ಉತ್ತಮ ಮೌಲ್ಯ ಅಳವಡಿಸಿಕೊಳ್ಳಿ
Team Udayavani, Apr 30, 2018, 5:14 PM IST
ಹಾರೂಗೇರಿ: ಮಕ್ಕಳಿಗೆ ಪ್ರೀತಿ ಕೊಡುವುದೇ ಶಿಕ್ಷಣದ ಮೊದಲನೇ ಪಾಠ. ಬಿಇಡಿ ಕೇವಲ ಶಿಕ್ಷಕರ ಹುದ್ದೆಯಲ್ಲ. ಅದು ಸಮಾಜದಲ್ಲಿ ಉತ್ತಮ ವ್ಯಕ್ತಿಗಳನ್ನು ನಿರ್ಮಾಣ ಮಾಡುತ್ತದೆ ಎಂದು ಮೂಡಲಗಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಚಾರ್ಯ ಆರ್.ಬಿ. ಕೊಕಟನೂರ ಹೇಳಿದರು.
ಸ್ಥಳೀಯ ಶ್ರೀ ಸಿದ್ಧಿವಿನಾಯಕ ಗ್ರಾಮೀಣ ಶಿಕ್ಷಣ (ಬಿಇಡಿ) ಮಹಾವಿದ್ಯಾಲಯದಲ್ಲಿ ನಡೆದ ಬಿಇಡಿ ಪ್ರಶಿಕ್ಷಣಾರ್ಥಿಗಳ ವಿದ್ಯಾರ್ಥಿ ಒಕ್ಕೂಟ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿ, ಸಹನೆ, ತಾಳ್ಮೆ, ಶಿಸ್ತು ಹಾಗೂ ಸಹಕಾರ ಉತ್ತಮ ಶಿಕ್ಷಕನಲ್ಲಿವೆ. ಶಿಕ್ಷಕರು ಮೌಲ್ಯಾಧಾರಿತ ಶಿಕ್ಷಣ ಮತ್ತು ಉತ್ತಮ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು ಎಂದರು.
ಮುಖ್ಯಅತಿಥಿಗಳಾಗಿ ಪಾಲ್ಗೊಂಡಿದ್ದ ಕುಡಚಿ ಬಿ.ಶಂಕರಾನಂದ ಕಲಾ ಮತ್ತು ವಾಣಿಜ್ಯ ಪ್ರಥಮ ದರ್ಜೆ ಕಾಲೇಜು ಪ್ರಾಚಾರ್ಯ ಅಶೋಕ ಕಾಂಬಳೆ ಮಾತನಾಡಿ, ಪ್ರಶಿಕ್ಷಣಾರ್ಥಿಗಳು ನಿರಂತರ ಓದು, ಪರಿಶ್ರಮ, ಬರಹ, ಹಾಗೂ ಸಂವಹನ ಕೌಶಲದ ಮೂಲಕ ತಮ್ಮ ಹಾಗೂ ಮಕ್ಕಳ ಭವಿಷ್ಯವನ್ನು ಕಟ್ಟಬೇಕು. ಪುಸ್ತಕಗಳನ್ನು ಪ್ರೀತಿಸಬೇಕು. ಪುಸ್ತಕ ನಮ್ಮನ್ನು ಪುರಸ್ಕಾರದ ಸ್ಥಾನದಲ್ಲಿರಿಸುತ್ತದೆ. ಸ್ನೇಹಿತರಂತೆ ಸದಾ ಜತೆಗಿರಬೇಕು ಎಂದರು.
ಸಂಸ್ಥೆ ಅಧ್ಯಕ್ಷ ಡಾ|ಎಲ್. ಎಸ್. ಜಂಬಗಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರಾಚಾರ್ಯ ಡಾ| ಡಿ.ಎಚ್.ಹುಸೇನಮಿಯ್ನಾ, ಪ್ರೊ| ಎನ್.ಬಿ. ನಾಗನೂರ, ಡಾ| ಪಿ.ಯು. ಪೂಜಾರಿ, ಪ್ರೊ|ಎಸ್. ಎಸ್. ನಿಡಗುಂದಿ, ಪ್ರೊ| ಎಸ್.ಬಿ. ಸದಲಗಿ, ಪ್ರೊ|ಕೆ.ಎಸ್. ಪೋತದಾರ, ಪ್ರೊ|ಎಂ.ಡಿ. ಕಂಬಾರ ಮೊದಲಾದ ಗಣ್ಯರು ವೇದಿಕೆಯಲ್ಲಿದ್ದರು. ಸಂಜೆ ಪ್ರಶಿಕ್ಷಣಾರ್ಥಿಗಳಿಂದ ಮನರಂಜನಾ ಕಾರ್ಯಕ್ರಮಗಳು ನಡೆದವು. ಅಕ್ಷತಾ ಬಾಬಣ್ಣವರ ಸ್ವಾಗತಿಸಿದರು. ಕೆ.ಎಂ. ಪೋತದಾರ ಮತ್ತು ವಿ.ಎಸ್. ದಳವಾಯಿ ನಿರೂಪಿಸಿದರು. ಮಹಾಂತೇಶ ಕಂಬಾರ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನಪ್ಪನವರ ವಿರುದ್ದ ಬೆಲ್ಲದ್ ಟೀಕೆ
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ
Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ
Manipal: ಮಾಹೆಯ ಪ್ರಸನ್ನ ಸ್ಕೂಲ್ ಆಪ್ ಪಬ್ಲಿಕ್ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ
Manipal: ಡಾ| ಸಬೀಹ ಭೂಮಿಗೌಡ ಸಹಿತ ನಾಲ್ವರಿಗೆ ದತ್ತಿ ಪ್ರಶಸ್ತಿ
PM Modi ಹ*ತ್ಯೆಗೆ ಯೋಜನೆ ಸಿದ್ಧ: ಕರೆ ಮಾಡಿದ್ದ ಮಹಿಳೆ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.