ ಎಲ್ಲಾ ಕಡೆಗೂ ಆಗಬೇಕು. ಅನಧಿಕೃತ ಕಟ್ಟಡಗಳ ತೆರವಿಗೂ ಜಿಲ್ಲಾಡಳಿತ ಮುಂದಾಗಬೇಕು ಎಂದು ಜನರು ಆಗ್ರಹಿಸಿದ್ದಾರೆ.
ಮಾರುಕಟ್ಟೆ ಪ್ರದೇಶಗಳಲ್ಲಿ ಸಾಕಷ್ಟು ಒತ್ತುವರಿಯಾಗಿರುವ ಕುರಿತು ಸಾರ್ವನಿಕರಿಂದ ದೂರು ಬಂದಿದ್ದವು. ಈಗಾಗಲೇ ಅಂತಹಪ್ರದೇಶಗಳನ್ನು ಗುರುತಿಸಿ ಎಚ್ಚರಿಕೆ ಕೂಡನೀಡಲಾಗಿದೆ.ಪಾಲಿಕೆಯ ರಸ್ತೆ, ಪಾದಚಾರಿಮಾರ್ಗಗಳು ಜನರಿಗೆ ಮುಕ್ತವಾಗುವವರೆಗೂ ತೆರವುಕಾರ್ಯಾಚರಣೆ ನಿರಂತರವಾಗಿ ನಡೆಯಲಿದೆ. ಒತ್ತುವರಿ ತೆರವು ಕಾರ್ಯಾಚರಣೆ ಆಗಾಗ ನಡೆಸುವಂತೆ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. -ನಿತೇಶ ಪಾಟೀಲ, ಜಿಲ್ಲಾಧಿಕಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಧಾರವಾಡ: ಅವಸಾನದತ್ತ ಶತಮಾನದ ಕೆಲಗೇರಿ ಕೆರೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
BJP ಡಬಲ್ ಗೇಮ್; ವಕ್ಫ್ ಆಸ್ತಿ ರಕ್ಷಣೆ ಬಗ್ಗೆ ಬಿಜೆಪಿ ಪ್ರಣಾಳಿಕೆಯಲ್ಲಿ ಉಲ್ಲೇಖ: ಸಿದ್ದು
Hubli: ಅಪ್ರಾಪ್ತೆಯೊಂದಿಗೆ ಅನುಚಿತ ವರ್ತನೆ: ಮುಖ್ಯ ಪೇದೆ ವಿರುದ್ದ ಪೋಕ್ಸೋ ಕೇಸ್
Hubli: ಹಣಕಾಸು ಆಯೋಗದ ಅನ್ಯಾಯದ ಬಗ್ಗೆ ಬಿಜೆಪಿಯರಿಂದ ಮೌನ: ಸಿದ್ದರಾಮಯ್ಯ ಕಿಡಿ
MUST WATCH
ಹೊಸ ಸೇರ್ಪಡೆ
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Covid Scam: ತನಿಖೆಗೆ ಎಸ್‌ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.